
ಕುಶಾಲನಗರ ಮಾ.7 NEWS DESK : ಸ್ವದೇಶಿ ವಿಜ್ಞಾನ ಆಂದೋಲನ-ಕರ್ನಾಟಕ, ಚಾಮರಾಜನಗರ ವಿಶ್ವವಿದ್ಯಾಲಯ, ಚಾಮರಾಜನಗರ ಹಾಗೂ ಕೊಡಗು ವಿಶ್ವವಿದ್ಯಾಲಯ ಇವುಗಳ ಸಹಯೋಗದೊಂದಿಗೆ ಹಾವೇರಿ ವಿಶ್ವವಿದ್ಯಾಲಯ ಆಯೋಜಿಸುತ್ತಿರುವ “18ನೇ ಕನ್ನಡ ವಿಜ್ಞಾನ ಸಮ್ಮೇಳನ” ದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ. ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ -2026 ನೀಡಿ ಗೌರವಿಸಲಾಯಿತು. ಕೃಷಿ ಸಂಶೋಧನೆ ಮತ್ತು ಉನ್ನತ ಶಿಕ್ಷಣ ಕ್ಷೇತ್ರದ ಸೇವೆಯನ್ನು ಮುಂದುವರಿಸಲು ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.









