
ಮಡಿಕೇರಿ ಮಾ.7 NEWS DESK : ಮಹತ್ವಾಕಾಂಕ್ಷೆಯ ಗುಣಮಟ್ಟ ವಿದ್ಯುತ್ ಪೂರೈಕೆ ಯೋಜನೆಯ ಭಾಗವಾಗಿ ಬಾಳೆಲೆಯಲ್ಲಿ ರೂ. 27.23 ಕೋಟಿ ವೆಚ್ಚದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಸ್ಥಾಪನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಕ್ಷೇತ್ರಾದ್ಯಂತ ಗುಣಮಟ್ಟದ ವಿದ್ಯುತ್ ಪೂರೈಕೆ ಕೈಗೊಳ್ಳಲು ಸುಮಾರು ರೂ.200 ಕೋಟಿಗೊ ಅಧಿಕ ಅನುದಾನವನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ನೀಡಿದ್ದು, ಹಂತ ಹಂತವಾಗಿ ಕ್ಷೇತ್ರಾದ್ಯಂತ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಬಾಳಲೆಯಲ್ಲಿ ಸ್ಥಾಪನೆಗೊಳ್ಳಲಿರುವ ಈ ವಿದ್ಯುತ್ ವಿಚಾರಣಾ ಕೇಂದ್ರದಿಂದ ಈ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಆಗಲು ಸಹಕಾರಿಯಾಗಲಿದೆ ಎಂದು ವಿವರಿಸಿದರು. ಈ ಸಂದರ್ಭ ರಾಜ್ಯ ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಚೀಫ್ ಎಲೆಟ್ರಿಕಲ್ ಆಫೀಸರ್ ರೋಷನ್ ಅಪ್ಪಚ್ಚು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರೀರ ನವೀನ್, ತಾಲೂಕು ಬಗರ್ ಹುಕುಂ ಅಧ್ಯಕ್ಷರಾದ ಲಾಲಾ ಅಪ್ಪಣ್ಣ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಾನಂಡ ಪ್ರತ್ಯು, ವಲಯ ಅಧ್ಯಕ್ಷರಾದ ಕೋದಂಡ ಸೋಮಣ್ಣ, ಪಂಚಾಯಿತಿ ಸದಸ್ಯರಾದ ವಿನು ಉತ್ತಪ್ಪ, ನಿಟ್ಟೂರು ವಲಯ ಅಧ್ಯಕ್ಷರಾದ ಪವನ್, ರಂಜಿ, ಅಚ್ಚುತ್ತ್, ಅಜ್ಜಿಕುಟ್ಟಿರ ಗಿರೀಶ್, ಹರೀಶ್ ಪೂವಯ್ಯ, ಸಿದ್ದು ನಾಚಪ್ಪ, ಮನು, ಇಲಾಖೆಯ ಅಧಿಕಾರಿಗಳು ಚೋಂದಮ್ಮ ಹಾಗೂ ಪ್ರಮುಖರು ಉಪಸ್ಥಿತರಿದ್ದರು.









