Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಹಿಂದೂ ಮಲಯಾಳಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ಕೌಟ್ಸ್ ಮತ್ತು ಗೈಡ್ಸ್ ಚಾರಣಿಗರಿಗೆ ಪ್ರಮಾಣ ಪತ್ರ ವಿತರಣೆ : ಚಾರಣದಿಂದ ಸಾಹಸ ಮನೋಭಾವ ಹಾಗೂ ಆತ್ಮವಿಶ್ವಾಸ ಬೆಳೆಯುತ್ತದೆ : ಈರಮಂಡ ಹರಿಣಿ ವಿಜಯ್ ಅಭಿಮತ*
  • test
  • *‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕದ ಮೂಲಕ ಜಾಗೃತಿ*
  • *ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*
  • *ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*
  • *ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಸಭೆ*
  • *ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*
  • *ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*
  • *ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ಕೌಟ್ಸ್ ಮತ್ತು ಗೈಡ್ಸ್ ಚಾರಣಿಗರಿಗೆ ಪ್ರಮಾಣ ಪತ್ರ ವಿತರಣೆ : ಚಾರಣದಿಂದ ಸಾಹಸ ಮನೋಭಾವ ಹಾಗೂ ಆತ್ಮವಿಶ್ವಾಸ ಬೆಳೆಯುತ್ತದೆ : ಈರಮಂಡ ಹರಿಣಿ ವಿಜಯ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ಕೌಟ್ಸ್ ಮತ್ತು ಗೈಡ್ಸ್ ಚಾರಣಿಗರಿಗೆ ಪ್ರಮಾಣ ಪತ್ರ ವಿತರಣೆ : ಚಾರಣದಿಂದ ಸಾಹಸ ಮನೋಭಾವ ಹಾಗೂ ಆತ್ಮವಿಶ್ವಾಸ ಬೆಳೆಯುತ್ತದೆ : ಈರಮಂಡ ಹರಿಣಿ ವಿಜಯ್ ಅಭಿಮತ*

ಮಾರ್ಚ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ  NEWS DESK ಮಾ.4 : ಪ್ರಕೃತಿಯ ನಡುವಿನ ಚಾರಣ ವಿದ್ಯಾರ್ಥಿಗಳಲ್ಲಿ ಸಾಹಸ ಮನೋಭಾವ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಕೋಡಂಬೂರು ಮೂರ್ನಾಡು ಜ್ಞಾನಜ್ಯೋತಿ ವಿದ್ಯಾ ಸಂಸ್ಥೆಯ ಸಹಕಾರದೊಂದಿಗೆ  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಿಕೇರಿ ಸ್ಥಳೀಯ ಸಂಸ್ಥೆಯ ವತಿಯಿಂದ ಇತ್ತೀಚೆಗೆ ವಿರಾಜಪೇಟೆಯ ಮಲೆತಿರಿಕೆ ಬೆಟ್ಟದಲ್ಲಿ ನಡೆದ ಚಾರಣದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಚಾರಣವು ಹಸಿರ ಪ್ರಕೃತಿ ಸೌಂದರ್ಯವನ್ನು ಸವಿಯಲು ಉತ್ತಮ ಅವಕಾಶವಾಗಿದೆ. ಅಲ್ಲದೆ ಮಾನಸಿಕ ಶಾಮತಿ ಮತ್ತು ದೈಹಿಕ ಸದೃಢತೆ ಹೆಚ್ಚಾಗುತ್ತದೆ. ಬೆಟ್ಟಗುಡ್ಡಗಳ ಮತ್ತು ಕಾಡುಗಳ ನಡುವಿನ ಪಯಣ ಹೊಸ ಅನುಭವವನ್ನು ನೀಡುತ್ತದೆ.   ದೈನಂದಿನ ಜೀವನದ ಒತ್ತಡದಿಂದ ಮುಕ್ತಿ ಪಡೆದು ಸಾಹಸಮಯ ಕ್ಷಣಗಳಿಗೆ ದೇಹವನ್ನು ಒಗ್ಗಿಸಿಕೊಳ್ಳಲು ಚಾರಣ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳ ಶಿಸ್ತುಬದ್ಧ ಬದುಕಿಗೆ ದಾರಿದೀಪವಾಗಿದೆ. ಶೈಕ್ಷಣಿಕ ಮತ್ತು ವೈಯುಕ್ತಿಕ ಬೆಳವಣಿಗೆಯೊಂದಿಗೆ, ಸರಕಾರಿ ಉದ್ಯೋಗಗಳ ನೇಮಕಾತಿ, ಸೇನೆಗೆ ಸೇರ್ಪಡೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಪುರಸ್ಕಾರಗಳಿಗೆ ಚಾರಣದಂತಹ ಚಟುವಟಿಕೆಗಳು ಸಹಾಯವಾಗಲಿದೆ ಎಂದು ಈರಮಂಡ ಹರಿಣಿ ವಿಜಯ್ ತಿಳಿಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಿಕೇರಿ ಸ್ಥಳೀಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್ ಮಾತನಾಡಿ ಚಾರಣದಲ್ಲಿ ಪಾಲ್ಗೊಂಡ   ವಿದ್ಯಾರ್ಥಿಗಳ ಶಿಸ್ತುಬದ್ಧ ನಡವಳಿಕೆ ಶ್ಲಾಘನೀಯ. ಇದಕ್ಕೆ ಕಾರಣಕರ್ತರಾದ ಶಾಲಾ ಶಿಕ್ಷಕರು ಹಾಗೂ ಸ್ಕೌಟ್ಸ್, ಗೈಡ್ಸ್ ನ ಶಿಕ್ಷಕರು ಅಭಿನಂದನಾರ್ಹರು ಎಂದರು.  ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಕ್ಷಕರಾದ ಗುಲ್ಶನ್ ತೇಲಪಂಡ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಕಷ್ಟಗಳು ಎದುರಾದರೂ ಅದನ್ನು ಎದುರಿಸುವ ಧೈರ್ಯವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ನೀಡುತ್ತದೆ. ಸಂಸ್ಥೆಯ ಕಾರ್ಯಚಟುವಟಿಕೆಗಳ ಲಾಭವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಜ್ಞಾನಜ್ಯೋತಿ ಶಾಲೆಯ ಮುಖ್ಯ ಶಿಕ್ಷಕಿ ಶಿಲ್ಪಾ ಪೊನ್ನಮ್ಮ ಅವರು ಮಾತನಾಡಿ ಶಿಸ್ತುಬದ್ಧ ಜೀವನವು ಯಶಸ್ಸು, ಆರೋಗ್ಯ ಮತ್ತು ನೆಮ್ಮದಿಗೆ ಮೂಲಾಧಾರವಾಗಿದೆ. ಇದು ಸಮಯ ಪಾಲನೆ, ಸ್ವಯಂ-ನಿಯoತ್ರಣ ಹಾಗೂ ಉತ್ತಮ ನಿಯಮಗಳ ಪಾಲನೆಯನ್ನು ಒಳಗೊಂಡಿದೆ. ಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸ್ಪಷ್ಟ ಗುರಿಗಳನ್ನು ಸಾಧಿಸಲು ವ್ಯಕ್ತಿಯನ್ನು ಸಬಲೀಕರಣಗೊಳಿಸುತ್ತದೆ. ವಿದ್ಯಾರ್ಥಿಗಳಿಂದ ಹಿಡಿದು ವೃತ್ತಿಪರರವರೆಗೆ ಪ್ರತಿಯೊಬ್ಬರಿಗೂ ಶಿಸ್ತಿನ ಜೀವನ ಅತ್ಯಗತ್ಯವಾಗಿದೆ. ದೈನಂದಿನ ಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಇದು ಸಹಾಯ ಮಾಡುತ್ತದೆ ಎಂದು ತಿಳಿಸಿದರು. *ಪ್ರಬಂಧ ಸ್ಪರ್ಧೆ* ಚಾರಣಕ್ಕೆ ಸಂಬoಧಿಸಿದoತೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಚಾರಣದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಹಿಮಾಲಯನ್ ವುಡ್ ಬ್ಯಾಡ್ಜ್ ಪಡೆದ ಗುಲ್ಶನ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಕ್ಷಕಿಯರು ಪ್ರಾರ್ಥಿಸಿದರು. ಗೈಡ್ಸ್ ವಿದ್ಯಾರ್ಥಿನಿ ಪೂರ್ವಿ ಸ್ವಾಗತಿಸಿ, ಹನ್ಸಿಕ ನಿರೂಪಿಸಿ, ಶಾಲಾ ವಿದ್ಯಾರ್ಥಿ ದಕ್ಷ ಪ್ರಿಯ ವಂದಿಸಿದರು. ಸ್ಕೌಟ್ಸ್ ವಿದ್ಯಾರ್ಥಿ ನಿತಿನ್ ಕೆ.ಆರ್ ಹಾಗೂ ಗೈಡ್ಸ್ ವಿದ್ಯಾರ್ಥಿನಿ ಶಿಲ್ಪಿತ ಚಾರಣದ ಕುರಿತು ಅಭಿಪ್ರಾಯ ಹಂಚಿಕೊoಡರು. ಸ್ಕೌಟ್ಸ್ ಮತ್ತು ಗೈಡ್ಸ್ ನ ಸಹ ಕಾರ್ಯದರ್ಶಿ ಸೂರಜ್ ತಿಮ್ಮಯ್ಯ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಹಿಂದೂ ಮಲಯಾಳಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 4, 2026

test

ಮಾರ್ಚ್ 4, 2026

*‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕದ ಮೂಲಕ ಜಾಗೃತಿ*

ಮಾರ್ಚ್ 3, 2026

*ಸ್ಕೌಟ್ಸ್ ಮತ್ತು ಗೈಡ್ಸ್ ಚಾರಣಿಗರಿಗೆ ಪ್ರಮಾಣ ಪತ್ರ ವಿತರಣೆ : ಚಾರಣದಿಂದ ಸಾಹಸ ಮನೋಭಾವ ಹಾಗೂ ಆತ್ಮವಿಶ್ವಾಸ ಬೆಳೆಯುತ್ತದೆ : ಈರಮಂಡ ಹರಿಣಿ ವಿಜಯ್ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ  NEWS DESK ಮಾ.4 : ಪ್ರಕೃತಿಯ ನಡುವಿನ ಚಾರಣ ವಿದ್ಯಾರ್ಥಿಗಳಲ್ಲಿ ಸಾಹಸ ಮನೋಭಾವ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತದೆ ಎಂದು…

test

ಮಾರ್ಚ್ 4, 2026

*‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕದ ಮೂಲಕ ಜಾಗೃತಿ*

ಮಾರ್ಚ್ 3, 2026

*ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*

ಮಾರ್ಚ್ 3, 2026

*ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*

ಮಾರ್ಚ್ 3, 2026

*ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಸಭೆ*

ಮಾರ್ಚ್ 3, 2026

*ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*

ಮಾರ್ಚ್ 3, 2026

*ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*

ಮಾರ್ಚ್ 3, 2026

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.