ಮಡಿಕೇರಿ, NEWS DESK ಫೆ.27 : ಮಡಿಕೇರಿ ನಗರದ ಜ್ಯೋತಿ ನಗರ ಬಡಾವಣೆಯ ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.
ತಂತ್ರಿ ಬ್ರಹ್ಮಶ್ರಿ ಶ್ರೀಕಾಂತ್ ಭಟ್ಟತಿರಿ ಚಾಲೋಡ್ ಅವರ ನೇತೃತ್ವದಲ್ಲಿ ನಡೆದ ಬ್ರಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ನೂರಾರು ಭಕ್ತರು ಸಾಕ್ಷಿಯಾದರು.

ನಗರದ ಗಾಂಧಿ ಮೈದಾನದಿಂದ ದೇವಾಲಯದವರೆಗೆ ದೀಪಾಲಂಕೃತ ಮಂಟಪದಲ್ಲಿ ಭವ್ಯ ಕಳಸ ಮೆರವಣಿಗೆ ಸಾಗಿತು. ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ, ಪ್ರಸಾದ ಶುದ್ಧಿ, ವಾಸ್ತುಬಲಿ, ಭಗವತಿ ಸೇವೆ, ಮಹಾಗಣಪತಿ ಹೋಮ, ಉಷಾ ಪೂಜೆ, ಅನುಜ್ಞಾಕಲಶಾಭಿಷೇಕ, ಪ್ರಾರ್ಥನೆ, ಪ್ರಾಸಾದ ಪ್ರತಿಷ್ಠೆ, ಪೀಠ ಪ್ರತಿಷ್ಠೆ, ಬಿಂಭಪ್ರತಿಷ್ಠೆ, ಕಲಾಭಿಷೇಕ ಪೂಜೆ, ಮಹಾಪೂಜೆ ನೆರವೇರಿತು. ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು.







