ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಕೊಡಗು ಜಿಲ್ಲೆಯ ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ , ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ದೂ:- 08272 221077 , 08272 221099
ವಾಟ್ಸಾಪ್ ಸಂಖ್ಯೆ(Only message):- 8550001077







