Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
  • ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
  • *ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*
  • *ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*
  • *ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೃದಯ ಸ್ತಂಭನವಾದಾಗ ಜೀವ ಉಳಿಸಲು ಪ್ರತಿ ನಿಮಿಷ, ಪ್ರತಿ ಸೆಕೆಂಡ್ ಮುಖ್ಯವಾಗಿರುತ್ತದೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೃದಯ ಸ್ತಂಭನವಾದಾಗ ಜೀವ ಉಳಿಸಲು ಪ್ರತಿ ನಿಮಿಷ, ಪ್ರತಿ ಸೆಕೆಂಡ್ ಮುಖ್ಯವಾಗಿರುತ್ತದೆ*

ಫೆಬ್ರವರಿ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.23 : ಹೃದಯ ಸ್ತಂಭನವಾದ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ನೀಡಿದಲ್ಲಿ ಜೀವ ಉಳಿಸಬಹುದಾಗಿದ್ದು, ಇಂತಹ ತುರ್ತು ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರು ಅರಿವು ಹೊಂದಿರಬೇಕೆಂದು ಮೈಸೂರು ಮಣಿಪಾಲ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ತಜ್ಞರಾದ ಡಾ. ಅರುಣ್ ಹೇಳಿದರು. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಪತ್ರಿಕಾಭವನದಲ್ಲಿ ಭಾನುವಾರ ಪತ್ರಕರ್ತರಿಗೆ ಆಯೋಜಿಸಲಾಗಿದ್ದ ಜೀವ ರಕ್ಷಕ ಕೌಶಲ್ಯ ಕಾರ್ಯಾಗಾರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲರೂ ಜೀವ ರಕ್ಷಣೆಯ ಅರಿವು ಹೊಂದಿಕೊಳ್ಳಬೇಕೆನ್ನುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೀವ ಉಳಿಸಲು ಪ್ರತಿ ನಿಮಿಷ, ಪ್ರತಿ ಸೆಕೆಂಡ್ ಮುಖ್ಯವಾಗಿರುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಹೃದಯ ಸ್ತಂಭನವಾದಲ್ಲಿ ಸಾರ್ವಜನಿಕರು ಏನು ಮಾಡಬೇಕೆಂದು ಅರಿತುಕೊಂಡರೆ ಜೀವ ಉಳಿಸಬಹುದಾಗಿದೆ. ಈ ಸಂಬಂಧ ವಿದೇಶದಲ್ಲಿ ಸಾರ್ವಜಕರಿಗೆ ತರಬೇತಿ ನೀಡಲಾಗುತ್ತಿದೆ. ನಮ್ಮ ದೇಶದಲ್ಲಿ ಅರಿವು ಮೂಡಿಸುವುದು ಬಹಳ ಕಷ್ಟವಾಗಿದ್ದರೂ ಪ್ರಯತ್ನ ಮುಂದುವರೆಸಿದ್ದೇವೆ. ಸಾರ್ವಜನಿಕರು ತುರ್ತು ಚಿಕಿತ್ಸೆಯ ಬಗ್ಗೆ ಅರಿತುಕೊಂಡು ಜೀವ ಉಳಿಸಲು ಪ್ರಯತ್ನಿಸಬೇಕೆಂದು ಕರೆ ನೀಡಿದರು. ಮೈಸೂರು ಮಣಿಪಾಲ್ ಆಸ್ಪತ್ರೆಯ ಕಾರ್ಪೋರೇಟ್ ಸೇಲ್ಸ್ ಎಕ್ಸ್‌ಕ್ಯೂಟೀವ್ ಉಮರ್ ಬೇಗ್ ಮಾತನಾಡಿ, ಖಾಯಿಲೆ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತಲೂ ಮೊದಲೇ ಮುನ್ನಚ್ಚರಿಕೆ ವಹಿಸುವುದು ಸೂಕ್ತ. ಆದ್ದರಿಂದ ಸೂಕ್ತ ಕಾಲದಲ್ಲಿ ಪ್ರತಿಯೊಬ್ಬರು ತಮ್ಮ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಖಾಯಿಲೆಗಳು ಹೆಚ್ಚಾಗಿವೆ. ನಮ್ಮ ಆಹಾರ ಕ್ರಮಗಳು ಕೂಡ ಆರೋಗ್ಯದ ವಿಚಾರದಲ್ಲಿ ಬಹಳ ಮುಖ್ಯ. ಹಳ್ಳಿಗಳಲ್ಲಿ ದೇಶೀಯ ಆಹಾರ ಸೇವನೆಯಿಂದ ಖಾಯಿಲೆಗಳು ಕಡಿಮೆಯಿದ್ದರೆ ನಗರ ಪ್ರದೇಶಗಳಲ್ಲಿ ಹೆಚ್ಚಾಗಿವೆ. ಆದ್ದರಿಂದ ಆಹಾರ ಕ್ರಮದಲ್ಲಿ ಬದಲಾವಣೆ ಅಗತ್ಯ ಎಂದ ಅವರು, ಖಾಸಗಿ ಆಸ್ಪತ್ರೆಗಳು ಪತ್ರಕರ್ತರಿಗೆ ಚಿಕಿತ್ಸೆಗೆ ಹೆಚ್ಚಿನ ರಿಯಾಯಿತಿ ನೀಡಿದಲ್ಲಿ ಅನುಕೂಲವಾಗಲಿದೆ ಎಂದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ ಮಾತನಾಡಿ, ಪತ್ರಕರ್ತರ ಆರೋಗ್ಯ ವಿಚಾರಿಸುವವರ ಸಂಖ್ಯೆ ವಿರಳ. ಸದಾ ಒತ್ತಡದ ಜೀವನ ಸಾಗಿಸುವ ಪತ್ರಕರ್ತರು ದಿಡೀರ್ ಅನಾರೋಗ್ಯಕ್ಕೊಳಗಾಗುತ್ತಿದ್ದಾರೆ. ಎಚ್ಚರಿಕೆ ತೆಗೆದುಕೊಳ್ಳುವಲ್ಲಿ ಎಡವುತ್ತಿರುವುದು ಕೂಡ ಇದಕ್ಕೆ ಕಾರಣ. ಈ ನಿಟ್ಟಿನಲ್ಲಿ ಮೈಸೂರಿನ ಮಣಿಪಾಲ್ ಆಸ್ಪತ್ರೆ ವತಿಯಿಂದ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿಸುವುದರೊಂದಿಗೆ ತುರ್ತು ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡುತ್ತಿರುವುದು ಶ್ಲಾಘನೀಯ. ವೈದ್ಯರ ಸಲಹೆಗಳನ್ನು ಪಾಲಿಸಿ ಪತ್ರಕರ್ತರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, ಯುವ ಜನತೆಯಲ್ಲಿ ಆರೋಗ್ಯದ ಸಮಸ್ಯೆ ಹೆಚ್ಚುತ್ತಿದೆ. ವರ್ಷಕ್ಕೆ ಒಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಮಣಿಪಾಲ್ ಆಸ್ಪತ್ರೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಪತ್ರಕರ್ತರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದ್ದು, ನಿರ್ಲಕ್ಷ್ಯ ಮಾಡಿದರೆ ವಾಸಿಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ಖಾಯಿಲೆ ಆರಂಭದಲ್ಲಿಯೇ ಚಿಕಿತ್ಸೆ ಪಡೆಯುವಂತಾಗಬೇಕು ಎಂದರು.
ಕೊಡಗು ಪ್ರೆಸ್ ಕ್ಲಬ್ ಹಿರಿಯ ಉಪಾಧ್ಯಕ್ಷ ನವೀನ್ ಡಿಸೋಜ ಸ್ವಾಗತಿಸಿದರು. ಸದಸ್ಯ ಹೆಚ್.ಜೆ. ರಾಕೇಶ್ ನಿರೂಪಿಸಿ ವಂದಿಸಿದರು. ಇದೇ ಸಂದರ್ಭ ಮೈಸೂರು ಮಣಿಪಾಲ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ತಜ್ಞರಾದ ಡಾ. ಅರುಣ್ ತುರ್ತು ಸಂದರ್ಭದಲ್ಲಿ ಜೀವ ಉಳಿಸಲು ಮಾಡಬೇಕಾದ ಕಾರ್ಯದ ಕುರಿತು ಸವಿವರವಾಗಿ ವಿವರಿಸಿದರು. ಬಳಿಕ ಪತ್ರಕರ್ತರ ಉಚಿತ ಆರೋಗ್ಯ ತಪಾಸಣೆ ನಡೆಯಿತು. ವಿವಿಧೆಡೆಯಿಂದ ಆಗಮಿಸಿದ್ದ ಪತ್ರಕರ್ತರು ಆರೋಗ್ಯ ತಪಾಸಣೆ ಮಾಡಿಕೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಏ.18 NEWS DESK  :  ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*

ಏಪ್ರಿಲ್ 18, 2026

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ನಮ್ಮ ಧ್ವನಿಯ ಆರೈಕೆ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ*

ಏಪ್ರಿಲ್ 18, 2026

*ಸುಂಟಿಕೊಪ್ಪದಲ್ಲಿ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ*

ಏಪ್ರಿಲ್ 18, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕೌಶಲ್ಯ ಕಾರ್ಯಾಗಾರ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.