Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.5 : ವಿಶ್ವದ ಕ್ರೀಡಾಕ್ಷೇತ್ರದ ಗಮನ ಸೆಳೆದಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವವನ್ನು ಈ ಬಾರಿ ಕೋಕೇರಿ ಗ್ರಾಮದ ಚೇನಂಡ ಕುಟುಂಬಸ್ಥರು ಆಯೋಜಿಸಿದ್ದಾರೆ. ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಹಬ್ಬ ನಡೆಯಲಿದ್ದು, ತಂಡಗಳು ಹೆಸರು ನೋಂದಾಯಿಸಿಕೊಳ್ಳಲು ಮಾ.20 ಕೊನೆಯ ದಿನವಾಗಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಕಿ ಉತ್ಸವದ ಕಾರ್ಯದರ್ಶಿ ಸಿ.ಎಸ್.ಮಧು ಮಾದಯ್ಯ ನಾಪೋಕ್ಲುವಿನಲ್ಲಿ ಒಟ್ಟು ನಾಲ್ಕು ಮೈದಾನಗಳಲ್ಲಿ ವಿಜೃಂಭಣೆಯಿಂದ ನಡೆಯುವ 26ನೇ ವರ್ಷದ ಚೇನಂಡ ಕಪ್ ಹಾಕಿ ಉತ್ಸವದ ಕುರಿತು ಮಾಹಿತಿ ನೀಡಿದರು.
ಈ ಬಾರಿಯ ಹಾಕಿ ಉತ್ಸವದಲ್ಲಿ 400 ಪುರುಷ ಹಾಗೂ 120 ಮಹಿಳಾ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮೂರು ಮೈದಾನಗಳ ತಯಾರಿ ಕಾರ್ಯ ಭರದಿಂದ ಸಾಗಿದ್ದು, 4ನೇ ಮೈದಾನವನ್ನು ಕುಂಡ್ಯೋಳಂಡ ಕುಟುಂಬಸ್ಥರು ನಿರ್ಮಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ 33 ನೋಂದಣಿ ಕೇಂದ್ರಗಳಲ್ಲಿ ತಂಡಗಳ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಆನ್ ಲೈನ್ ಮೂಲಕವೂ ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಸಂಖ್ಯೆಯ ಕುಟುಂಬಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಏ.5 ರಂದು ಹಾಕಿ ಉತ್ಸವ ಅದ್ದೂರಿಯಾಗಿ ಉದ್ಘಾಟನೆಗೊಳ್ಳಲಿದೆ, ಮೇ 2 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಪಾಲ್ಗೊಳ್ಳಲಿದ್ದಾರೆ. ಖ್ಯಾತ ಟೆನ್ನಿಸ್ ಪಟು ಪದ್ಮಶ್ರೀ ಪುರಸ್ಕೃತ ಕೋಕೇರಿ ಗ್ರಾಮದ ಮಚ್ಚಂಡ ರೋಹನ್ ಬೋಪಣ್ಣ ಅವರನ್ನು ಸನ್ಮಾನಿಸಲಾಗುವುದು.
ಹಾಕಿ ಉತ್ಸವ ಕೇವಲ ಹಾಕಿ ಪಂದ್ಯಾಟಕ್ಕೆ ಸೀಮಿತವಾಗಿರದೆ ಮೆರಥಾನ್ 2*2, ರಿಲೇ 4*100 ಹಾಗೂ ಇತರ ಕ್ರೀಡೆಗಳನ್ನು ಕೂಡ ಆಯೋಜಿಸಲು ನಿರ್ಧರಿಸಲಾಗಿದೆ. ಕುಂಡ್ಯೋಳಂಡ ಕುಟುಂಬಸ್ಥರು ಕೊಡವ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನಡೆಸಿದ “ಆಟ್ ಪಾಟ್ ಪಡಿಪು’ ಕಾರ್ಯಕ್ರಮವನ್ನು ನಾವು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ. ಅಲ್ಲದೆ ಕಳೆದ ವರ್ಷ ಮುದ್ದಂಡ ಕುಟುಂಬಸ್ಥರು ಆಯೋಜಿಸಿದ್ದ ಅತ್ಯುತ್ತಮ ಸಾಮಾಜಿಕ ಕಾರ್ಯಕ್ರಮಗಳನ್ನು ಈ ಬಾರಿಯೂ ಅಳವಡಿಸಿಕೊಳ್ಳುತ್ತೇವೆ. ನಮ್ಮ ಎಲ್ಲಾ ಪ್ರಯತ್ನಗಳಿಗೆ ಜಿಲ್ಲೆಯ ಇಬ್ಬರು ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಕೊಡವ ಹಾಕಿ ಅಕಾಡೆಮಿ, ಹಾಕಿ ಕೂರ್ಗ್ ಮತ್ತು ಹಾಕಿ ಕರ್ನಾಟಕದ ಪ್ರತಿನಿಧಿಗಳು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ಸಿ.ಎಸ್.ಮಧು ಮಾದಯ್ಯ ವಿವರಿಸಿದರು.


*ಹಾಕಿ ತರಬೇತಿ*
ಜನವರಿ ಮೊದಲ ವಾರದಲ್ಲಿ ಇದೇ ಪ್ರಥಮ ಬಾರಿಗೆ ಕೊಡಗಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರಿಗೆ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಹಾಕಿ ಪಂದ್ಯಾಟವನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ 10 ರಿಂದ 15 ವರ್ಷದೊಳಗಿನ 24 ಉತ್ತಮ ಹಾಕಿಪಟುಗಳನ್ನು ಆಯ್ಕೆ ಮಾಡಲಾಯಿತು. ಇವರಿಗೆ ಮಾ.25 ರಿಂದ ಸುಮಾರು ಒಂದು ತಿಂಗಳ ಕಾಲ ನಾಪೋಕ್ಲುವಿನಲ್ಲಿ ನುರಿತ ಹಾಕಿಪಟುಗಳಿಂದ ತರಬೇತಿ ನೀಡಲಾಗುವುದು ಮತ್ತು ಅವರ ಮುಂದಿನ ಕ್ರೀಡಾ ಕ್ಷೇತ್ರದ ಭವಿಷ್ಯಕ್ಕೆ ಮುನ್ನುಡಿ ಬರೆಯಲಾಗುವುದು ಎಂದರು.
ಈ ರೀತಿಯಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಕ್ರೀಡಾಸಕ್ತರು 8277235111 ಮೊಬೈಲ್ ಸಂಖ್ಯೆಯನ್ನು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯೊಳಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

*ಹಾಡು ಬಿಡುಗಡೆ*
ಇದೇ ಸಂದರ್ಭ ಚೇನಂಡ ಕಪ್ ಹಾಕಿ ಉತ್ಸವದ ಕುರಿತು ಕ್ಯಾಪ್ಟನ್ ಬಿದ್ದಂಡ ನಾಣಯ್ಯ ಅವರು ರಚಿಸಿ, ಗಾಯಕಿಯರಾದ ರಶ್ಮಿ ಕಾರ್ಯಪ್ಪ ಹಾಗೂ ವಿದ್ಯಾ ಜಗದೀಶ್ ಹಾಡಿರುವ ಹಾಡನ್ನು ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಕಂಬಣಿ ಕರುಂಬಯ್ಯ ಬಿಡುಗಡೆಗೊಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ದೀನಾ ಚಂಗಪ್ಪ, ಸಹ ಕಾರ್ಯದರ್ಶಿ ತಮ್ಮಿ ತಮ್ಮಯ್ಯ, ಸದಸ್ಯ ರೋಹನ್ ಪೊನ್ನಯ್ಯ, ನಂದ ಜಗದೀಶ್, ಗೀತೆ ರಚನೆಕಾರ ಕ್ಯಾಪ್ಟನ್ ಬಿದ್ದಂಡ ನಾಣಯ್ಯ, ಗಾಯಕಿಯರಾದ ರಶ್ಮಿ ಕಾರ್ಯಪ್ಪ ಹಾಗೂ ವಿದ್ಯಾ ಜಗದೀಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.