Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.2:-ಮಡಿಕೇರಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ನಗರದ ಹಳೆ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಆಟೋ ರಿಕ್ಷಾ ನಿಲ್ದಾಣ ಹಾಗೂ ಕಾವೇರಿ ಕಾರು ಚಾಲಕ ಮಾಲೀಕರ ಸಂಘದ ಕಾರು ನಿಲ್ದಾಣಗಳಿಗೆ 11 ಲಕ್ಷ ರೂ ವೆಚ್ಚದ ಸುಸಜ್ಜಿತ ಮೇಲ್ಚಾವಣಿ ಹಾಗೂ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ 16 ಲಕ್ಷ ರೂ ವೆಚ್ಚದ ಸುಸಜ್ಜಿತ ಶೌಚಾಲಯದೊಂದಿಗೆ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕ್ಷೇತ್ರದ ಜನರ ಕೋರಿಕೆಯನ್ನು ಈಡೇರಿಸುವ ಜೊತೆಗೆ ಕ್ಷೇತ್ರದ ಜನರ ಒಳಿತಿಗಾಗಿ ಅಭಿವೃದ್ಧಿ ಕಾರ್ಯ ಮಾಡುವುದು ಜನಪ್ರತಿನಿಧಿಯ ಕರ್ತವ್ಯ ವಾಗಿದೆ. ಈ ನಿಟ್ಟಿನಲ್ಲಿ ಅತ್ಯಂತ ಹೆಚ್ಚು ಮಳೆ ಬೀಳುವ ಪ್ರದೇಶವಾದ ಮಡಿಕೇರಿ ನಗರದ ಜನರ ಬವಣೆಯನ್ನು ಗಮನಿಸಿ ಈ ಎರಡು ಕಾಮಗಾರಿಗಳಿಗೆ ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ಒದಗಿಸಲಾಗಿದೆ ಎಂದು ಡಾ. ಮಂತರ್ ಗೌಡ ಅವರು ಮಾಹಿತಿ ನೀಡಿದರು. ಕೊರವಂಡ ಕುಟುಂಬಸ್ಥರು ಮಡಿಕೇರಿ ನಗರದ ವಿವಿಧ ಭಾಗದಲ್ಲಿ ಅನೇಕ ಸ್ಥಳಗಳನ್ನು ದಾನವಾಗಿ ನೀಡಿದ್ದು ಆ ಕುಟುಂಬದ ಸದಸ್ಯರ ಅನುಮತಿ ಪಡೆದು ಅವರ ಹೆಸರನ್ನು ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.


ಕೊಡಗು ಜಿಲ್ಲಾ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಡಿ.ಹೆಚ್.ಮೇದಪ್ಪ ಅವರು ಮಾತನಾಡಿ, ನಮ್ಮ ಸಮಸ್ಯೆಯನ್ನು ಗಮನಿಸಿ ಪರಿಹಾರ ಒದಗಿಸುವ ಕೆಲಸವನ್ನು ಡಾ.ಮಂತರ್ ಗೌಡ ಅವರು ಮಾಡಿದ್ದು, ಇಂತಹ ಶಾಸಕರನ್ನು ಪಡೆದಿರುವ ಕ್ಷೇತ್ರದ ಜನರ ಪುಣ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾವೇರಿ ವಾಹನ ಚಾಲಕರು ಮತ್ತು ಮಾಲಿಕರ ಸಂಘದ ಸ್ಥಾಪಕ ಅಧ್ಯಕ್ಷರಾದ ಬದ್ದಂಜೆಟ್ಟಿರ ಜೈ ಜಗದೀಶ್ ಮಾತನಾಡಿ, ತಾವು ಕಳೆದ ಒಂದೂವರೆ ದಶಕದಿಂದ ಮೇಲ್ಚಾವಣಿ ಹಾಕಿಸಲು ಪ್ರಯತ್ನಪಟ್ಟಿದ್ದು ಈಗ ಶಾಸಕರ ಕಾಳಜಿಯಿಂದ ಕನಸು ನನಸಾಗುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಅವರು ಮಾತನಾಡಿ ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ಸಕಾಲದಲ್ಲಿ ಆಗಲಿ ಮತ್ತು ಅನುದಾನ ಒದಗಿಸಿದ ಶಾಸಕರಿಗೆ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಲು ಚೈತನ್ಯ ಸಿಗಲಿ ಎಂದು ಪ್ರಾರ್ಥಿಸಿದರು.
ಮಡಿಕೇರಿ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಸಮದ್ ಹಾಗೂ ಕಾವೇರಿ ಕಾರು ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷರಾದ ಸತೀಶ್ ಬಿ.ಜೆ. ಅವರು ನಾಗರಿಕರ ಪರವಾಗಿ ಶಾಸಕರನ್ನು ಸನ್ಮಾನಿಸಿದರು.


ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ವೈ.ರಾಜೇಶ್, ಮೆಡಿಕಲ್ ಕಾಲೇಜ್ ಪ್ರಾಂಶುಪಾಲರಾದ ಡಾ. ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಆಟೋ ಚಾಲಕರ ಸಂಘದ ಪದಾಧಿಕಾರಿಗಳಾದ ಬಾರನ ದಿನೇಶ್, ಮುದ್ದಿಯನ ಪ್ರವೀಣ್, ಸುನೀಲ್, ಹನ್ಸಾರ್, ಸುಕುಮಾರ್, ನಾಗರಾಜ್, ಗಣೇಶ್, ಕಾರು ಮಾಲಿಕರ ಸಂಘದ ಪದಾಧಿಕಾರಿಗಳಾದ ಜಪ್ಪು, ಉನೈದ್, ಸಂತೋμï, ರಮೇಶ್ ವಿ.ಬಿ., ಪ್ರಮುಖರಾದ ಪ್ರಕಾಶ್ ಆಚಾರ್ಯ, ಮಂಡಿರ ಸದಾ ಮುದ್ದಪ್ಪ, ಹೆಚ್.ಎ.ಹಂಸ, ಜಿ.ಸಿ.ಜಗದೀಶ್, ವಿ.ಜಿ.ಮೋಹನ್, ಶರಣ್, ಕವನ್ ಕೊತ್ತೋಳಿ, ಶಶಿ,ಮೀನಾಜ್, ಫ್ಯಾನ್ಸಿ ಪಾರ್ವತಿ, ಮುದ್ದು ರಾಜ್,ಜುಲೇಕಾಬಿ, ಸೇರಿದಂತೆ ಸಂಘದ ಸದಸ್ಯರು, ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು, ನಾಗರಿಕರು ಹೆಚ್ಚಿನ ಸಂಘದ ಸದಸ್ಯರು ಇದ್ದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
Next Article *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.