
ಮಡಿಕೇರಿ NEWS DESK ಮಾ.2 : ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ಬೆಂಗಳೂರು ಕೊಡವ ಸಮಾಜ ತಿಳಿಸಿದೆ. ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಹಾಗೂ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಮಂಡೇಟಿರ ಸುನಿಲ್ ಪೊನ್ನಣ್ಣ ಅವರುಗಳು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗೌತಮ್ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಡಿಪಾರು ಮಾಡಬೇಕು ಮತ್ತು ಘಟನೆ ಮರುಕಳಿಸದಂತೆ ಪೊಲೀಸ್ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.








