ಮಡಿಕೇರಿ, NEWS DESK ಮಾ.02:-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್, 06 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ಅಪೋಲೋ ಫಾರ್ಮಸಿ ಮೈಸೂರು, ಜಾಯ್ ಆಲುಕಾಸ್ ಜ್ಯುವೆಲ್ಲರಿ ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋರೂಂ, ಮಡಿಕೇರಿ, ಕೂರ್ಗ್ ಕ್ಲಿಪ್ಸ್ ರೆಸಾರ್ಟ್ ಸಿದ್ದಾಪುರ, ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ, ಆಲ್ಫಾ ಟೆಕ್ನಾಲಜಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್ ಅವರು ತಿಳಿಸಿದ್ದಾರೆ.
Breaking News
- *ಅ.6ರಂದು ಆಂಜನೇಯ ದೇವಾಲಯದಲ್ಲಿ ನವಗ್ರಹ ಪೂಜೆ*
- *ಹುದಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ*
- *ವಿರಾಜಪೇಟೆ ಗಣೇಶೋತ್ಸವ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ ಸಾವು*
- *ಶಿಥಿಲಾವಸ್ಥೆಯಲ್ಲಿದ್ದ ಅಕ್ಷರ ದಾಸೋಹ ಅಡುಗೆ ಮನೆಗೆ ಶ್ರಮದಾನದ ಮೂಲಕ ಕಾಯಕಲ್ಪ*
- *ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*
- *ಗಣಪತಿ ಕೊಡವ ಕೇರಿಯ ವಾರ್ಷಿಕ ಮಹಾಸಭೆ ಹಾಗೂ ಒತ್ತೋರ್ಮೆ ಕೂಟ*
- *ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*
- *ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*
- *ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*
- *ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*







