Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ :  ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು :  ಡಾ.ಕೆ.ವಿ.ಚಿದಾನಂದ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ :  ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು :  ಡಾ.ಕೆ.ವಿ.ಚಿದಾನಂದ*

ಫೆಬ್ರವರಿ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಳ್ಯ ಫೆ.24 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ ಕಾಲೇಜಿನ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು.  ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌‌ನ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಭಾಷೆಗಳು ಉಳಿಯಬೇಕಾದರೆ ಅದನ್ನು ಹೆಚ್ಚೆಚ್ಚು ಬಳಸಬೇಕು, ಮುಂದಿನ ತಲೆಮಾರಿಗೆ ಪಸರಿಸುವ ಕೆಲಸ ಆಗಬೇಕು. ಆಧುನೀಕರಣದಿಂದ ಭಾಷೆ ನಾಶ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಅರೆಭಾಷೆ ಅಕಾಡೆಮಿ ಸ್ಥಾಪನೆಯಾದ ಬಳಿಕ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಬಹಳಷ್ಟು ಕೆಲಸಗಳು ನಡೆಯುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.  ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, ಅರೆಭಾಷೆ ರಾಜ್ಯದಿಂದಾಚೆ ಬೆಳೆದು‌ ನಿಲ್ಲಬೇಕು, ಅದು ದೇಶ ಭಾಷೆಯಾಗಬೇಕು ಎನ್ನುವ ನಿಟ್ಟಿನಲ್ಲಿ ಅಕಾಡೆಮಿ ಈಗ ಬಹಳಷ್ಟು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು. ಭಾಷೆಯನ್ನು ಉಳಿಸುವ ಮೂಲಕ ಸಂಸ್ಕೃತಿಯನ್ನು ಉಳಿಸುವ ಕೆಲಸವನ್ನು ಮಾಡೋಣ, ಅದನ್ನು ಮುಂದಿನ ಪೀಳಿಗೆಗೆ ಪಸರಿಸುವ ಕೆಲಸ ನಮ್ಮೆಲ್ಲರಿಂದಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌‌ನ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಕಾಡೆಮಿಯ ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಗೋಪಾಲ ಪೆರಾಜೆ, ಚಂದ್ರಾವತಿ ಬಡ್ಡಡ್ಕ, ಕುದ್ಪಾಜೆ ಪ್ರಕಾಶ್, ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ.ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಟಿ.ವಿಶ್ವನಾಥ್, ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅರೆಭಾಷೆ ಅಕಾಡೆಮಿ ಸದಸ್ಯರಾದ ತೇಜಕುಮಾರ್ ಕುಡೆಕಲ್ಲು, ಲೋಕೇಶ್ ಊರುಬೈಲು, ವಿನೋದ್ ಮೂಡಗದ್ದೆ, ಲತಾ ಪ್ರಸಾದ್ ಕುದ್ಪಾಜೆ, ಪೂರ್ವಾಧ್ಯಕ್ಷರಾದ ಪಿ.ಸಿ ಜಯರಾಮ, ಲಕ್ಷ್ಮಿ ನಾರಾಯಣ ಕಜೆಗದ್ದೆ ಭಾಗವಹಿಸಿದ್ದರು. ಈ ವಿಚಾರ ಸಂಕಿರಣಕ್ಕೆ ಕೊಡಗಿನ ಮಡಿಕೇರಿ ಮತ್ತು ವಿರಾಜ್‌ಪೇಟೆ, ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯದಿಂದ ಪ್ರತಿನಿಧಿಗಳು ಹಾಜರಿದ್ದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಡಾ.ರುದ್ರಕುಮಾರ್ ಎಂ.ಎಂ.ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.