Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

ಫೆಬ್ರವರಿ 26, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ವಿರಾಜಪೇಟೆ ಫೆ.26 NEWS  DESK : ವಿರಾಜಪೇಟೆಯ ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ವಿರಾಜಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ನಡೆಯಿತು. ತೆಲುಗರ ಬೀದಿಯಲ್ಲಿನ ಮಾರಿಯಮ್ಮ ದೇವಸ್ಥಾನದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಗೆ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಹಿಂದೂ ಸಮಾಜದ ಮುಖಂಡರು ಚಾಲನೆ ನೀಡಿದರು. ನಗರದ ಮುಖ್ಯಬೀದಿಗಳಿಂದ ಹೊರಟ ಹಿಂದೂ ಸಂಗಮದ ಬೃಹತ್ ಶೋಭಾಯಾತ್ರೆಗೆ ಜನಸಾಗರವೇ ಹರಿದು ಬಂದಿತ್ತು. ಸಂಘ ಶತಾಭ್ದಿ ಸಂಭ್ರಮದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಇತಿಹಾಸದಲ್ಲಿ ದಾಖಲೆಯಾಗಿ ಉಳಿಯುವಂತಾಯಿತು. ಭವ್ಯ ಶೋಭಾಯಾತ್ರೆ ಹಬ್ಬದ ವಾತಾವರಣವನ್ನು ಸೃಷ್ಟಿಸಿತು. ಭಜನಾ ತಂಡಗಳು, ಡೊಳ್ಳು ಕುಣಿತ ಕಲಾವಿದರು, ಜೇನುಕುರುಬ ನೃತ್ಯ, ಉಮ್ಮತ್ತಾಟ್ ಪ್ರದರ್ಶನ, ದೇಶಭಕ್ತಿಯನ್ನು ಸಾರುವ ವೈವಿಧ್ಯಮಯ ಟ್ಯಾಬ್ಲೋಗಳು, ಕೇರಳದ ಚಂಡೆ, ಕೊಡಗಿನ ವಾಲಗ, ಗೊಂಬೆ ಕುಣಿತ ಸಮ್ಮುಖದಲ್ಲಿ ಕಳಸ ಹೊತ್ತು ಮಹಿಳೆಯರು ಮೆರವಣಿಯಲ್ಲಿ ಭಾಗಿಯಾಗಿ ಮೆರವಣಿಗೆಯ ಮೆರುಗನ್ನು ಹೆಚ್ಚಿಸಿ ಎಲ್ಲರ ಗಮನ ಸೆಳೆಯುವ ಕ್ಷಣವಾಗಿತ್ತು. ಹಿಂದೂಗಳು ಪೂಜ್ಯನೀಯ ಭಾವದಿಂದ ಕಾಣುವ ಗೋವುಗಳ ಮೆರವಣಿಗೆ ಸಂಸ್ಕøತಿಯ ಪ್ರತೀಕದಂತೆ ಎಲ್ಲರ ಗಮನ ಸೆಳೆಯಿತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು ಕೇಸರಿ ಶಲ್ಯ ಧರಿಸಿ, ಬಾವುಟ ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ವಿರಾಜಪೇಟೆ ನಗರ ತುಂಬೆಲ್ಲಾ ಬಂಟಿಂಗ್ಸ್ ಹಾಗೂ ಪ್ಲೆಕ್ಸ್ ರಾರಾಜಿಸಿದ್ದವು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳ ಸಾಂಸ್ಕೃತಿಕ ನೃತ್ಯ ವೈಭವ ಆಕರ್ಷಣೀಯವಾಗಿತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ನೀರು, ತಂಪು ಪಾನೀಯ, ಮಜ್ಜಿಗೆ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ನೆರೆದಿದ್ದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಹಿಂದೂ ಧರ್ಮದ ಏಕತೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಸಾರುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ ಕೇಸರಿ ಧ್ವಜಗಳು, ಧಾರ್ಮಿಕ ಘೋಷಣೆಗಳು ಹಾಗೂ ಶಿಸ್ತಿನ ಮೆರವಣಿಗೆಯ ಮೂಲಕ ಹಿಂದೂ ಧರ್ಮದ ಶಕ್ತಿ ಮತ್ತು ಒಗ್ಗಟ್ಟು ಗಮನ ಸೆಳೆಯಿತು. ಶೋಭಾಯಾತ್ರೆಗೆ ವಿರಾಜಪೇಟೆ ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದ ನಿರೀಕ್ಷೆಗೂ ಮೀರಿ ಜನಸಾಗರವೇ ಹರಿದು ಬಂದಿತ್ತು. ಬಿಸಿಲನ್ನು ಲೆಕ್ಕಿಸದೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಶೋಭಾಯಾತ್ರೆ ನೋಡುವುದರ ಜೊತೆಗೆ ಯುವಕ ಯುವತಿರು ಕುಣಿದು ಕುಪ್ಪಳಿಸಿದರು. ಡಿಜೆ ಸೌಂಡ್ ಇಲ್ಲದಿದ್ದರೂ ಕಲಾತಂಡಗಳ ವಾದ್ಯಕ್ಕೆ ಹೆಜ್ಜೆ ಹಾಕಿದರು. ಯುವಕ ಯುವತಿಯರು ಮಕ್ಕಳು ಹಿರಿಯರು ಹೀಗೆ ಎಲ್ಲರೂ ಭವ್ಯ ಮೆರವಣಿಗೆಗೆ ಸಾಕ್ಷಿಯಾದರು. ರಸ್ತೆಯುದ್ಧಕ್ಕೂ ಪೆÇಲೀಸರು ಬಿಗಿ ಬಂದೋಬಸ್ತೋ ಕಲ್ಪಿಸಿದ್ದರು. ಸ್ವಯಂಸೇವಕರ ತಂಡ ಎಲ್ಲಿಯೂ ಸಮಸ್ಯೆ ಆಗದಂತೆ ಎಚ್ಚರ ವಹಿಸಿದ್ದರು. ಪಟ್ಟಣದ ಮೂರು ಕಡೆಗಳಿಂದ ಶೋಭಾಯಾತ್ರೆ ನಡೆಯಿತು. ಪಟ್ಟಣದ ತೆಲುಗುರ ಬೀದಿಯ ಮಾರಿಯಮ್ಮ ಗುಡಿಯಿಂದ, ಅದೇ ಸಮಯಕ್ಕೆ ಮೀನುಪೇಟೆ ಮುತ್ತಪ್ಪ ದೇವಾಲಯದಿಂದ ಒಂದು ತಂಡ, ಪಂಜರುಪೇಟೆ ಸರ್ವೋದಯ ಕಾಲೇಜಿನಿಂದ ಮತ್ತೊಂದು ತಂಡ ಏಕಕಾಲದಲ್ಲಿ ಶೋಭಾಯಾತ್ರೆ ಹೊರಟು ದೊಡಟ್ಟಿ ಚೌಕಿ ಬಳಿ ಮಹಾ ಸಂಗಮಗೊಂಡು ಎಫ್‍ಎಂಸಿ ರಸ್ತೆಯ ಮೂಲಕ ತಾಲೂಕು ಮೈದಾನದಲ್ಲಿ ಸೇರಿತು. :: ಸಭಾ ಕಾರ್ಯಕ್ರಮ :: ತಾಲ್ಲೂಕು ಮೈದಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಗೋ ಸೇವಕ ಪ್ರಮುಖ್ ಪ್ರವೀಣ್ ಸರಳಾಯ ಮಾತನಾಡಿ, ಪ್ರತಿಯೊಬ್ಬ ಹಿಂದೂ ನಾವೆಲ್ಲ ಒಂದು ಎಂಬ ಪರಿಕಲ್ಪನೆಯಲ್ಲಿ ಒಗ್ಗೂಡಬೇಕಾಗಿದೆ. ಭಾರತೀಯರು ಜಗತ್ತಿಗೆ ಸಂಸ್ಕೃತಿ, ನಾಗರಿಕತೆ ಹಾಗೂ ಬದುಕುವ ಕಲೆ ಹೇಳಿಕೊಟ್ಟಿದ್ದಾರೆ. ನಮ್ಮ ದೇಶ ಉಳಿಯಬೇಕೆಂದರೆ ಹಿಂದೂ ಧರ್ಮ ಉಳಿಯಬೇಕು. ಆ ನಿಟ್ಟಿನಲ್ಲಿ ಹಿಂದುಗಳು ಸಂಘಟಿತರಾಗಬೇಕು ಎಂದು ಕರೆ ನೀಡಿದರು. ಅವಿಭಕ್ತ ಕುಟುಂಬವೇ ಹಿಂದೂ ಧರ್ಮದ ದೊಡ್ಡ ಶಕ್ತಿ. ಕುಟುಂಬದಲ್ಲಿ ಯಾರು ಬೇರ್ಪಟ್ಟು ಹೋಗದೆ ಒಟ್ಟಾಗಿ ಬದುಕುವ ಸಂಸ್ಕಾರ ನಮ್ಮ ಧರ್ಮದ ಮೂಲ. ಇತ್ತೀಚಿನ ನಗರ ವ್ಯಾಮೋಹ ಹಾಗೂ ಆಧುನಿಕ ಜೀವನ ಶೈಲಿಯಿಂದ ಕುಟುಂಬ ವಿಚ್ಛೇದನ ಹೆಚ್ಚಾಗುತ್ತಿದೆ. ಇದು ಹಿಂದೂ ಧರ್ಮ ಹಾಗೂ ಸಮಾಜಕ್ಕೆ ಮಾರಕವಾಗುವ ಅಪಾಯವಿದೆ. ಕುಟುಂಬ ಮೌಲ್ಯಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು. ಮುಖ್ಯ ಅತಿಥಿ ಡಾ. ಮಾತಂಡ ಅಯ್ಯಪ್ಪ ಮಾತನಾಡಿ, ಹಿಂದುತ್ವ ಅಂದರೆ ಭಾರತೀಯರ ವಿಶ್ವ ದೃಷ್ಟಿ, ಜೀವನ ದರ್ಶನ, ಭಾರತೀಯರ ನಡವಳಿಕೆ ಆಗಿದೆ. ಹಿಂದುತ್ವದಿಂದ ಭಾರತವನ್ನು ಬಿಡಿಸಿ ನೋಡಲು ಸಾಧ್ಯವಿಲ್ಲ. ಎಲ್ಲವೂ ಹಿಂದೂ ಸಮಾಜ ಸಮ್ಮೇಳಿತವಾಗಿದೆ ಎಂದರು. ನಾವೆಲ್ಲರೂ ಹಿಂದುತ್ವದ ದೃಷ್ಟಿಯಲ್ಲಿ ಸಾಗೋಣ, ಹಿಂದುತ್ವಕ್ಕಾಗಿ ಸೇರೋಣ ನಾವೆಲ್ಲ ಹಿಂದುತ್ವದ ದೃಷ್ಟಿಯಿಂದ ಕೆಲಸ ಮಾಡಿದಾಗ ಮಾತ್ರ ಸಮಾಜದ ಕೆಲವು ಪಿಡುಗುಗಳನ್ನು ಕಿತ್ತೆಸೆಯಲು ಸಾಧ್ಯ. ಇಂದು ದೇಶವನ್ನು ಕೆಲವು ಪಿಡುಗುಗಳು ಕಾಡುತ್ತಿವೆ. ಆದ್ದರಿಂದ ನಾವುಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಹಿಂದುತ್ವ ಜಾತಿಯಲ್ಲ, ಮತ, ಪಂಥವಲ್ಲ ಅದು ಮನುಷ್ಯನ ಜೀವನಕ್ಕೆ ಪೂರಕವಾದುದ್ದು. ಇಲ್ಲಿ ನಾವು ಸೇರಿರುವುದು ಯಾಕೆ ಎಂಬುದನ್ನು ತಿಳಿಯಬೇಕು ಎಂದರು. ಪ್ರಮುಖರಾದ ಡಾ.ಚೇಂದಿರ ಬೋಪಣ್ಣ ಮಾತನಾಡಿ, ದೇಶದ ಕಠಿಣ ಸಂದರ್ಭಗಳಲ್ಲಿ ಆಸರೆಯಾಗಿ ನಿಂತ ಶಕ್ತಿ ರಾಷ್ಟ್ರೀಯ ಸ್ವಯಂಸೇವಕ ಸಂಘ. ಇಂದು ಸಂಸ್ಕೃತಿಯು ವಿಕೃತಿಯತ್ತ ಸಾಗುತ್ತಿರುವ ಕಾಲಘಟ್ಟದಲ್ಲಿ ಸ್ತ್ರೀಯರಿಗೆ ಮತ್ತು ಸಮಾಜಕ್ಕೆ ಸಂಸ್ಕಾರಯುತ ಜೀವನ ರೂಪಿಸುವಲ್ಲಿ ಸಂಘದ ಪಾತ್ರ ಅಪಾರ ಎಂದರು. ಸಮಾಜದಲ್ಲಿ ಬದಲಾವಣೆ ತರಲು ಅಳವಡಿಸಿಕೊಳ್ಳಬೇಕಾದ ಜೀವನ ಶೈಲಿಯ ಬಗ್ಗೆ ಬೆಳಕು ಚೆಲ್ಲಿದರು. ಹಿಂದೂ ಸಂಗಮ ಆಯೋಜನಾ ಸಮಿತಿ ವಿರಾಜಪೇಟೆ ತಾಲೂಕು ಅಧ್ಯಕ್ಷ ಕುಪ್ಪಂಡ ರಾಜೀವ್ ಕಾರ್ಯಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆದಿದೆ ಎಂದರು. ವೇದಿಕೆಯಲ್ಲಿ ಸಹ ಸಂಚಾಲಕ ಹೇಮಂತ್, ಸಂಯೋಜಕಿ ಮನೆಯಪಂಡ ಕಾಂತಿ ಸತೀಶ್, ಸಂಯೋಜಕ ಅಂಜಪರವಂಡ ಅನೀಲ್ ಮಂದಣ್ಣ, ಸವಿತಾ ಸಮಾಜದ ಅಧ್ಯಕ್ಷ ವೆಂಕಟೇಶ್, ಮುತ್ತಪ್ಪ ಮಲಯಾಳಿ ಸಮಾಜದ ಅಧ್ಯಕ್ಷ ಪಿ.ಜಿ. ಸುಮೇಶ್, ಸಂಯೋಜಕಿ ಪಟ್ರಪಂಡ ಗೀತಾ ಬೆಳ್ಯಪ್ಪ, ಕೊಡವ ಸಮಾಜದ ಪರವಾಗಿ ಸಂಪಿ ಪೂಣಚ್ಚ, ಮಾಳೇಟಿರ ಶ್ರೀನಿವಾಸ್, ಕಾವೇರಿ ಆಶ್ರಮದ ಪ್ರಮುಖರಾದ ಪ್ರತಾಪ್, ಪಟ್ಟಡ ರೀನಾ ಪ್ರಕಾಶ್, ಸಹ ಸಂಯೋಜಕ ಅಜಯ್ ರಾವ್, ಪ್ರದೀಪ್ ರೈ, ಕೂತಂಡ ಸಚಿನ್, ಸುರೇಶ್ ಚಾಮಿ, ಖಜಾಂಚಿ ಅಮ್ಮಣಿಚಂಡ ರಂಜನ್ ನಂಜಪ್ಪ, ಸಹ ಖಜಾಂಚಿ ವಿನೋದ್, ಕೋಶಾಧ್ಯಕ್ಷ ದುಶ್ಯಂತ್ ರಾವ್ ಸೇರಿದಂತೆ ಎಲ್ಲ ಹಿಂದೂ ಮುಖಂಡರುಗಳು, ಮತ್ತಿತರರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.