Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.6ರಂದು ಆಂಜನೇಯ ದೇವಾಲಯದಲ್ಲಿ ನವಗ್ರಹ ಪೂಜೆ*
  • *ಹುದಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ*
  • *ವಿರಾಜಪೇಟೆ ಗಣೇಶೋತ್ಸವ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ ಸಾವು*
  • *ಶಿಥಿಲಾವಸ್ಥೆಯಲ್ಲಿದ್ದ ಅಕ್ಷರ ದಾಸೋಹ ಅಡುಗೆ ಮನೆಗೆ ಶ್ರಮದಾನದ ಮೂಲಕ ಕಾಯಕಲ್ಪ*
  • *ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*
  • *ಗಣಪತಿ ಕೊಡವ ಕೇರಿಯ ವಾರ್ಷಿಕ ಮಹಾಸಭೆ ಹಾಗೂ ಒತ್ತೋರ್ಮೆ ಕೂಟ*
  • *ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*
  • *ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*
  • *ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*
  • *ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 20262 Mins ReadBy Lakshmish S K
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.04:-ತಾಲ್ಲೂಕಿನ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಗಾಂಧಿಭವನದಲ್ಲಿ ಬುಧವಾರ ನಡೆದ ವಿಶೇಷ ಕಾರ್ಯಾಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ, ಶಾಲಾ-ಕಾಲೇಜು, ಅಂಗನವಾಡಿ, ಆರೋಗ್ಯ ಕೇಂದ್ರಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರನ್ನು ಎಂದಿನಂತೆ ಸಮರ್ಪಕವಾಗಿ ಪೂರೈಸಬೇಕು ಎಂದು ಶಾಸಕರು ಸೂಚಿಸಿದರು.
ಕುಡಿಯುವ ನೀರಿನ ಪೂರೈಕೆಯ ಸಂದರ್ಭ ವಿದ್ಯುತ್ ಕಡಿತಗೊಳಿಸಬಾರದು, ಸಾರ್ವಜನಿಕರು ಕುಡಿಯುವ ನೀರನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಲು ನಗರಸಭೆಯಿಂದ ಆಗಾಗೆ ಸೂಚನೆ ನೀಡಬೇಕು ಎಂದರು.


ಜಲಜೀವನ್ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಶಾಸಕರು ಅಧಿಕಾರಿಗಳಿಗೆ ಡಾ.ಮಂತರ್ ಗೌಡ ಅವರು ನಿರ್ದೇಶನ ನೀಡಿದರು.
ಬೇಸಿಗೆಯಲ್ಲಿ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ವತಿಯಿಂದ ಎಚ್ಚರವಹಿಸಬೇಕು. ಜತೆಗೆ ಜಾಗೃತಿ ಮೂಡಿಸಬೇಕು. ಶಾಲೆ, ಕಾಲೇಜು, ಸೇರಿದಂತೆ ವಿವಾಹ ಸಂದರ್ಭದಲ್ಲಿ ನೀರಿನ ಟ್ಯಾಂಕ್‍ಗಳನ್ನು ಪರಿಶೀಲಿಸುವಂತೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಸಂಬಂಧ ಪಟ್ಟವರಿಗೆ ಸೂಚನೆ ನೀಡಬೇಕು,
ರಾಜಕಾಲುವೆ, ಚರಂಡಿಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆಗಳಿಗೆ ಅಡ್ಡವಾಗಿ ಬೆಳೆದಿರುವ ಗಿಡಗಂಟಿಗಳನ್ನು ಕಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಇರಬೇಕು ಹಾಗೂ ಸಾರ್ವಜನಿಕರಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ಸಿಗಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.


ಅಂಗನವಾಡಿಗಳಿಗೆ ಸಮಯಕ್ಕೆ ಸರಿಯಾಗಿ ಪೌಷ್ಠಿಕಾಂಶದ ಆಹಾರ ಸಾಮಾಗ್ರಿಗಳನ್ನು ಪೂರೈಕೆ ಮಾಡಬೇಕು. ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುವಂತಾಗಬೇಕು ಎಂದು ತಿಳಿಸಿದರು.
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಪ್ರಗತಿ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್ ಅವರಿಂದ ಶಾಸಕರು ಮಾಹಿತಿ ಪಡೆದರು.
ತಾ.ಪಂ.ಇಒ ಶೇಖರ್ ಮಾತನಾಡಿ, ಈಗಾಗಲೇ ಗ್ರಾ.ಪಂ ಮಟ್ಟದಲ್ಲಿ ಟಾಸ್ಕ್‍ಫೆÇೀರ್ಸ್ ಸಭೆ ನಡೆಸಲಾಗಿದ್ದು, ಕುಡಿಯುವ ನೀರು ಮತ್ತು ಜಾನುವಾರಿಗೆ ಮೇವು ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ತಾ.ಪಂ.ಆಡಳಿತಾಧಿಕಾರಿ ಚಂದ್ರಶೇಖರ್, ತಹಶೀಲ್ದಾರ್ ಶ್ರೀಧರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಶಿಧರ್, ಸೆಸ್ಕ್ ಎಇಇ ವಿನಯ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾ.ಪಂ.ಆಡಳಿತಾಧಿಕಾರಿಗಳು, ಪಿಡಿಒಗಳು, ಗ್ರಾಮ ಆಡಳಿತರಾಧಿಕಾರಿ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಅ.6ರಂದು ಆಂಜನೇಯ ದೇವಾಲಯದಲ್ಲಿ ನವಗ್ರಹ ಪೂಜೆ*

ಅಕ್ಟೋಬರ್ 6, 2026

*ಹುದಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ*

ಅಕ್ಟೋಬರ್ 5, 2026

*ವಿರಾಜಪೇಟೆ ಗಣೇಶೋತ್ಸವ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ ಸಾವು*

ಅಕ್ಟೋಬರ್ 5, 2026

*ಹುದಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ*

ಅಕ್ಟೋಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹುದಿಕೇರಿ, NEWS DESK ಅ.5: ಹುದಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ಹುದಿಕೇರಿ ಕೊಡವ…

*ವಿರಾಜಪೇಟೆ ಗಣೇಶೋತ್ಸವ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ ಸಾವು*

ಅಕ್ಟೋಬರ್ 5, 2026

*ಶಿಥಿಲಾವಸ್ಥೆಯಲ್ಲಿದ್ದ ಅಕ್ಷರ ದಾಸೋಹ ಅಡುಗೆ ಮನೆಗೆ ಶ್ರಮದಾನದ ಮೂಲಕ ಕಾಯಕಲ್ಪ*

ಅಕ್ಟೋಬರ್ 5, 2026

*ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*

ಅಕ್ಟೋಬರ್ 5, 2026

*ಗಣಪತಿ ಕೊಡವ ಕೇರಿಯ ವಾರ್ಷಿಕ ಮಹಾಸಭೆ ಹಾಗೂ ಒತ್ತೋರ್ಮೆ ಕೂಟ*

ಅಕ್ಟೋಬರ್ 5, 2026

*ಗೌರಿ-ಗಣೇಶ ಉತ್ಸವದ ಬಳಿಕ ಬಸವೇಶ್ವರ ದೇವಸ್ಥಾನದಲ್ಲಿ ಶಾಂತಿ ಪೂಜೆ*

ಅಕ್ಟೋಬರ್ 5, 2026

*ಬಿಟ್ಟಂಗಾಲದಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ರೈತ ಕ್ಷೇತ್ರ ಪಾಠಶಾಲೆ*

ಅಕ್ಟೋಬರ್ 5, 2026

*ಚೆಟ್ಟಳ್ಳಿಯಲ್ಲಿ ಸಂಭ್ರಮದ ಓಣಂ ಆಚರಣೆ*

ಅಕ್ಟೋಬರ್ 5, 2026

*ವಿರಾಜಪೇಟೆಯಲ್ಲಿ YSS ವತಿಯಿಂದ ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮ*

ಅಕ್ಟೋಬರ್ 5, 2026

*ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘಕ್ಕೆ ನೂತನ ಆಡಳಿತ ಮಂಡಳಿ*

ಅಕ್ಟೋಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.