
ನಾಪೋಕ್ಲು NEWS DESK ಮಾ.6 : ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಮೊದಲ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ ಮಾ.8ರಂದು ಅದ್ದೂರಿಯಾಗಿ ನಡೆಯಲಿದೆ. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಅವರು ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ವೈವಿಧ್ಯಮಯ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಭಾನುವಾರ ಬೆಳಿಗ್ಗೆ 10.30ಗಂಟೆಗೆ ಕಾರುಗುಂದ ಗೌಡ ಸಮಾಜದಲ್ಲಿ ಸಮಾರಂಭವನ್ನು ಆಯೋಜಿಸಲಾಗಿದೆ. ಚೆಟ್ಟಿಮಾನಿಯ ನಿವೃತ್ತ ಪ್ರಾಧ್ಯಾಪಕಿ ಸುಳ್ಯಕೋಡಿ ಶಿವದೇವಿ ಅವನಿಶ್ಚಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಕಾರ್ಯಕ್ರಮ ಉದ್ಘಾಟಿಸುವರು. ಬೆಂಕಿ ಇಲ್ಲದ ಅಡುಗೆ ಪದಾರ್ಥಗಳ ಪ್ರದರ್ಶನವನ್ನು ಕೊಡಗು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಸ್ಥಾಪಕ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್ ಉದ್ಘಾಟಿಸುವರು. ಕರಕುಶಲ ವಸ್ತು ಪ್ರದರ್ಶನವನ್ನು ಕುಶಾಲನಗರದ ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಕಲಾ ಆನಂದ್ ಕರಂದ್ಲಾಜೆ ಉದ್ಘಾಟಿಸುವರು. ಮಹಿಳೆಯರು ಸಿದ್ಧಪಡಿಸಿದ ಕರಕುಶಲ ವಸ್ತುಗಳ ಮತ್ತು ಖಾದ್ಯ ಪದಾರ್ಥಗಳ ಮಾರಾಟ ಮಳಿಗೆಗಳನ್ನು ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕಿ ಕೂಪದಿರ ಶಾರದಾ ನಂಜಪ್ಪ ಉದ್ಘಾಟಿಸುವರು. ಆರೋಗ್ಯ ತಪಾಸಣಾ ಶಿಬಿರವನ್ನು ಕಾರುಗುಂದ ಗೌಡ ಸಮಾಜದ ನಿರ್ದೇಶಕಿ ನೆಯ್ಯಣಿ ಹೇಮಲತಾ ತಾರೇಂದ್ರ ಉದ್ಘಾಟಿಸುವರು. ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಕೆ.ಭರತ್ ಲೋಗೋ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚೇರಂಬಾಣೆಯ ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಕೂರನ ಸುಶೀಲ ಅಪ್ಪಾಜಿ, ಚೇರಂಬಾಣೆಯ ಸಮೃದ್ಧಿ ಡಯಾಗ್ನೋಸ್ಟಿಕ್ ಹೆಲ್ತ್ ಕೇರ್ ಸೆಂಟರ್ ವ್ಯವಸ್ಥಾಪಕಿ ಟಿ.ಆರ್.ಹೇಮಲತಾ, ಬೆಂಗಳೂರು ಗೌಡ ಯುವ ವೇದಿಕೆಯ ಅಧ್ಯಕ್ಷೆ ತಳೂರು ಮಮತಾ ಹಿತೇಶ್, ಪದ್ಮಾವತಿ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚೀಯಂಡಿ ಶಾಂತಿ, ಮಕ್ಕಂದೂರು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ರೀಟಾ ಜಯಪ್ರಕಾಶ್, ಮೂರ್ನಾಡು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಲ್ಲುಮುಟ್ಲು ಜಶ್ಮಿ ಚಿಂತು ಉಪಸ್ಥಿತರಿರುವರು. ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿದೆ, ಊಟದ ನಂತರ ಮಹಿಳೆಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಡ್ಲೆರ ತುಳಸಿ ಮೋಹನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷರಾದ ಹೊಸೊಕ್ಲು ಲತಾ ಮೊಣ್ಣಪ್ಪ, ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ, ಕೋಶಾಧಿಕಾರಿ ಕೊಡಪಾಲು ತೀರ್ಥ ಗಣಪತಿ ಹಾಗೂ ಸಹಕಾರ್ಯದರ್ಶಿ ಬೈಮನ ಜ್ಯೋತಿ ತಿಮ್ಮಯ್ಯ ಉಪಸ್ಥಿತರಿದ್ದರು. ವರದಿ : (ದುಗ್ಗಳ ಸದಾನಂದ)








