Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಮಾರು 3 ಸಾವಿರ ನಿವೇಶನ ಹಕ್ಕುಪತ್ರ ನೀಡಲು ನಿರ್ಧಾರ : ಶಾಸಕ ಎ.ಎಸ್.ಪೊನ್ನಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಮಾರು 3 ಸಾವಿರ ನಿವೇಶನ ಹಕ್ಕುಪತ್ರ ನೀಡಲು ನಿರ್ಧಾರ : ಶಾಸಕ ಎ.ಎಸ್.ಪೊನ್ನಣ್ಣ

ಫೆಬ್ರವರಿ 21, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.21 NEWS DESK : ಇದೇ ಬಜೆಟ್ ಅಧಿವೇಶನ ನಂತರ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 3 ಸಾವಿರ ನಿವೇಶನ ಹಕ್ಕುಪತ್ರ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ನಿವೇಶನ‌ ರಹಿತರಿಗೆ ನಿವೇಶನ ಹಕ್ಕುಪತ್ರ ನೀಡುವ ಬಗ್ಗೆ ವಿವಿಧ ಇಲಾಖೆ ಅಧಿಕಾರಿಗಳ ಜತೆ ಪೊನ್ನಂಪೇಟೆಯ ತಾ.ಪಂ.ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ನವೆಂಬರ್, ಡಿಸೆಂಬರ್ ತಿಂಗಳಲ್ಲಿಯೇ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿತ್ತು, ಆದರೆ ತಾಂತ್ರಿಕ ಕಾರಣಗಳಿಂದ ಈ ಆಗಿರಲಿಲ್ಲ ಎಂದರು.  ಸದ್ಯ ಮಾರ್ಚ್ 27 ರ ನಂತರ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ‌ ಹಕ್ಕುಪತ್ರ ವಿತರಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು. ಸಮಗ್ರ ಗಿರಿಜನ ಕಲ್ಯಾಣ ಇಲಾಖೆಯಿಂದ ಲೈನ್ ಮನೆಗಳಲ್ಲಿ ವಾಸಿಸುವ ಸುಮಾರು 1125 ಕುಟುಂಬಗಳಿಗೆ, ಹಾಗೆಯೇ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆ, ಜತೆಗೆ ಸ್ಥಳೀಯ‌ ಸಂಸ್ಥೆ ವ್ಯಾಪ್ತಿ ಸೇರಿದಂತೆ ಒಟ್ಟು ಸುಮಾರು 3 ಸಾವಿರ ನಿವೇಶನ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದೆ ಎಂದು ಶಾಸಕರು ಹೇಳಿದರು. ನಿವೇಶನ ಹಕ್ಕುಪತ್ರ ವಿತರಣೆಗೆ ವಿಳಂಬ ಆಗಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ಶಾಸಕರು, ತಾಂತ್ರಿಕ ತೊಂದರೆಗಳನ್ನು ಒಂದು ವಾರದಲ್ಲಿ ಬಗೆಹರಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ನಿವೇಶನ ರಹಿತರ ಫಲಾನುಭವಿಗಳ ಪಟ್ಟಿ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ‌ ಜತೆ ಹಲವು ಬಾರಿ ಚರ್ಚಿಸಲಾಗಿತ್ತು, ಆದರೆ ಇದುವರೆಗೆ ನಿರೀಕ್ಷಿತ ಪ್ರಗತಿ ಸಾಧಿಸದಿರುವುದಕ್ಕೆ ಎ.ಎಸ್.ಪೊನ್ನಣ್ಣ ಅವರು ಅಸಮಾಧಾನ ವ್ಯಕ್ತಪಡಿಸಿದರು.  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ನಿವೇಶನ ರಹಿತರಿಗೆ ನಿವೇಶನ ನೀಡಲೇಬೇಕು. ಆ ದಿಸೆಯಲ್ಲಿ ಅಧಿಕಾರಿಗಳು ಕಾಲಮಿತಿಯಲ್ಲಿ ಕರ್ತವ್ಯ ನಿರ್ವಹಿಸಿ, ಸಿದ್ಧತೆ ಮಾಡಿಕೊಳ್ಳಬೇಕು ಎಂದರು.  ವಿವಿಧ ಗ್ರಾ.ಪಂ. ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ಹಂಚಿಕೆ ಅಂಕಿ ಅಂಶಗಳ ಬಗ್ಗೆ ಶಾಸಕರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಮೋಹನ್ ರಾಜ್ ಅವರು ವಸತಿ ಇಲಾಖೆಯಲ್ಲಿ ಅನುಮೋದನೆಗೆ ಬಾಕಿ ಇರುವ ಹಲವು ಕಡತವನ್ನು ಸ್ಥಳದಲ್ಲಿಯೇ ವಿವೇವಾರಿ ಮಾಡಿದರು.  ಬಡವರಲ್ಲಿ ಕಡು ಬಡವರಿದ್ದು, ಅಂತಹ ಕುಟುಂಬಕ್ಕೆ ಆಧಾರ್ ಹಾಗೂ ಚುನಾವಣಾ ಗುರುತಿನ ಚೀಟಿ ಮಾಡಿಸಬೇಕು ಎಂದು ಸಲಹೆ ನೀಡಿದರು. ಸಮಗ್ರ ಗಿರಿಜನ ಯೋಜನಾ ಇಲಾಖೆ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ಮಾಹಿತಿ ನೀಡಿ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ವ್ಯಾಪ್ತಿಯಲ್ಲಿ 116, ಕಳತ್ಮಾಡು ಗ್ರಾಮ ವ್ಯಾಪ್ತಿಯಲ್ಲಿ 127, ಪೊನ್ನಂಪೇಟೆ ತಾಲ್ಲೂಕಿನ ಬಾಳುಗೋಡು ಗ್ರಾಮ ವ್ಯಾಪ್ತಿಯಲ್ಲಿ 37, ಬಿರುನಾಣಿ ಗ್ರಾಮ ವ್ಯಾಪ್ತಿಯಲ್ಲಿ 621 ಹಾಗೂ ಕುರ್ಚಿ ಗ್ರಾಮ‌ ವ್ಯಾಪ್ತಿಯಲ್ಲಿ 224 ಒಟ್ಟು 1125 ಅರ್ಹ ಕುಟುಂಬಕ್ಕೆ ನಿವೇಶನ ಹಕ್ಕುಪತ್ರ ನೀಡಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಒಟ್ಟಾರೆ ಶಾಸಕರ ಪ್ರಯತ್ನದಿಂದ 38 ಎಕರೆ ಭೂಮಿಯಲ್ಲಿ ಲೈನ್ ಮನೆಗಳ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸಲು ಮುಂದಾಗಲಾಗಿದೆ ಎಂದು ಎಸ್. ಹೊನ್ನೇಗೌಡ ಅವರು ವಿವರಿಸಿದರು. ಮಡಿಕೇರಿ ತಾ.ಪಂ.ಇಒ ಶೇಖರ್ ಮಾಹಿತಿ ನೀಡಿ ತಾಲ್ಲೂಕಿನಲ್ಲಿ ನಿವೇಶನ ರಹಿತ 528 ಅರ್ಜಿಗಳಲ್ಲಿ 460 ಕುಟುಂಬಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಉಳಿದವು ತಾಂತ್ರಿಕ ಕಾರಣದಿಂದ ಬಾಕಿ ಇದೆ ಎಂದು ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಕೆ.ಪಿ.ಮೋಹನ್ ರಾಜ್ ಅವರು ಸ್ಥಳದಲ್ಲಿಯೇ ಅನುಮೋದಿಸಿದರು. ವಿರಾಜಪೇಟೆ ತಾ.ಪಂ.ಇಒ ಅಪ್ಪಣ್ಣ ಮಾಹಿತಿ ನೀಡಿ 354 ಅರ್ಜಿಗಳಲ್ಲಿ 239 ಅರ್ಜಿಗಳಿಗೆ ಅನುಮೋದನೆ ದೊರೆತಿದೆ.  ಹಾಗೆಯೇ ಪೊನ್ನಂಪೇಟೆ ತಾಲ್ಲೂಕಿನಲ್ಲಿ 370 ಗುರಿಯಲ್ಲಿ 231 ನಿವೇಶನ ಹಕ್ಕುಪತ್ರ ನೀಡಲು ಸಿದ್ಧವಾಗಿದೆ ಎಂದರು.ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ನಾಚಪ್ಪ ಅವರು ಪೌರಕಾರ್ಮಿಕರಿಗೆ ನಿವೇಶನ‌ ಹಕ್ಕುಪತ್ರ ಹಾಗೂ ಮನೆ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು. ತಹಶೀಲ್ದಾರರಾದ ಪ್ರವೀಣ್ ಕುಮಾರ್, ಶ್ರೀಧರ ಅವರು ತಮ್ಮ ಹಂತದಲ್ಲಿ ಆಗಬೇಕಿರುವ ಕಾರ್ಯಗಳ ಬಗ್ಗೆ ವಿವರಿಸಿದರು. ಗೋಣಿಕೊಪ್ಪದಲ್ಲಿ ಪೌರಕಾರ್ಮಿಕರಿಗೆ ನಿವೇಶನ ಹಂಚಿಕೆ ಬಗ್ಗೆ‌ ಪಿಡಿಒ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿವೇಶನ ಹಕ್ಕುಪತ್ರ ಹಂಚಿಕೆ ಸಂಬಂಧಿಸಿದಂತೆ ಗಂಭೀರವಾಗಿ ಪರಿಗಣಿಸಿ, ಕಾಲಮಿತಿಯಲ್ಲಿ ಪರಿಹರಿಸಲಾಗುವುದು ಎಂದು ಹೇಳಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಜಿ.ಪಂ.ವ್ಯಾಪ್ತಿಯಲ್ಲಿ ನಿವೇಶನ ಹಕ್ಕುಪತ್ರ ನೀಡಲು ಬಾಕಿ ಇರುವ ಸುಮಾರು 622 ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದರು. ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಭೂದಾಖಲೆಗಳ‌ ಸಹಾಯಕ ನಿರ್ದೇಶಕರು ಹಲವು ಮಾಹಿತಿ ನೀಡಿದರು.  ಉಪ ಅರಣ್ಯ‌ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಡಳಿತ ಮನವಿ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ಹಸಿರು ಪಟಾಕಿಗಳ ಬಳಕೆ ಕಡ್ಡಾಯ

ನವೆಂಬರ್ 5, 2026

ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್

ನವೆಂಬರ್ 5, 2026

ವನ್ಯಜೀವಿ ಹೆಜ್ಜೆ ಗುರುತು ಪತ್ತೆ

ನವೆಂಬರ್ 5, 2026

ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್

ನವೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.5: ಕೊಡಗು ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿನ ಜನರ ಸಂಸ್ಕೃತಿ, ಜೀವನಶೈಲಿ ಹಾಗೂ ಆಚಾರ-ವಿಚಾರಗಳು…

ವನ್ಯಜೀವಿ ಹೆಜ್ಜೆ ಗುರುತು ಪತ್ತೆ

ನವೆಂಬರ್ 5, 2026

ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಯ ಬರೆ: ಜನಸಾಮಾನ್ಯರು ಸಂಕಷ್ಟದಲ್ಲಿ – ರಾಷ್ಟ್ರಪತಿ ಆಳ್ವಿಕೆಗೆ ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ

ನವೆಂಬರ್ 5, 2026

ಸುಂಟಿಕೊಪ್ಪದಲ್ಲಿ ದಿವಂಗತ ಬಿ.ಜಿ. ರಘುನಾಥ್ ನಾಯ್ಕ ಸ್ಮಾರಕ ದತ್ತಿ ನಿಧಿ ಕಾರ್ಯಕ್ರಮ

ನವೆಂಬರ್ 5, 2026

ಸುಂಟಿಕೊಪ್ಪದಲ್ಲಿ ಸಮಸ್ಯೆಗಳ ಸರಮಾಲೆ: ವೇವ್ ಸಂಸ್ಥೆ ಅಸಮಾಧಾನ; ತ್ಯಾಜ್ಯ ವಿಲೇವಾರಿ, ಹದಗೆಟ್ಟ ರಸ್ತೆಗಳು, ವೈದ್ಯರ ಕೊರತೆಗೆ ಆಕ್ರೋಶ – ಸಮಸ್ಯೆ ಪರಿಹಾರವಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ

ನವೆಂಬರ್ 5, 2026

ಐದು ದಶಕಗಳ ಭತ್ತದ ಕೃಷಿ ಅನುಭವಕ್ಕೂ ಈ ಬಾರಿ ಕೈಕೊಟ್ಟ ಫಸಲು; ಆರ್‌ಎನ್‌ಆರ್ ಭತ್ತದ ತಳಿಯ ಇಳುವರಿ ಕುಸಿತ: ರೈತ ಪಟ್ಟೆಮನೆ ಉದಯಕುಮಾರ್ ಅಳಲು

ನವೆಂಬರ್ 5, 2026

ಪನ್ಯ ತೋಟದಲ್ಲಿ ಹುಲಿ ಅಥವಾ ಚಿರತೆ ಹೆಜ್ಜೆ ಗುರುತು ಪತ್ತೆ : ಸಾರ್ವಜನಿಕರಲ್ಲಿ ಆತಂಕ

ನವೆಂಬರ್ 5, 2026

ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವದ ಅಮೃತ ಮಹೋತ್ಸವ ಆಚರಣೆ; ಕೃತಕ ಬುದ್ಧಿಮತ್ತೆಯ ವ್ಯವಸ್ಥೆ ನಮಗೇ ಬುದ್ಧಿ ಕಲಿಸುವಂತಾಗಿದೆ: ಅನಿಲ್ ಹೆಚ್.ಟಿ. ಆತಂಕ

ನವೆಂಬರ್ 5, 2026

ಕುಶಾಲನಗರ ‘ಕೂಡಾ’ ನೂತನ ಸದಸ್ಯ ಕಾರ್ಯದರ್ಶಿಯಾಗಿ ಪಿ.ವಿ.ದೀಪಕ್ ಅಧಿಕಾರ ಸ್ವೀಕಾರ

ನವೆಂಬರ್ 5, 2026

ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.