Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಿದ್ದಾಪುರದಲ್ಲಿ ಎಸ್‌.ಎನ್‌.ಡಿ.ಪಿ. ವನಿತಾ ಸಮಾವೇಶ : ಭಾರತೀಯ ಪಾರಂಪರಿಕ ಸಂಸ್ಕೃತಿಯನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು : ಸಂಸದ ಯದುವೀರ್ ಒಡೆಯರ್*

ಫೆಬ್ರವರಿ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಫೆ.25 NEWS DESK : ಎಸ್‌.ಎನ್‌.ಡಿ.ಪಿ. ಕೊಡಗು ಯೂನಿಯನ್ ವತಿಯಿಂದ ವನಿತಾ ಸಮಾವೇಶ ನಡೆಯಿತು. ಸಿದ್ದಾಪುರದ  ಎಸ್‌ಎನ್‌ಡಿಪಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿ ಮಾತನಾಡಿ, ಭಾರತೀಯ ಪಾರಂಪರಿಕ ಸಂಸ್ಕೃತಿ ಮತ್ತು ಸಮಾಜವನ್ನು ರಕ್ಷಿಸುವ ಮೂಲ ತತ್ವಗಳನ್ನು ಸಂಘಟನೆಗಳು ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಇಂತಹ ಸಮಾವೇಶಗಳು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಅವರ ಸಾಧನೆಗಳನ್ನು ಗುರುತಿಸಲು ಮಹತ್ವದ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ಸಂಘಟನೆ ಮೂಲಕ ಶಕ್ತರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದರು. ಪ್ರಸ್ತಾವಿಕವಾಗಿ ಮಾತನಾಡಿದ ಎಸ್‌.ಎನ್‌.ಡಿ.ಪಿ. ಕೊಡಗು ಯೂನಿಯನ್ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್, ವನಿತಾರನ್ನು ಒಗ್ಗೂಡಿಸಿ ಅವರಿಗೆ ಬಲ ತುಂಬುವ ಉದ್ದೇಶದಿಂದ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಸಂಘಟನೆಯಲ್ಲಿ ಒಟ್ಟು 18 ಸಾವಿರ ಸದಸ್ಯರಿದ್ದು, ಅದರಲ್ಲಿ 9 ಸಾವಿರ ಮಹಿಳೆಯರು ಸೇರಿದ್ದಾರೆ ಎಂದರು. ಸಂಘಟನೆಯು ಪ್ರತಿವರ್ಷ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಸದಸ್ಯತ್ವ ಪಡೆದ ಕೊಡಗಿನ 48 ಮಾಜಿ ಸೈನಿಕರು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ 108 ಸದಸ್ಯರನ್ನು ಗುರುತಿಸಿ ಸನ್ಮಾನಿಸಲಾಗಿದೆ ಎಂದು ಹೇಳಿದರು. ಜೊತೆಗೆ 50 ವರ್ಷಕ್ಕಿಂತ ಮೇಲ್ಪಟ್ಟ ದಾಂಪತ್ಯ ಜೀವನ ನಡೆಸುತಿರವು ದಂಪತಿಗಳನ್ನು ಗೌರವಿಸಲಾಗಿದ್ದು, ಆರೋಗ್ಯ ಮತ್ತು ರಕ್ತದಾನ ಶಿಬಿರಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಸನ್ಮಾನಿಸಲಾಯಿತು. ವಿವಿಧ ಭಾಗಗಳ ಮಹಿಳಾ ನಾಯಕರನ್ನು ಆಯ್ಕೆ ಮಾಡುವ ಕಾರ್ಯಕ್ರಮವೂ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೀಶಾ ಸುರೇಂದ್ರನ್ ವಹಿಸಿದ್ದರು. ಉಪಾಧ್ಯಕ್ಷರಾಗಿ ಆರ್.ರಾಜನ್, ಕಾರ್ಯದರ್ಶಿಯಾಗಿ ಪ್ರೇಮಾನಂದ ಹಾಗೂ ನಿರ್ದೇಶಕರಾಗಿ ಮೋಹನ್ ದಾಸ್ ಮತ್ತು ಶಂಕರನಾರಾಯಣ ಪಾಲ್ಗೊಂಡರು. ಪ್ರಮುಖರಾದ ಸಜೀವ, ರಾಜಶೇಖರ್, ಗಿರೀಶ್, ಮೋಹನ್ ದಾಸ್ ಪಾಪಯ್ಯ, ನಾರಾಯಣ ಸೇರಿದಂತೆ ಎಸ್‌.ಎನ್‌.ಡಿ.ಪಿ. ಕೊಡಗು ಯೂನಿಯನ್ ವನಿತಾ ಯೂನಿಯನ್ ಸದಸ್ಯರು ಹಾಗೂ ಪದಾಧಿಕಾರಿಗಳು ಹಾಜರಿದ್ದರು. ಸಮಾವೇಶಕ್ಕೂ ಮುನ್ನ ಸಿದ್ದಾಪುರ ಬಸ್ ನಿಲ್ದಾಣದಿಂದ ಎಸ್.ಎನ್.ಡಿ.ಪಿ ಸಭಾಂಗಣದವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡ ಮಹಿಳೆಯರು ಸಂಸದರಾದ ಯದುವೀರ್ ಒಡೆಯರ್ ಅವರನ್ನು ಸ್ವಾಗತಿಸಿ ಚಂಡೆ ವಾದ್ಯ ಮೇಳದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.