
ಮಡಿಕೇರಿ ಮಾ.7 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ಮಾರ್ಚ್, 8 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಡಾ.ಧನಂಜಯ ಸರ್ಜಿ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮಂದ್ರಿರ ಮೋಹನ್‍ದಾಸ್, ಕೊಡಗು ಜಿ.ಪಂ ಆಡಳಿತಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಂಟಿ ಕೃಷಿ ನಿರ್ದೇಶಕರಾದ ಬಿ.ಎಸ್.ಚಂದ್ರಶೇಖರ್, ಜಿ.ಪಂ ಉಪಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್, ಯೋಜನಾ ನಿರ್ದೇಶಕರಾದ ಟಿ.ಎನ್.ಜೀವನ್ ಕುಮಾರ್, ತಾ.ಪಂ.ಇಒ ಶೇಖರ್ ಕ.ಸಾ.ಸೇ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಎಂ.ಜಿ.ಸುನಿತಾ, ಎಸ್.ಎಸ್.ಹೇಮಂತ್, ಖ್ಯಾತ ಕವಯತ್ರಿ ಸ್ಮಿತಾ ಅಮೃತಾರಾಜ್ ಸಂಪಾಜೆ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.








