Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿದ್ಯುತ್ ಕಡಿತ : ಸೆಸ್ಕ್ ಅಧಿಕಾರಿಗಳ ವಿರುದ್ಧ ಎಂ.ಕೆ.ಆಶಿಕ್ ಅಸಮಾಧಾನ : ಪ್ರತಿಭಟನೆಯ ಎಚ್ಚರಿಕೆ*
  • *ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*
  • *ಮಾ.2 ರಂದು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಹಬ್ಬ*
  • *ಚೊಕಂಡಳ್ಳಿ ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ನೀಡಲು ಮನವಿ*
  • *ಮಡಿಕೇರಿ : ಜೂನಿಯರ್ ಕಾಲೇಜು ಆವರಣದಲ್ಲಿ ಗಮನ ಸೆಳೆದ ಮಕ್ಕಳ ಸಂತೆ*
  • *ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ತ್ರಿವೇಣಿ ಪೊಮ್ಮಕ್ಕಡ ಕೂಟ*
  • *ರಸ್ತೆಗಳ ಅವ್ಯವಸ್ಥೆ : ಮಡಿಕೇರಿ ನಗರಸಭೆ ವಿರುದ್ಧ ಎಸ್‍ಡಿಪಿಐ ಪ್ರತಿಭಟನೆ*
  • *ಮಡಿಕೇರಿ ಮುಸ್ಸಂಜೆ ಸೊಬಗು*
  • *ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ : 94 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಯದುವೀರ್ ಭೂಮಿಪೂಜೆ*
  • *GL ACHARYA JEWELLERS KUSHALANAGARA : WANTED BILLING ASSISTANT : SALES EXECUTIVE*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ : 94 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಯದುವೀರ್ ಭೂಮಿಪೂಜೆ*
ಇತ್ತೀಚಿನ ಸುದ್ದಿಗಳು

*ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ : 94 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಯದುವೀರ್ ಭೂಮಿಪೂಜೆ*

February 25, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.25 : ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ ತಡೆಗೋಡೆ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ರಕ್ಷಣಾ ತಡೆಗೋಡೆ ಕಾಮಗಾರಿಯು 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದರು ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ನಿತಿನ್ ಗಡ್ಕರಿ ಅವರ ಪ್ರಯತ್ನದಿಂದ ರಾಷ್ಟçದಲ್ಲಿ ಹೆದ್ದಾರಿಗಳು ಅಭಿವೃದ್ಧಿ ಹೊಂದುತ್ತಿವೆ ಎಂದು ಸಂಸದರು ಹೇಳಿದರು.  ರಾಷ್ಟçದ ರಾಜದಾನಿ ನವದೆಹಲಿ, ಮುಂಬೈ, ಬೆಂಗಳೂರು, ಚೆನೈ, ಕೊಲ್ಕತ್ತಾ ಮತ್ತಿತ್ತರ ಕಡೆಗಳಲ್ಲಿ ಸಂಪರ್ಕ ರಸ್ತೆಯನ್ನಾಗಿ ಸರ್ಕಾರ ಕೈಗೊಂಡಿದೆ. ಹಾಗೆಯೇ ರೈಲ್ವೆ ಯೋಜನೆಗಳನ್ನು ವಿದ್ಯುದ್ದೀಕರಣ ಮಾಡಿ ಅಭಿವೃದ್ಧಿಗೊಳಿಸಲಾಗಿದೆ ಎಂದು ತಿಳಿಸಿದರು.


ರಾಷ್ಟçದಲ್ಲಿ ಹಿಂದೆ ಕಡಿಮೆ ವಿಮಾನ ನಿಲ್ದಾಣಗಳು ಇದ್ದವು, ಈಗ 150 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಅದರಲ್ಲಿ ಅಂತರ ರಾಷ್ಟ್ರೀಯ   ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ಹೀಗೆ ಜಾಗತಿಕವಾಗಿ ರಾಷ್ಟ್ರ ಅಭಿವೃದ್ಧಿಯಲ್ಲಿ ಮೂರನೇ ಸ್ಥಾನ ಹೊಂದಿದೆ ಎಂದರು. ಕೇಂದ್ರ ಸರ್ಕಾರದಿಂದ ಹಲವು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯುವಜನರಿಗೆ ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ, ಸ್ವ ಉದ್ಯೋಗ ಕೈಗೊಳ್ಳಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಪರಿಸರ ಶುಚಿತ್ವಕ್ಕೆ ಒತ್ತು ನೀಡುವ ಮೂಲಕ ಶೌಚಾಲಯ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಿದೆ ಎಂದು ಲೋಕಸಭಾ ಸದಸ್ಯರು ವಿವರಿಸಿದರು. ಸರ್ಕಾರದಿಂದ ಕೊಡಗು ಜಿಲ್ಲೆಗೆ ಪರಿಸರ ಸಂರಕ್ಷಣೆ ಮತ್ತು ಪ್ರಾಕೃತಿಕ ಸಂಪತ್ತನ್ನು ಸಂರಕ್ಷಣೆ ಮಾಡುವಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದು ಹೇಳಿದರು.


ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಂಸದರು ರಕ್ಷಣಾ ತಡೆಗೋಡೆ ನಿರ್ಮಾಣ ಸಂಬAಧ ತಜ್ಞರು, ಇಲ್ಲಿನ ಸ್ಥಳೀಯ ಮಣ್ಣಿನ ಪರಿಸ್ಥಿತಿಯನ್ನು ಅವಲೋಕಿಸಿ ಯೋಜನೆ ರೂಪಿಸಿದ್ದು, ಆ ನಿಟ್ಟಿನಲ್ಲಿ ಕಾಮಗಾರಿ ನಡೆಯಲಿದೆ ಎಂದು ಪ್ರತಿಕ್ರಿಯಿಸಿದರು. ರಸ್ತೆ ತಿರುವುಗಳ ಅಗಲೀಕರಣ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದರು ಇದು ಕಷ್ಟಸಾಧ್ಯದ ಕೆಲಸವಾಗಿದ್ದು, ಪರಿಸರಕ್ಕೆ ಹಾನಿಯಾಗದಂತೆ ಮುಂದಿನ ಕ್ರಮವಹಿಸಲಾಗುವುದು ಎಂದರು.
ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಸಂಸದರು ಕರಿಮೆಣಸಿಗೆ ಸೆಸ್ ಜಾರಿಗೊಳಿಸುವುದನ್ನು ತಡೆದಿದ್ದಾರೆ ಎಂದು ಶ್ಲಾಘಿಸಿದರು. ತಡೆಗೋಡೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡಿದೆ ಎಂದು ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ಸುನಿಲ್ ಸುಬ್ರಮಣಿ, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ರವಿ ಕುಶಾಲಪ್ಪ, ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಪ್ರಮುಖರಾದ ಉಮೇಶ್ ಸುಬ್ರಮಣಿ, ಕಾಂಗೀರ ಸತೀಶ್, ಪಿ.ಎಂ.ರವಿ. ಗೌತಮ್, ಸಜಿಲ್ ಕೃಷ್ಣ, ಪುಷ್ಪ, ಧನಂಜಯ ಅಗೋಳಿಕಜೆ, ಬೆಳ್ಳಿಯನ ಚಂದ್ರಪ್ರಕಾಶ್,  ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಎಚ್.ಗಿರೀಶ್, ಸಹಾಯಕ ಎಂಜಿನಿಯರ್ ಹನುಮಂತ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*GL ACHARYA JEWELLERS KUSHALANAGARA : WANTED BILLING ASSISTANT : SALES EXECUTIVE*
Next Article *ಮಡಿಕೇರಿ ಮುಸ್ಸಂಜೆ ಸೊಬಗು*

Website design development company services in Mangalore

Forex Trading Teacher in India

Related Posts

*ವಿದ್ಯುತ್ ಕಡಿತ : ಸೆಸ್ಕ್ ಅಧಿಕಾರಿಗಳ ವಿರುದ್ಧ ಎಂ.ಕೆ.ಆಶಿಕ್ ಅಸಮಾಧಾನ : ಪ್ರತಿಭಟನೆಯ ಎಚ್ಚರಿಕೆ*

February 25, 2026

*ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*

February 25, 2026

*ಮಾ.2 ರಂದು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಹಬ್ಬ*

February 25, 2026

*ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*

February 25, 2026

ಸಿದ್ದಾಪುರ ಫೆ.25 NEWS DESK : ಎಸ್‌.ಎನ್‌.ಡಿ.ಪಿ. ಕೊಡಗು ಯೂನಿಯನ್ ವತಿಯಿಂದ ವನಿತಾ ಸಮಾವೇಶ ನಡೆಯಿತು. ಸಿದ್ದಾಪುರದ  ಎಸ್‌ಎನ್‌ಡಿಪಿ ಸಭಾಂಗಣದಲ್ಲಿ…

*ಮಾ.2 ರಂದು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಹಬ್ಬ*

February 25, 2026

*ಚೊಕಂಡಳ್ಳಿ ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ನೀಡಲು ಮನವಿ*

February 25, 2026

*ಮಡಿಕೇರಿ : ಜೂನಿಯರ್ ಕಾಲೇಜು ಆವರಣದಲ್ಲಿ ಗಮನ ಸೆಳೆದ ಮಕ್ಕಳ ಸಂತೆ*

February 25, 2026

*ಶಕ್ತಿ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ತ್ರಿವೇಣಿ ಪೊಮ್ಮಕ್ಕಡ ಕೂಟ*

February 25, 2026

*ರಸ್ತೆಗಳ ಅವ್ಯವಸ್ಥೆ : ಮಡಿಕೇರಿ ನಗರಸಭೆ ವಿರುದ್ಧ ಎಸ್‍ಡಿಪಿಐ ಪ್ರತಿಭಟನೆ*

February 25, 2026

*ಮಡಿಕೇರಿ ಮುಸ್ಸಂಜೆ ಸೊಬಗು*

February 25, 2026

*ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ : 94 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಯದುವೀರ್ ಭೂಮಿಪೂಜೆ*

February 25, 2026

*GL ACHARYA JEWELLERS KUSHALANAGARA : WANTED BILLING ASSISTANT : SALES EXECUTIVE*

February 25, 2026

*ಕ್ಯಾನ್ಸರ್ ಪತ್ತೆ ಮತ್ತು ಚಿಕಿತ್ಸೆಯಲ್ಲಿ ಹೊಸ ಹಾದಿ: ಧಾರವಾಡ ಮೂಲದ ವಿಜ್ಞಾನಿ ಡಾ. ಕಟ್ಟಿಗೆ ಅವರಿಗೆ ಅಂತರಾಷ್ಟ್ರೀಯ ಪ್ರಶಸ್ತಿ*

February 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.