Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಈ ಬಜೆಟ್ ನಲ್ಲೂ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಈ ಬಜೆಟ್ ನಲ್ಲೂ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ

ಫೆಬ್ರವರಿ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೀದರ್ NEWS DESK ಫೆ 23 : ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನದಲ್ಲಿ ತಾಂತ್ರಿಕ ಮತ್ತು ನೈತಿಕ‌ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪಿ ಕರೆ‌ ನೀಡಿದರು.‌ ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಸಮ್ಮೇಳನದ ವೆಬ್ ಸೈಟ್” ಉದ್ಘಾಟಿಸಿ ಮಾತನಾಡಿದರು. ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ “ಮಂಥನ” ದ ವೇದಿಕೆಯಾಗಬೇಕು ಎಂದು ಕರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಮ್ಮೇಳನಗಳು ಒಂದು ಅರ್ಥದಲ್ಲಿ “ಪಿಟ್ ಸ್ಟಾಪ್ಸ್” ಎಂದು ಹೇಳಬಹುದು. ರೇಸಿಂಗ್ ಕಾರುಗಳು ತಮ್ಮ ಓಟದ ನಡುವೆ ಟೈರ್ ಗಳನ್ನು ಬದಲಾಯಿಸಲು, ಇಂಧನ ತುಂಬಿಸಿಕೊಳ್ಳಲು ಮಾರ್ಗಮಧ್ಯದಲ್ಲಿ ಇರುವ ನಿಲ್ದಾಣಗಳನ್ನು ಪಿಟ್ ಸ್ಟಾಪ್ಸ್ ಎಂದು ಕರೆಯುತ್ತಾರೆ. ವೈರಲ್ ಸುದ್ದಿಗಳ ವೇಗದಲ್ಲಿ ಓಡುತ್ತಿರುವ  ಉದ್ಯಮಕ್ಕೆ ಈಗ ಇಂಥಾ ಪಿಟ್ ಸ್ಟಾಪ್ಸ್ ಗಳ ಅಗತ್ಯ ತುಂಬ ಇದೆ ಎಂದು ವಿವರಿಸಿದರು. ಈ ಸಮ್ಮೇಳನ ವೃತ್ತಿಪರರಿಗೆ ತಮ್ಮ ನೋಟಗಳನ್ನು, ಆಯ್ಕೆಗಳನ್ನು ಮತ್ತು ವೃತ್ತಿಪರತೆಯನ್ನು ತೀಕ್ಷ್ಣಗೊಳಿಸಿಕೊಳ್ಳಲು ಮತ್ತು ಅವರ ಆಂತರಿಕ ದಿಕ್ಸೂಚಿಯನ್ನು ಮರು ಚಿಂತನಗೆ ಒಳಪಡಿಸಿಕೊಳ್ಳಲು ವೇದಿಕೆಯನ್ನು ಒದಗಿಸುತ್ತದೆ ಎನ್ನುವ ಭರವಸೆ ಇದೆ ಎಂದು ಆಶಿಸಿದರು.‌ ಕೃತಕ ಬುದ್ದಿಮತ್ತೆ ತಂತ್ರಜ್ಞಾನ-ಚಾಲಿತ ಯುಗದಲ್ಲಿ ನಮ್ಮ ಕೌಶಲ್ಯಗಳನ್ನು ನವೀಕರಣಗೊಳಿಸಿಕೊಳ್ಳುವುದರ ಜೊತೆಗೆ‌ ಪತ್ರಿಕೋದ್ಯಮದ ಆದ್ಯತೆಗಳನ್ನೂ ಮರು ಪರಿಶೀಲನೆಗೆ ಚರ್ಚೆಗೆ ಒಳಪಡಿಸಬೇಕಿದೆ. ಇವತ್ತಿನ ತಾಂತ್ರಿಕ ವೇಗ ಮತ್ತು ಹೊಸ ಹೊಸ ತಂತ್ರಜ್ಞಾನದ ವೇಗದಲ್ಲಿ ಬಹುತೇಕ ಪ್ರತಿ ಐದು ವರ್ಷಗಳಿಗೆ ಒಮ್ಮೆ ನಾವು ಕಲ್ಪಿಸಕೊಳ್ಳಲಾಗದ ತಂತ್ರಜ್ಞಾನ‌ ಹೊರಗೆ ಬರುತ್ತಿವೆ. ಹೊಸದಾಗಿ ಬಂದಿರುವ AI ತಂತ್ರಜ್ಞಾನದ ಸಾಧ್ಯತೆಗಳನ್ನು ಮತ್ತು ಅಪಾಯಗಳನ್ನು ನಾವು ಸರಿಯಾಗಿ ಗ್ರಹಿಸವ ಮೊದಲೇ ಹೊಸ ತಂತ್ರಜ್ಞಾನ‌ ಬಂದಿರುತ್ತದೆ. ಈಗಾಗಲೇ‌ AI ಕೂಡ ಹಳತಾಗಿ “Super AI” ಅಂತ ಬರುತ್ತಿದೆ ಎಂದು ಎಚ್ಚರಿಸಿದರು.‌ ಇವೆಲ್ಲವನ್ನೂ ಅರಿಯುವ ಮತ್ತು ಅಪಾಯಗಳನ್ನು ತಡೆಯುವ ಕಾರ್ಯಾಗಾರವಾಗಿ ಈ ಬಾರಿಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶಿಸುತ್ತೇನೆ ಎಂದರು. ಡೀಪ್‌ಫೇಕ್‌ಗಳನ್ನು ಹೇಗೆ ಗುರುತಿಸುವುದು ಮತ್ತು ಸಾಮಾಜಿಕ ಮಾಧ್ಯಮ ಲೀಡ್‌ಗಳನ್ನು ಪರಿಶೀಲಿಸುವುದು ಹೇಗೆ ಎಂಬುದನ್ನು News room ಗಳು  ಕಲಿಸಬೇಕಾಗಿದೆ. ಮಾಧ್ಯಮ ಲೋಕದ ಕಾರ್ಪುರೇಟೀಕರಣದ ತಂದೊಡ್ಡಿರುವ ನೈತಿಕ ಸವಾಲುಗಳ ನಡುವೆಯೇ ಈಗ AI ಮತ್ತು ಆಧುನಿಕ ತಂತ್ರಜ್ಞಾನವೂ ಹೊಸ ಹೊಸ ನೈತಿಕ ಸವಾಲುಗಳನ್ನು ಮುಂದಿಟ್ಟಿದೆ. ಹೀಗಾಗಿ, ನೈತಿಕ ಮತ್ತು ತಾಂತ್ರಿಕ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಗೆ ಸಮ್ಮೇಳನ ವೇದಿಕೆಯಾಗಲಿ ಎಂದು ನಾನು ಬಯಸುತ್ತೇನೆ ಎಂದರು. *ಈ ಬಜೆಟ್ ನಲ್ಲೂ ಬಂಪರ್* ಪತ್ರಕರ್ತ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿನಿಂದಲೂ ನೆರಳಾಗಿ ನಿಂತಿದ್ದಾರೆ. ಈ ಬಾರಿಯ ಬಜೆಟ್ ನಲ್ಲೂ ಶ್ರಮಿಕ ಪತ್ರಕರ್ತ ಸಮುದಾಯಕ್ಕೆ ಉತ್ತಮ‌ ಅನುಕೂಲಗಳು ಆಗುವ ಭರವಸೆ ಇದೆ ಎಂದರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಈಶ್ವರ್ ಖಂಡ್ರೆ, ರಹೀಮ್ ಖಾನ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಉಪಾಧ್ಯಕ್ಷರಾದ ಮದನ್ ಗೌಡರು, ಜಿಲ್ಲಾಧ್ಯಕ್ಷರಾದ ಆನಂದ್ ದೇವಪ್ಪ ಸೇರಿ ರಾಜ್ಯ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪ್ರತಾಪ್ ಸಿಂಹ ವಿರುದ್ಧ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು; ಕಾನೂನು ಕ್ರಮಕ್ಕೆ ಕೊಡಗು ಹಿಂದೂ ಮಲಯಾಳಿ ಸಮಾಜ ಆಗ್ರಹ

ನವೆಂಬರ್ 26, 2026

ಸಿಎನ್‌ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ;  ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್‌ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯ

ನವೆಂಬರ್ 26, 2026

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತ

ನವೆಂಬರ್ 26, 2026

ಸಿಎನ್‌ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ;  ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್‌ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯ

ನವೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.26: ಸಂವಿಧಾನ ದಿನದ ಅಂಗವಾಗಿ ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ (CNC)…

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತ

ನವೆಂಬರ್ 26, 2026

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ನವೆಂಬರ್ 26, 2026

ಮಡಿಕೇರಿಯಲ್ಲಿ ಸಂಭ್ರಮದ ಪುತ್ತರಿ ಅರಮನೆ ಕೋಲ್; ಕೊಡಗಿನ ಜಾನಪದ ನೃತ್ಯ ವೈಭವಕ್ಕೆ ಸಾಕ್ಷಿಯಾದ ಕೋಟೆ ಆವರಣ

ನವೆಂಬರ್ 26, 2026

ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುರೇಶ್ ರೈನಾ

ನವೆಂಬರ್ 26, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಚಕ್ಕೇರ ಮನು ಕಾವೇರಪ್ಪ ಅವರಿಗೆ ನುಡಿನಮನ

ನವೆಂಬರ್ 26, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 612 ಅಂಕ ಗಳಿಸಿದ ಎ.ಎಸ್. ಶ್ರೀಶಾಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ನವೆಂಬರ್ 26, 2026

ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.