Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಸುಂಟಿಕೊಪ್ಪ ಮಾ.7 NEWS DESK : ಶಾಲಾ ಕಾಲೇಜು ಹಂತದಲ್ಲೇ ಸಾಹಿತ್ಯ ಕುರಿತು ಆಸಕ್ತಿ ಮತ್ತು ಅಭಿವೃದ್ಧಿಗಳನ್ನು ಹೆಚ್ಚಿಸುವ ಮೂಲಕ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವುದು ದತ್ತಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನಿರ್‍ಅಹ್ಮದ್ ಹೇಳಿದ್ದಾರೆ. ಸುಂಟಿಕೊಪ್ಪದ ಮಂಜನಾಥಯ್ಯ ಮೀನಾಕ್ಷಮ್ಮ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕೊಡಗು ಕುಶಾಲನಗರ ತಾಲ್ಲೂಕು ಘಟಕದ ಮೂಲಕ ಸುಂಟಿಕೊಪ್ಪ ವತಿಯಿಂದ ಆಯೋಜಿತವಾಗಿದ ಎಸ್.ಎಸ್.ರಾಮಮೂರ್ತಿ ದತ್ತಿ ಮತ್ತು ದಿವಗಂತ ಪಿ.ಎಸ್.ಬೀರಪ್ಪ ದತ್ತಿ ನಿಧಿ ಉಪನ್ಯಾಸದಲ್ಲಿ ಉಪನ್ಯಾಸ ನೀಡಿದರು. ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸುವ ಕೆಲಸವಾಗಬೇಕಾಗಿದೆ. ಭಾಷೆಯು ನಮ್ಮಲ್ಲಿ ಬಾವನೆ ಕಲ್ಪನೆ ವಿಚಾರ ಅನುಭವ ಮೊದಲಾದವುಗಳಿಗೆ ಮೂರ್ತರೂಪ ನೀಡಿದಾಗ ಅದು ಕಾವ್ಯ ಕಥೆ, ಕಾದಂಬರಿ, ಪ್ರಬಂಧ ಸಾಹಿತ್ಯದ ಹಲವು ವಿಭಾಗಗಳಲ್ಲಿ ನಮಗೆ ಸಾಹಿತ್ಯ ಸಂಬಂಧಿ ಹೊರ ನೋಟಗಳನ್ನು ನೀಡುತ್ತದೆ ಎಂದು ಅವರು ಹೇಳಿದರು. ಸಾಹಿತಿಯೊಬ್ಬ ಪದ್ಯ ಅಥವಾ ಗದ್ಯವನ್ನು ರಚಿಸಿದಾಗ ನೂತನ ಭಾವನ ಪ್ರಪಂಚವನ್ನು ಸೃಷ್ಟಿಸಿ ಸೃಷ್ಟಿಕರ್ತ ಎನಿಸಿಕೊಳ್ಳುತ್ತಾನೆ ಎಂದು ಮುನೀರ್ ಅಹ್ಮದ್ ಬಣ್ಣಿಸಿದರು. ಪ್ರಸ್ತುತ ದಿನಮಾನಗಳಲ್ಲಿ ಪ್ರತಿಕೆಗಳನ್ನು ಓದುವುದು ಸಾಹಿತ್ಯ ಅಧ್ಯಯನ ಇಲ್ಲಾವೇ ಇಲ್ಲ ಎಂಬಾತಾಗಿದೆ. ಇದನ್ನು ಹೋಗಲಾಡಿಸಿ ಯುವಜನತೆ ಒಳ್ಳೆಯ ಸಾಹಿತ್ಯ ಕೃತಿಗಳನ್ನು ಓದುವಂತಾಗಬೇಕು. ಸಾಹಿತ್ಯವು ನಿಂತ ನೀರಲ್ಲ ಅದು ಚಲನಶೀಲತೆಯಿಂದ ಕೂಡಿದೆ ಎಂದು ಮುನಿರ್ ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಶಾಲನಗರ ತಾಲ್ಲೂಕು ಕಸಾಪ ಘಟಕದ ನಿರ್ದೇಶಕ ಎಂ.ಎಂ.ಕಾಳಪ್ಪ, ಮಕ್ಕಳಲ್ಲಿ ಯಾವುದೇ ಕಾರಣಕ್ಕೂ ಅವಸರದ ತೀರ್ಮಾನ ಸಲ್ಲದು. ತಮ್ಮಲ್ಲಿನ ಕಿಳಾರಿಮೆಯನ್ನು ದೂರವಿಟ್ಟು ಸಮಾಜಮುಖಿಯಾಗಿ ಬಾಳಬೇಕೆಂದು ಕರೆ ನೀಡಿದರು. ಮಾನವನು ಸಂಘ ಜೀವಿಯಾಗಿದ್ದು, ತಮ್ಮ ಆದಾಯದಲ್ಲಿ ಕಿಂಚಿತ್ತು ಅಂಶವನ್ನು ಸಮಾಜಕ್ಕಾಗಿ ನೀಡಬೇಕೆಂದು ಅವರು ಕರೆ ನೀಡಿದರು. ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ, ಸಮಾಜದಲ್ಲಿ ಮಹಿಳೆಯರಿಗೂ ಸಮಾನ ಅವಕಾಶಗಳಿದ್ದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕಾಗಿದೆ. ಕೊಡಗು ಕಸಾಪ ದತ್ತಿ ನಿಧಿಗಳ ಉಪನ್ಯಾಸ ಅಯೋಜನೆಯಿಂದ ನಮ್ಮ ಹಿರಿಯರು ಸಾಹಿತಿಗಳು ಮತ್ತು ಕನ್ನಡ ಭಾಷಾ ಪೋಷಕರಿಗೆ ಗೌರವ ಸಲ್ಲಿಸದಂತಾಗುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾದ ಎಸ್.ಜಿ.ಶ್ರೀನಿವಾಸ್ ಮಾತನಾಡಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾಹಿತ್ಯ ಕೃತಿಗಳನ್ನು ವಾಚಿಸುವ ಮೂಲಕ ಹೆಚ್ಚು ಸಾಹಿತ್ಯ ಜ್ಞಾನವನ್ನು ಪಡೆಯಬೇಕು. ಕನ್ನಡ ಸಾಹಿತ್ಯ ಪರಿತ್ತಿನ ದತ್ತಿ ಉಪನ್ಯಾಸಗಳು ಸಾಹಿತ್ಯ ಪರ ಕಾಳಜಿಯನ್ನು ಎತ್ತಿ ಹಿಡಿಯುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ಜೆ.ಎಸ್.ಪೂರ್ವಿಕ, ಅಪ್ರಿನಾ ಮತ್ತು ಎಸ್.ಕಾವ್ಯ ಅವರನ್ನು ವೇದಿಕೆಯಲ್ಲಿದ್ದ ಅತಿಥಿಗಳು ಸನ್ಮಾನಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಹೋಬಳಿ ಘಟಕದ ಅಧ್ಯಕ್ಷರಾದ ಪಿ.ಎಫ್.ಸಬಾಸ್ಟೀನ್ ಅಧ್ಯಕ್ಷತೆ ವಹಿಸಿದರು. ಸಮಾರಂಭದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಬಾಲಕೃಷ್ಣ, ಗ್ರಾ.ಪಂ ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯ ಪಿ.ಇ.ನಂದ, ಕುಶಾಲನಗರ ನಿರ್ದೇಶಕಿ ಗೀತಾ ಬಸಪ್ಪ, ಸುಂ.ಹೋ.ಕಸಾಪ ಕಾರ್ಯದರ್ಶಿ ಲೀಲಾ ಮೇದಪ್ಪ ಕುಶಾಲನಗರ ತಾಲ್ಲೂಕು ಕಸಾಪ ಸಂಘಟನಾ ಕಾರ್ಯದರ್ಶಿ ಕಾಯರ್‍ಮಾರ್ ದೇವಿ ಪ್ರಸಾದ್, ನಿರ್ದೇಶಕರುಗಳಾದ ಬಿ.ಸಿ.ದಿನೇಶ್, ಜಿ.ಬಿ. ಹರೀಶ್,ಸುಲೈಮಾನ್, ಕೊಡಗಿನ ಗೌರಮ್ಮ ಅವರ ಮೊಮ್ಮಗಳಾದ ರಾಜಲಕ್ಷ್ಮಿ, ಕರಿಬಸಪ್ಪ ಅಡ್ಮನಿ, ಮಾಜಿ ಅಧ್ಯಕ್ಷ ಎಂ.ಎಸ್. ಸುನಿಲ್ ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ಮೊದಲಿಗೆ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ಕುಶಾಲನಗರ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಟಿ.ವಿ.ಶೈಲಾ ಸ್ವಾಗತಿಸಿದರು, ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ಲಿಯೋನಾ ಕಾರ್ಯಕ್ರಮ ನಿರೂಪಿಸಿ ಸುಂಟಿಕೊಪ್ಪ ಹೋ.ಕಸಾಪ ಮಾಜಿ ಅಧ್ಯಕ್ಷ ವಹೀದ್‍ಜಾನ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.