Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಜೆಟ್ ನಲ್ಲಿ ಕೊಡಗಿನ ಪ್ರವಾಸೋದ್ಯಮದ ಅಭಿವೃದ್ಧಿಗೆ ರೂ.2,500 ಕೋಟಿ ಮೀಸಲಿಡಲು ಎಸ್‍ಡಿಪಿಐ ಆಗ್ರಹ : ಬಡವರ ಬಿಪಿಎಲ್ ಕಾರ್ಡ್ ಮರಳಿಸಲು ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಜೆಟ್ ನಲ್ಲಿ ಕೊಡಗಿನ ಪ್ರವಾಸೋದ್ಯಮದ ಅಭಿವೃದ್ಧಿಗೆ ರೂ.2,500 ಕೋಟಿ ಮೀಸಲಿಡಲು ಎಸ್‍ಡಿಪಿಐ ಆಗ್ರಹ : ಬಡವರ ಬಿಪಿಎಲ್ ಕಾರ್ಡ್ ಮರಳಿಸಲು ಒತ್ತಾಯ*

ಫೆಬ್ರವರಿ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.19 NEWS DESK  : ಕರ್ನಾಟಕ ರಾಜ್ಯದ 2026-27ರ ಬಜೆಟ್‍ನಲ್ಲಿ ಕೊಡಗು ಜಿಲ್ಲೆಯ ಅಭವೃದ್ಧಿಗೆ 500 ಕೋಟಿ ರೂ.ಗಳ ವಿಶೇಷ ಪ್ಯಾಕೆಜ್ ಘೋಷಣೆ ಮಾಡಬೇಕು ಮತ್ತು ಪ್ರವಾಸೋದ್ಯಮದ ಅಭಿವೃದ್ಧಿಗೆ ರೂ.2,500 ಕೋಟಿ ಬಿಡುಗಡೆಗೊಳಿಸಬೇಕು ಎಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಬಜೆಟ್ ನ ಬೇಡಿಕೆಗಳ ಕುರಿತು ಕರಪತ್ರದ ಮೂಲಕ ಸರಕಾರದ ಗಮನ ಸೆಳೆಯಲಾಗುವುದು ಎಂದರು. ಕೊಡಗಿಗೆ ಅತೀ ಅಗತ್ಯವಾಗಿರುವ ರೈಲು ಸಂಪರ್ಕವನ್ನು ಕೇಂದ್ರ ಹಾಗೂ ರಾಜ್ಯದ ಪ್ರತಿಷ್ಠೆಯ ಕಿತ್ತಾಟದಿಂದ ಕೈ ಬಿಡಲಾಗಿದೆ. ಈ ಬಜೆಟ್‍ನಲ್ಲಿ ಕೊಡಗಿಗೆ ರೈಲು ಸಂಪರ್ಕಕ್ಕಾಗಿ ಬೇಕಿರುವ ಅನುದಾನವನ್ನು ಕರ್ನಾಟಕ ಸರಕಾರ ಮೀಸಲಿಟ್ಟು ಪ್ರಕ್ರಿಯೆ ಪ್ರಾರಂಭಿಸಬೇಕು. ಕೊಡಗಿನ ಲೋಕಸಭಾ ಸದಸ್ಯರು ಕೇಂದ್ರದೊಂದಿಗೆ ಚರ್ಚಿಸಿ ಸಹಕರಿಸಬೇಕು. ತುರ್ತು ಆರೋಗ್ಯ ಸೇವೆಗಾಗಿ ಜಿಲ್ಲೆಗೆ ಏರ್ ಆಂಬ್ಯುಲೆನ್ಸ್ ನೀಡಬೇಕು. ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅನುದಾನ ಮೀಸಲಿಡಬೇಕು. ವನ್ಯಜೀವಿ ಹಾಗೂ ಮಾನವ ಸಂಘರ್ಷ ನಿಯಂತ್ರಣಕ್ಕೆ ವಿಶೇಷ ಅನುದಾನ ನೀಡಬೇಕು ಮತ್ತು ಶಾಶ್ವತ ಪರಿಹಾರ ಸೂತ್ರ ಕಂಡುಕೊಳ್ಳಬೇಕು. ಕಾವೇರಿ ನದಿ ಕಲ್ಮಶ ತಡೆಗಟ್ಟಲು ಯೋಜನೆ ರೂಪಿಸಬೇಕು. ರೈತರ ಭೂಮಿಯನ್ನು “ಸಿ ಮತ್ತು ಡಿ” ಗೆ ತಂದು ಸೆಕ್ಷನ್ 4ರ ಅಡಿಯಲ್ಲಿ ಸರ್ವೆಗೆ ಮುಂದಾಗಿರುವ ಪ್ರಕ್ರಿಯೆಯನ್ನು ಕೈ ಬಿಟ್ಟು ಸಮಸ್ಯೆ ನಿವಾರಣೆ ಆಗುವವರೆಗೂ ನೊಂದ ರೈತರಿಗೆ 25 ಸಾವಿರ ರೂ. ಮಾಸಾಶನ ಜಾರಿಗೊಳಿಸಬೇಕು. ಬಾಕಿ ಇರುವ ನಮೂನೆ 50, 53, 57, 94 ಸಿ ಹಾಗೂ 94 ಸಿಸಿ ತುರ್ತಾಗಿ ವಿಲೇವಾರಿಗೊಳಿಸಲು ಫಾಸ್ಟ್ ಟ್ರಾಕ್ ಸಮಿತಿ ರಚಿಸಬೇಕು. ಮಡಿಕೇರಿ ನಗರದ ನಿವೇಶನ ರಹಿತ ನಿವಾಸಿಗಳಿಗೆ ನಿವೇಶನ ಗುರುತಿಸಿ ವಸತಿ ಸೌಲ್ಯಭ್ಯ ಒದಗಿಸಬೇಕು. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ರೂ.15 ಸಾವಿರ ಕೋಟಿ ಮೀಸಲಿಡಬೇಕು. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ 134 ಭರವಸೆಗಳನ್ನು ಈ ಬಾರಿಯ ಬಜೆಟ್‍ನಲ್ಲಿ ಸಮಗ್ರವಾಗಿ ಈಡೇರಿಸುವ ಮೂಲಕ ಸರಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು. *ಬಿಪಿಎಲ್ ಅಸಮಾಧಾನ* ಉಚಿತ ಗ್ಯಾರಂಟಿ ಯೋಜನೆಗಳು ಮತ್ತು ಆದಾಯ ತೆರಿಗೆ ಸಲ್ಲಿಕೆಯನ್ನು ನೆಪ ಮಾಡಿಕೊಂಡು ಅರ್ಹ ಬಿ.ಪಿ.ಎಲ್ ಕಾರ್ಡ್‍ಗಳನ್ನು ರದ್ದುಗೊಳಿಸಲಾಗುತ್ತಿದೆ. ಇದು ಸರಕಾರ ಬಡವರಿಗೆ ಮಾಡುತ್ತಿರುವ ದೊಡ್ಡ ಅನ್ಯಾಯವಾಗಿದೆ ಎಂದು ಅಮೀನ್ ಮೊಹಿಸಿನ್ ಆರೋಪಿಸಿದರು. ನಾಗರಿಕ ಸೇವೆ, ಬಡತನ ನಿರ್ಮೂಲನೆ, ಆಹಾರ, ಆರೋಗ್ಯ ಭದ್ರತೆ, ಶಿಕ್ಷಣ, ಉದ್ಯೋಗಕ್ಕೆ ಉತ್ತೇಜನೆ ಪ್ರತಿ ಸರ್ಕಾರದ ಜವಾಬ್ದಾರಿಯಾಗಿದೆ. ಕಲ್ಯಾಣ ರಾಜ್ಯದ ಪರಿಕಲ್ಪನೆಗೆ ಒತ್ತುಕೊಟ್ಟು ನಾಗರಿಕ ಸೇವೆಗೆ ಸರ್ಕಾರಗಳು ಮುತುವರ್ಜಿ ವಹಿಸಬೇಕು. ವಿಶೇಷ ಆರ್ಥಿಕ ದುರ್ಬಲ ವರ್ಗದ ಆರ್ಥಿಕ ಮಿತಿ 8 ಲಕ್ಷಕ್ಕೆ ನಿಗದಿಪಡಿಸಿರುವ ಸರಕಾರ ಬಿ.ಪಿ.ಎಲ್ ಪಡಿತರ ಕಾರ್ಡ್ ಪಡೆಯಲು 1.25 ಲಕ್ಷದ ಒಳಗೆ ಆದಾಯ ಹೊಂದಿರುವವರು ಮಾತ್ರ ಬಡವರು ಎಂದು ನಿಯಮ ಜಾರಿ ಮಾಡಿರುವುದು ನಾಗರಿಕ ಸೇವೆಯ ಪರಿಕಲ್ಪನೆಗೆ ವಿರುದ್ಧವಾಗಿದೆ ಎಂದು ಟೀಕಿಸಿದರು. ಈಗಾಗಲೇ ಜಿಲ್ಲೆಯಲ್ಲಿ 4,500 ಬಿ.ಪಿ.ಎಲ್ ಕಾರ್ಡ್‍ಗಳನ್ನು ರದ್ದುಗೊಳಿಸಿದ್ದು ಪ್ರಕ್ರಿಯೆ ಮುಂದುವರಿಸುತ್ತಿರುವುದು ಸರಿಯಲ್ಲ. ರದ್ದುಗೊಳಿಸಿದ ಎಲ್ಲಾ ಬಿಪಿಎಲ್ ಕಾರ್ಡ್‍ಗಳನ್ನು ತಕ್ಷಣ ಬಡವರಿಗೆ ಮರಳಿ ನೀಡಬೇಕು ಎಂದು ಆಗ್ರಹಿಸಿದರು.
ಮಡಿಕೇರಿ ಶಾಸಕರು ವಸತಿ ಸೇರಿದಂತೆ ಬಡವರ ಮೂಲಭೂತ ಹಕ್ಕುಗಳ ಕುರಿತು ಅಧಿವೇಶನದಲ್ಲಿ ಚರ್ಚಿಸದೆ ಕಾಫಿ ತೋಟಗಳಲ್ಲಿ ಬಾಂಗ್ಲಾ ಕಾರ್ಮಿಕರಿದ್ದಾರೆ ಎಂದು ಜವಾಬ್ದಾರಿ ಮರೆತು ಮಾತನಾಡುತ್ತಿದ್ದಾರೆಂದು ಟೀಕಿಸಿದರು. ಉಪಾಧ್ಯಕ್ಷ ಎಂ.ಕೆ.ಮನ್ಸೂರ್ ಆಲಿ ಮಾತನಾಡಿ ಜಿಲ್ಲೆಯಲ್ಲಿ ಪಾಸ್ ಪೋರ್ಟ್ ಕಚೇರಿ ಆರಂಭಿಸಬೇಕು, ಮಳೆಹಾನಿ ಸಂತ್ರಸ್ತರಿಗಾಗಿ ನಿರ್ಮಿಸಿದ ಮನೆಗಳು ಪಾಳು ಬಿದ್ದಿದ್ದು, ಇವುಗಳನ್ನು ಬಡವರಿಗೆ ಹಂಚಿಕೆ ಮಾಡಬೇಕು. ಮಡಿಕೇರಿ ನಗರದಲ್ಲಿ ಮತ್ತೊಂದು ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ನಗರದ ಜಿಲ್ಲಾಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗಳು ನಡೆಯದೆ ಹಲವು ದಿನಗಳೇ ಕಳೆದಿದ್ದು, ಶಾಸಕರು ಹಾಗೂ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಪರಿಹಾರ ಸೂಚಿಸಬೇಕು. ಸಮಸ್ಯೆಗೆ ಕಾರಣಕರ್ತರಾದವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು. ಸದಸ್ಯ ಅಬ್ದುಲ್ ಅಡ್ಕಾರ್ ಮಾತನಾಡಿ ಶಾಸಕ ಡಾ.ಮಂತರ್ ಗೌಡ ಅವರು ಸಂಘ ಪರಿವಾರದ ನೂರು ವರ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಜಾತ್ಯಾತೀತ ಮತಗಳಿಗೆ ಅನ್ಯಾಯ ಮಾಡಿದ್ದಾರೆ, ಇವರು ಜನರ ಕ್ಷಮೆಯಾಚಿಸಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಮೇರಿ ವೇಗಸ್, ನಗರಾಧ್ಯಕ್ಷ ಮೊಹಮ್ಮದ್ ಅಲಿ ಹಾಗೂ ಸದಸ್ಯ ಜಲೀಲ್ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.