Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ಮಿಸ್ಟಿ ಹಿಲ್ಸ್ ನಿಂದ ಮಹಿಳಾ ಕೇಂದ್ರಿತ ರಕ್ತದಾನ ಶಿಬಿರ ; ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಿ – ಡಾ. ರವಿಕರಂಬಯ್ಯ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ಮಿಸ್ಟಿ ಹಿಲ್ಸ್ ನಿಂದ ಮಹಿಳಾ ಕೇಂದ್ರಿತ ರಕ್ತದಾನ ಶಿಬಿರ ; ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಿ – ಡಾ. ರವಿಕರಂಬಯ್ಯ ಮನವಿ*

ಫೆಬ್ರವರಿ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.24 –  ಜೀವ ಸಂರಕ್ಷಕವಾದ ರಕ್ತಕ್ಕೆ  ಕೊಡಗಿನಲ್ಲಿ ದಿನಾ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸ್ವಯಂಪ್ರೇರಿತರಾಗಿ ಜನರು ರಕ್ತದಾನ ಮಾಡಲು ಮುಂದಾಗಬೇಕಾದ ಅತ್ಯಗತ್ಯವಿದೆ ಎಂದು ಜಿಲ್ಲಾ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ರವಿ ಕರುಂಬಯ್ಯ ಕರೆ ನೀಡಿದ್ದಾರೆ. ಮಾಸಿಕ 600 ಯೂನಿಟ್ ರಕ್ತದ ಅಗತ್ಯವಿದ್ದು ಇಷ್ಟೊಂದು ರಕ್ತ ಸಂಗ್ರಹವಾಗದ ಹಿನ್ನಲೆಯಲ್ಲಿ ರಕ್ತದ ಕೊರತೆ ಆಸ್ಪತ್ರೆಗಳಲ್ಲಿ ತೀವ್ರವಾಗಿದೆ ಎಂದೂ ಅವರು ಹೇಳಿದ್ದಾರೆ.

ನಗರದ ರೋಟರಿ ಸಬಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್  ವತಿಯಿಂದ ಮಹಿಳೆಯರಿಗಾಗಿಯೇ ರಕ್ತದಾನ ಶಿಬಿರ ಆಯೋಜನಾ ಕಾಯ೯ಕ್ರಮದಲ್ಲಿ ರಕ್ತದಾನ  ತಪ್ಪುಗ್ರಹಿಕೆ ಮತ್ತು ವಾಸ್ತವ ವಿಚಾರದ ಕುರಿತಾಗಿ ಅವರು ಮಾಹಿತಿ ನೀಡಿದರು.  ಕೆಲವು ವಷ೯ಗಳ ಹಿಂದಿನವರೆಗೆ  ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ 100 ಯೂನಿಟ್ ರಕ್ತ ಸಾಕಾಗುತ್ತಿತ್ತು, ಆದರೆ ಕೊಡಗು ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆಯ ಜಿಲ್ಲಾಸ್ಪತ್ರೆ ವಿಸ್ತಾರಗೊಂಡು ಕೊಡಗು ಮಾತ್ರವಲ್ಲದೇ ಪರಜಿಲ್ಲೆಗಳ ರೋಗಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ದಾಖಲಾಗುತ್ತಿರುವುದರಿಂದಾಗಿ ರಕ್ತಕ್ಕೆ ಬೇಡಿಕೆ ಹೆಚ್ಚುತ್ತಲೇ ಇದೆ. ಹೀಗಾಗಿ ಪ್ರತೀ ತಿಂಗಳು 600 ಯೂನಿಟ್ ರಕ್ತದ ಅಗತ್ಯತೆಯಿದೆ. ವಾರದ ಮೂರು ದಿನಕ್ಕೊಂದು ಶಿಬಿರವನ್ನು ರಕ್ತನಿಧಿ ಕೇಂದ್ರದಿಂದ ಆಯೋಜಿಸಲೇಬೇಕಾದ ಅನಿವಾಯ೯ತೆಯಿದ್ದು ಕಳೆದ ವಷ೯ ಜಿಲ್ಲೆಯಲ್ಲಿ 100 ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದರು.


ಮಹಿಳೆಯರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು. ಪ್ರಸ್ತುತ 100 ರಕ್ದದಾನಿಗಳಲ್ಲಿ ಕೇವಲ 5-6 ಮಹಿಳೆಯರು ಮಾತ್ರ ರಕ್ತನೀಡುತ್ತಿದ್ದಾರೆ. ಈ ಸಂಖ್ಯೆ ಹೆಚ್ಚಾಗಬೇಕೆಂದು  ಡಾ. ರವಿಕರುಂಬಯ್ಯ ಮನವಿ ಮಾಡಿದರು. ಮೂಡನಂಬಿಕೆ, ತಪ್ಪುತಿಳುವಳಿಕೆಯನ್ನು ಬದಿಗಿಟ್ಟು ರಕ್ತದಾನ ಮಾಡುವ ಅಗತ್ಯವಿದೆ. ರಕ್ತದಾನ ಮಾಡುವುದರಿಂದ ದೇಹದಲ್ಲಿನ ಹಳೇ ರಕ್ತ ಕಣ್ಮರೆಯಾಗಿ ಹೊಸ ರಕ್ತಕಣಗಳು ಉತ್ಪತ್ತಿಯಾಗಿ ಆರೋಗ್ಯ ಸುಧಾರಣೆಯಾಗುತ್ತದೆ ಎಂದೂ ರವಿಕರುಂಬಯ್ಯ ನುಡಿದರು.  ರಕ್ತದಾನ ಶಿಬಿರಗಳು ನಾಮಾಕಾವಸ್ತೆಯ ಬದಲಿಗೆ ಹೆಚ್ಚಿನ ರಕ್ತಸಂಗ್ರಹಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಬೇಕೆಂದೂ ಅವರು ಹೇಳಿದರು.

ಮಹಿಳಾ ಕೇಂದ್ರೀತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ನಗರಸಭೆಯ ಅಧ್ಯಕ್ಷೆ ಕಲಾವತಿ ಮಾತನಾಡಿ, ಮಹಿಳೆಯರಿಗಾಗಿಯೇ ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದರು.

ರೋಟರಿ ಜಿಲ್ಲಾ ಯೋಜನೆಗಳ ಸಮಿತಿ ನಿದೇ೯ಶಕ ರತನ್ ತಮ್ಮಯ್ಯ ಮಾತನಾಡಿ,  ಇಂಥ ಶಿಬಿರಗಳು ಮಹಿಳೆಯರು ರಕ್ತದಾನ ಮಾಡುವ ನಿಟ್ಟಿನಲ್ಲಿ ಪ್ರೇರಣೆಯಾಗುತ್ತದ ಎಂದರಲ್ಲದೇ, ಪುರುಷರಷ್ಟೇ ಸಂಖ್ಯೆಯಲ್ಲಿ ಮಹಿಳೆಯರೂ ಭವಿಷ್ಯದಲ್ಲಿ ರಕ್ತದಾನ ಮಾಡಬೇಕು. ಈ ಶಿಬಿರ ಮಹಿಳೆಯರಲ್ಲಿ ರಕ್ತದಾನದ ಜಾಗ್ರತಿ ಮೂಡಿಸುವಂತಾಗಲಿ ಎಂದು ಹಾರೈಸಿದರು.

ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ ಮಾತನಾಡಿ, ರೋಟರಿ ಜಿಲ್ಲೆ 3181 ರ 10 ಯೋಜನೆಗಳ ಪೈಕಿ ರಕ್ತದಾನ ಶಿಬಿರವೂ ಮುಖ್ಯವಾಗಿದ್ದು, ಮಹಿಳೆಯರ ಆರೋಗ್ಯ ಸಂರಕ್ಷಣೆ ನಿಟ್ಟಿನಲ್ಲಿ ರೋಟರಿಯು ವಿವಿಧ ಯೋಜನೆ ಹಮ್ಮಿಕೊಂಡಿದೆ ಎಂದರು.

ರೋಟರಿ ಮಿಸ್ಟಿ ಹಿಲ್ಸ್ ನ ರಕ್ತದಾನ ಶಿಬಿರದ ಸಂಚಾಲಕಿ ರಶ್ಮಿದೀಪಾ ಮಾತನಾಡಿ, ಮಹಿಳೆಯರು ರಕ್ತದಾನ ಮಾಡುವಂತಿಲ್ಲ ಎಂಬ ತಪ್ಪು ಕಲ್ಪನೆಯಿದೆ. ಇಂಥ ತಪ್ಪು ಕಲ್ಪನೆ ಹೋಗಲಾಡಿಸಿ ವಾಸ್ತವತೆಯನ್ನು ಮನದಟ್ಟು ಮಾಡಲು ಈ ಶಿಬಿರ ಆಯೋಜಿಸಲಾಗಿದೆ. 22 ಮಹಿಳೆಯರು ರಕ್ತದಾನ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದರು.  ರಕ್ತವನ್ನು ಕೖತಕವಾಗಿ ಉತ್ಪಾದಿಸಲು ಅಸಾಧ್ಯವಾದ ಹಿನ್ನಲೆಯಲ್ಲಿ ರಕ್ತ ಅಗತ್ಯವುಳ್ಳವರಿಗೆ ಮತ್ತೋವ೯ರು ರಕ್ತನೀಡಿ ಅವರ ಜೀವ ಉಳಿಸುವ ಶ್ರೇಷ್ಟ ಕಾಯ೯ಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.


ರೋಟರಿ ವಲಯ ಸೇನಾನಿ ಕಾಯ೯ಪ್ಪ ಶಿಬಿರದ ಅಗತ್ಯತೆ ಬಗ್ಗೆ ಮಾತನಾಡಿದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಸ್ವಾಗತಿಸಿ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ ವಂದಿಸಿದ ಕಾಯ೯ಕ್ರಮವನ್ನು ಮಿಸ್ಟಿ ಹಿಲ್ಸ್ ನಿದೇ೯ಶಕ ಅನಿಲ್ ಹೆಚ್.ಟಿ. ನಿರೂಪಿಸಿದರು. ಮಡಿಕೇರಿ ಇನ್ನರ್ ವೀಲ್ ಕಾಯ೯ದಶಿ೯ ನಮಿತಾ ರೈ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಸಂಚಾಲಕ ಅಂಕಾಚಾರಿ ವೇದಿಕೆಯಲ್ಲಿದ್ದರು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್, ಕೊಡಗು ರೆಡ್ ಕ್ರಾಸ್, ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜು  , ಇನ್ನರ್ ವೀಲ್ ಸಂಸ್ಥೆಗಳು ಈ ಮಹಿಳಾ ಕೇಂದ್ರಿತ ರಕ್ತದಾನ ಶಿಬಿರಕ್ಕೆ ಸಹಯೋಗ ನೀಡಿದ್ದವು.

Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.