ಮಡಿಕೇರಿ, NEWS DESK ಫೆ.27 : ಸ್ಕೂಟರ್ ಡಿಕ್ಕಿಯಾದ ಪರಿಣಾಮ ರಸ್ತೆಗೆ ಬಿದ್ದ ವ್ಯಕ್ತಿಯ ಮೇಲೆ ಕಾರು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಮ್ಮತ್ತಿ ಸಮೀಪದ ಆನಂದಪುರದಲ್ಲಿ ಗುರುವಾರ ರಾತ್ರಿ ನಡೆದಿದೆ.
ಆನಂದಪುರದ ನಿವಾಸಿ ಏನೋಸ್ ಮನೋಹರ್ ಮನು (43) ಎಂಬುವವರೇ ಮೃತ ದುರ್ದೈವಿಯಾಗಿದ್ದು, ಸ್ಕೂಟರ್ ಚಾಲಕ ನೆಲ್ಯಹುದಿಕೇರಿ ಗ್ರಾಮದ ಹಂಸ ತೀವ್ರವಾಗಿ ಗಾಯಗೊಂಡಿದ್ದಾರೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಏನೋಸ್ ಮನೋಹರ್ ಮನು ಅವರಿಗೆ ಸ್ಕೂಟರ್ ಡಿಕ್ಕಿಯಾಗಿದೆ. ಈ ಸಂದರ್ಭ ರಸ್ತೆಗೆ ಬಿದ್ದ ಅವರ ಮೇಲೆ ಕಾರು ಹರಿದಿದೆ ಎಂದು ಹೇಳಲಾಗಿದೆ. ಕಾರಿನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸ್ಥಳಕ್ಕೆ ವೃತ್ತ ನಿರೀಕ್ಷಕ ರಾಜು, ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.







