
ಮಡಿಕೇರಿ NEWS DESK ಮಾ.2 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದೆ. ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರ ಪುತ್ತೂರಿನ ಅನಂತರಾಜ ಗೌಡ, ಅರೆಬಾಷಿಕ ಸಂಘಟನಾ ಕ್ಷೇತ್ರ ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ, ಅರೆಭಾ಼ಷೆ ಸಾಹಿತ್ಯ ಕ್ಷೇತ್ರ ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನುಪ್ರದಾನ ಮಾಡಲಾಗುವುದು. ಪ್ರಶಸ್ತಿಯು 50 ಸಾವಿರ ರೂಪಾಯಿ
ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಅಂದು ನಡೆಯುವ ಸಮಾರಂಭದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ಹಾಗೂ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.








