Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಕೋಟೆ ಮತ್ತು ದೇವಟ್ ಪರಂಬುವಿನಲ್ಲಿ ಹಿರಿಯರನ್ನು ಸ್ಮರಿಸಿದ ಸಿಎನ್‌ಸಿ*
  • *ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*
  • *ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ*
  • *ವಿರಾಜಪೇಟೆ : ಮಹಿಳೆಯರು ಸ್ವಾವಲಂಬಿ ಬದುಕು ನಡೆಸಿ : ಮಂಜುಳಾ ಸಲಹೆ*
  • *ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ :  ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು :  ಡಾ.ಕೆ.ವಿ.ಚಿದಾನಂದ*
  • *ವಿರಾಜಪೇಟೆ : ನಾಣ್ಯ, ನೋಟುಗಳು ಇತಿಹಾಸದ ಹೆಜ್ಜೆಗಳನ್ನು ತಿಳಿಸುತ್ತದೆ : ಡಿವೈಎಸ್‍ಪಿ ಎಸ್.ಮಹೇಶ್ ಕುಮಾರ್*
  • *ಎಂ.ಕೆ.ನಳಿನಾಕ್ಷಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ*
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನವೀಕರಣಗೊಂಡ ಸಭಾಂಗಣ ಉದ್ಘಾಟನೆ : ಅಗತ್ಯ ಅನುದಾನದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*
  • *ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣ ಕ್ರೀಡಾಕೂಟ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನವೀಕರಣಗೊಂಡ ಸಭಾಂಗಣ ಉದ್ಘಾಟನೆ : ಅಗತ್ಯ ಅನುದಾನದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನವೀಕರಣಗೊಂಡ ಸಭಾಂಗಣ ಉದ್ಘಾಟನೆ : ಅಗತ್ಯ ಅನುದಾನದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*

February 24, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.24 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಶಾಸಕರ ಅನುದಾನದಲ್ಲಿ ನವೀಕರಣಗೊಂಡ ಸಭಾಂಗಣವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು.
ಇದೇ ಸಂದರ್ಭ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್, ಗೈಡ್ಸ್ ಭವನದಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆ, ವಿಶ್ವ ಚಿಂತನಾ, ವಿಶ್ವ ಭ್ರಾತೃತ್ವ ದಿನಾಚರಣೆ ಹಾಗೂ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಸಂಸ್ಥೆಯ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.
ನಾನು ಬಾಲಕನಾಗಿದ್ದಾಗ ಕಬ್ ಆಗಿದ್ದು, ಈ ಸಂಸ್ಥೆಯು ಶಿಸ್ತು ಮತ್ತು ಪ್ರಮಾಣಿಕತೆಗೆ ಮಾದರಿಯಾದ ಸಂಸ್ಥೆಯಾಗಿದೆ. ಸೇವಾ ಮನೋಭಾವನೆ ಇದರ ಆದರ್ಶವಾಗಿದ್ದು, 2018ರಲ್ಲಿ ನಡೆದ ಪ್ರಕೃತಿ ವಿಕೋಪದ ಸಂದರ್ಭ ಕೂಡ ಈ ಸಂಸ್ಥೆಯು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದೆ. ಸೇವಾ ಮನೋಭಾವ ಹೊಂದಿರುವ ಈ ಸಂಸ್ಥೆಯ ಬಗ್ಗೆ ನನಗೆ ಬಹಳ ಹೆಮ್ಮೆ ಇದೆ ಎಂದರು.


ಜಿಲ್ಲಾ ಉಪವಿಭಾಗಧಿಕಾರಿ ನಿತಿನ್ ಚೆಕ್ಕಿ ಅವರು ಜಿಲ್ಲಾ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿ ನನಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೇಲೆ ತುಂಬಾ ಅಭಿಮಾನವಿದೆ, ನಾನು ಕೂಡ ಸ್ಕೌಟ್ ಆಗಿದ್ದೆ, ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪತ್ರವನ್ನು ಪಡೆಯುತ್ತಿರುವ ತಾವು ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಪ್ರಶಸ್ತಿ ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಂಯೋಜಕ ಕೃಷ್ಣಪ್ಪ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಪ್ರಮಾಣಿಕತೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಒಳ್ಳೆಯ ಗುಣನಡತೆಯನ್ನು ಬೆಳೆಸಿಕೊಂಡು ಉತ್ತಮ ನಾಗರೀಕರಾಗಿ ಬೆಳೆಯಲು ಈ ಸಂಸ್ಥೆ ದಾರಿದೀಪವಾಗಿದೆ ಎಂದು ತಿಳಿಸಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರು ಇಂಗ್ಲೆAಡ್ ನಲ್ಲಿ 1907 ರಲ್ಲಿ ರಾಬರ್ಟ್ ಬೇಡನ್ ಪೊವೆಲ್ ಅವರಿಂದ 20 ಮಕ್ಕಳೊಂದಿಗೆ ಪ್ರಾಯೋಗಿಕವಾಗಿ ಪ್ರಾರಂಭಗೊಂಡ ಸ್ಕೌಟ್ಸ್ ಸಂಸ್ಥೆಯು ಇಂದು 216 ದೇಶಗಳಲ್ಲಿ ಹೆಮ್ಮರವಾಗಿ ಬೆಳೆದಿದೆ. ಫೆ.22 ರಾಬರ್ಟ್ ಬೇಡನ್ ಪೊವೆಲ್ ಅವರ ಜನ್ಮದಿನವಾಗಿದ್ದು, ಅವರ ಮಾರ್ಗದರ್ಶನ ಇಂದಿಗೂ ಮಾದರಿಯಾಗಿದೆ ಎಂದರು.ಸAಸ್ಥೆಯ ಅಭಿವೃದ್ಧಿ ಕಾರ್ಯಗಳಿಗೆ 5 ಲಕ್ಷ ರೂ.ಗಳನ್ನು ಒದಗಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು.ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆ ನಡೆದು ಬಂದ ಹಾದಿಯನ್ನು ವಿವರಿಸಿದರು.


*ಸನ್ಮಾನ*
ಶಾಸಕ ಡಾ.ಮಂತರ್ ಗೌಡ ಅವರನ್ನು ಕೆ.ಟಿ.ಬೇಬಿ ಮ್ಯಾಥ್ಯು ಅವರು ಸನ್ಮಾನಿಸಿ ಗೌರವಿಸಿದರು. ಸುಮಾರು 28 ವರ್ಷಗಳ ಕಾಲ ಗೈಡ್ಸ್ ವಿಭಾಗದಲ್ಲಿ ಸೇವೆ ಸಲ್ಲಿಸಿದ ಅಮ್ಮತ್ತಿಯ ಗುಡ್ ಶಫರ್ಡ್ ಶಾಲೆಯ ನಿವೃತ್ತ ಶಿಕ್ಷಕಿ ಮೇರಿ ಅವರನ್ನು ಕೂಡ ಇದೇ ಸಂದರ್ಭ ಸನ್ಮಾನಿಸಲಾಯಿತು.
ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಆರಂಭಗೊAಡಿತು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪಕರಾದ ರಾಬರ್ಟ್ ಬೇಡನ್ ಪೊವೆಲ್ ಹಾಗೂ ಸೈಂಟ್ ಆಲೀವ್ ಕೇರ್ ಸೋಮ್ಸ್ ಅವರ ಭಾವಚಿತ್ರಕ್ಕೆ ನೆರೆದಿದ್ದವರು ಹಾಗೂ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿದರು.
ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಬಿ.ವೈ, ಪ್ರಾಧಿಕಾರದ ಸದಸ್ಯ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ., ಜಿಲ್ಲಾ ಗೈಡ್ ಆಯುಕ್ತರಾದ ರಾಣಿ ಮಾಚಯ್ಯ, ಜಿಲ್ಲಾ ಗೈಡ್ ತರಬೇತಿ ಆಯುಕ್ತರಾದ ಮೈಥಿಲಿ ರಾವ್, ಗೈಡ್ಸ್ ಸಹಾಯಕ ಆಯುಕ್ತರಾದ ಸುಲೋಚನ ಸಿ.ಎಂ, ಸಹಾಯಕ ಸ್ಕೌಟ್ಸ್ ಆಯುಕ್ತ ಕೆ.ಬಿ.ಗಣೇಶ್, ವಿರಾಜಪೇಟೆ ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಜಾಜಿ, ಜಿಲ್ಲಾ ಸಹಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಕ್ಯಾಪ್ಟನ್ ಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದರ್ಶಿ ಎಂ.ಎಂ.ವಸಂತಿ ಸ್ವಾಗತಿಸಿ ವಂದಿಸಿದರು. ಜಿಲ್ಲಾ ತರಬೇತಿ ಆಯುಕ್ತ ಕೆ.ಯು.ರಂಜಿತ್ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*
Next Article *ಎಂ.ಕೆ.ನಳಿನಾಕ್ಷಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ*

Website design development company services in Mangalore

Forex Trading Teacher in India

Related Posts

*ಮಡಿಕೇರಿ ಕೋಟೆ ಮತ್ತು ದೇವಟ್ ಪರಂಬುವಿನಲ್ಲಿ ಹಿರಿಯರನ್ನು ಸ್ಮರಿಸಿದ ಸಿಎನ್‌ಸಿ*

February 24, 2026

*ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*

February 24, 2026

*ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ*

February 24, 2026

*ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*

February 24, 2026

ಮಡಿಕೇರಿ ಫೆ.24 NEWS DESK : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಹೆಗಾರರು…

*ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆ ವಿದ್ಯಾರ್ಥಿಗಳ ಸಾಧನೆ*

February 24, 2026

*ವಿರಾಜಪೇಟೆ : ಮಹಿಳೆಯರು ಸ್ವಾವಲಂಬಿ ಬದುಕು ನಡೆಸಿ : ಮಂಜುಳಾ ಸಲಹೆ*

February 24, 2026

*ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ :  ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು :  ಡಾ.ಕೆ.ವಿ.ಚಿದಾನಂದ*

February 24, 2026

*ವಿರಾಜಪೇಟೆ : ನಾಣ್ಯ, ನೋಟುಗಳು ಇತಿಹಾಸದ ಹೆಜ್ಜೆಗಳನ್ನು ತಿಳಿಸುತ್ತದೆ : ಡಿವೈಎಸ್‍ಪಿ ಎಸ್.ಮಹೇಶ್ ಕುಮಾರ್*

February 24, 2026

*ಎಂ.ಕೆ.ನಳಿನಾಕ್ಷಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ*

February 24, 2026

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನವೀಕರಣಗೊಂಡ ಸಭಾಂಗಣ ಉದ್ಘಾಟನೆ : ಅಗತ್ಯ ಅನುದಾನದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*

February 24, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*

February 24, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣ ಕ್ರೀಡಾಕೂಟ*

February 24, 2026

*ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷರಾಗಿ ಪಟ್ಟೆಮನೆ ಉದಯಕುಮಾರ್ ಪುನರ್ ಆಯ್ಕೆ*

February 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.