Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ

ಮಾರ್ಚ್ 9, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ, NEWS DESK ಮಾ.09:-ಸಮಾಜ ಸ್ವಸ್ಥವಾಗಿಡಲು ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಲಹೆ ಮಾಡಿದ್ದಾರೆ.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಘಟಕ ವತಿಯಿಂದ ನಗರದ ರೆಡ್‍ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಾರೆ. ಆದ್ದರಿಂದ ಒಂದು ಕುಟುಂಬ ಸಮರ್ಪಕವಾಗಿ ನಡೆಯಬೇಕಿದ್ದಲ್ಲಿ ತಾಯಿ ಆರೋಗ್ಯ ಪೂರ್ಣವಾಗಿರಬೇಕು. ಇದರಿಂದ ಮಕ್ಕಳು ಹಾಗೂ ಕುಟುಂಬದ ನಿರ್ವಹಣೆ ಸುಗಮವಾಗಿ ಸಾಗಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಆಧುನಿಕ ಶರವೇಗದ ಜಗತ್ತಿನಲ್ಲಿ ಆಹಾರ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಕಲುಷಿತತೆಯನ್ನು ಕಾಣಬಹುದಾಗಿದೆ. ಆದ್ದರಿಂದ ಶುದ್ದ ಕುಡಿಯುವ ನೀರು, ಮನೆಯಲ್ಲಿಯೇ ಬೇಯಿಸಿದ ಆಹಾರ ಉಪಯೋಗಿಸುವುದರಿಂದ ಆರೋಗ್ಯದತ್ತ ಗಮನಹರಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ಮಹಿಳೆ ಆರೋಗ್ಯವಾಗಿದ್ದಲ್ಲಿ ಇಡೀ ಕುಟುಂಬ ಉತ್ತಮವಾಗಿ ಸಾಗಲಿದೆ. ಇದರಿಂದ ಸಮಾಜಕ್ಕೂ ಸಹ ಒಳ್ಳೆಯದಾಗಲಿದೆ. ಆ ನಿಟ್ಟಿನಲ್ಲಿ ಆರೋಗ್ಯದ ಕಡೆ ನಿಗಾವಹಿಸಬೇಕು ಎಂದರು.
‘ಸೃಷ್ಟಿಯ ಅದ್ಭುತಗಳಲ್ಲಿ ಮಹಿಳೆಯರು ವಿಶಿಷ್ಟ ವ್ಯಕ್ತಿತ್ವ ಹೊಂದಿದ್ದಾರೆ. ಸಂಸಾರದ ನೊಗ ಮುಂದೆ ಸಾಗಲು ಮಹಿಳೆಯರು ಹೆಚ್ಚಿನ ಆಸಕ್ತಿ ವಹಿಸುತ್ತಾರೆ. ಇದರಿಂದ ಕುಟುಂಬ ನಿರ್ವಹಣೆ ಉತ್ತಮವಾಗಿರುತ್ತದೆ. ಮಹಿಳೆಯರಿಗೆ ತಾಳ್ಮೆ, ಸಹನೆ, ಸಹನಾಭೂತಿ ಹೆಚ್ಚು ಇರುವುದನ್ನು ಕಾಣಬಹುದು. ಮಹಿಳೆಯರು ಒಂದು ರೀತಿ ಆದಿಶಕ್ತಿ ಇದ್ದಂತೆ ಎಂದು ವರ್ಣಿಸಿದರು.’
ಇಡೀ ಪ್ರಪಂಚಕ್ಕೆ ಜೀವಶಕ್ತಿ, ಆತ್ಮಶಕ್ತಿ ಹೆಣ್ಣು ಎಂದರೆ ತಪ್ಪಾಗಲಾರದು. ಸೃಷ್ಟಿಗೆ ಮೂಲ ಕಾರಣಕರ್ತಳು ಹೆಣ್ಣು ಮೂಲವಾಗಿದ್ದು, ಹೆಣ್ಣು ಮಕ್ಕಳನ್ನು ರಕ್ಷಿಸಬೇಕು ಮತ್ತು ಗೌರವಿಸಬೇಕು ಎಂದು ಆರ್.ಐಶ್ವರ್ಯ ಅವರು ಪ್ರತಿಪಾದಿಸಿದರು.
ಸಾಮಾಜಿಕವಾಗಿ, ಶೈಕ್ಷಣಿಕ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಸಹ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅಹಲ್ಯಾ ಬಾಯಿ. ಝಾನ್ಸಿರಾಣಿ ಲಕ್ಷ್ಮಿಬಾಯಿ, ರಾಣಿ ಅಬ್ಬಕ್ಕ, ಕಿತ್ತೂರು ರಾಣಿಚೆನ್ನಮ್ಮ, ಕೆಳದಿ ಚೆನ್ನಮ್ಮ, ಬೆಳವಾಡಿ ಮಲ್ಲಮ್ಮ, ಸಂಚಿಹೊನಮ್ಮ ಹೀಗೆ ಹಲವರನ್ನು ಉದಾಹರಣೆಯಾಗಿ ಕಾಣಬಹುದಾಗಿದೆ ಎಂದರು.
ಆತ್ಮಸಾಕ್ಷಿ ಕುಸಿಯುತ್ತಿರುವ ಇಂದಿನ ಸಂದರ್ಭದಲ್ಲಿ ಕುಟುಂಬದಲ್ಲಿ ಧೈರ್ಯ ತುಂಬುವವರು ಮಹಿಳೆಯರು ಎಂದರೆ ಅತಿಶಯೋಕ್ತಿಯಲ್ಲ ಎಂದು ಆರ್.ಐಶ್ವರ್ಯ ಅವರು ನುಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ ಅವರು ಮಾತನಾಡಿ ಹೆಣ್ಣು ಸಮಾಜದ ಕಣ್ಣು ಆಗಿದ್ದು, ಪುರಾತನ ಕಾಲದಿಂದಲೂ ಹೆಣ್ಣಿಗೆ ತನ್ನದೇ ಆದ ಮಹತ್ತರ ಸ್ಥಾನವಿದೆ ಎಂದರು.
ಮಹಿಳೆಯರು ರಾಜಕೀಯ, ಸಾಮಾಜಿಕ, ಕ್ರೀಡೆ, ಸಿನಿಮಾ, ಗಗನಯಾನ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಗಾಧ ಸಾಧನೆ ಮಾಡಿದ್ದಾರೆ. ಇದಕ್ಕೆ ಕುಟುಂಬ ಹಾಗೂ ಎಲ್ಲರ ಸಹಕಾರ ಹೆಚ್ಚಿನ ಪ್ರೋತ್ಸಾಹ ನೀಡಿದೆ ಎಂದರು.
ಸರ್ಕಾರ ಮಹಿಳೆಯರಿಗೆ ಹಲವು ಕಾರ್ಯಕ್ರಮ ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಸಮಾಜವನ್ನು ಶಕ್ತಿಯಾಗಿ ನಿರ್ಮಿಸುವಲ್ಲಿ ಮಹಿಳೆಯರು ಮುಂದೆ ಸಾಗಿದ್ದಾರೆ ಎಂದು ವಿವರಿಸಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಲಿಂಗಾನುಪಾತ ಉತ್ತಮವಾಗಿದೆ ಎಂದು ಹೇಳಿದರು.
ಸಮ ಸಮಾಜ ನಿರ್ಮಿಸುವಲ್ಲಿ ಮಹಿಳೆಯರ ಪಾತ್ರ ಹೆಚ್ಚಿನದ್ದಾಗಿದೆ. ಪ್ರತೀ ಕ್ಷೇತ್ರದಲ್ಲೂ ಸಹ ಮಹಿಳೆಯರು ಇದ್ದು, ಇದರಿಂದ ಸಮಾನತೆ ಕಾಣಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ಮಾಪಕಿ ಕೊಟ್ಟುಕೊತ್ತೀರ ಯಶೋಧ ಪ್ರಕಾಶ್ ಅವರು ಮಾತನಾಡಿ ಮಹಿಳೆಯರು ಕುಟುಂಬದ ನಿರ್ವಹಣೆಯ ಜೊತೆಗೆ ಕಚೇರಿಯಲ್ಲೂ ಕೆಲಸ ಮಾಡಿಕೊಂಡು ಜೀವನ ನಿಭಾಯಿಸುವುದು ದೊಡ್ಡ ಸಾಧನೆ. ಮಹಿಳೆಯರು ಸಂಬಳ ಇರದೆ ಇಡೀ ಕುಟುಂಬವನ್ನು ಉತ್ತಮವಾಗಿ ಸಾಗಿಸುವಲ್ಲಿ ಪ್ರಯತ್ನಿಸುತ್ತಾರೆ. ಹಾಗಾಗಿ ಹೆಣ್ಣನ್ನು ಗೌರವಿಸಬೇಕು ಎಂದರು.
ಮಹಿಳೆಯರು ಕೆಲಸದ ಒತ್ತಡ ಜೊತೆಗೆ ಆರೋಗ್ಯ ಕಡೆಯು ಗಮನಹರಿಸಬೇಕು. ಉತ್ತಮ ಆರೋಗ್ಯ ಇದ್ದಲ್ಲಿ ಇಡೀ ಕುಟುಂಬ ಸಂತಸದಿಂದ ಜೀವನ ಸಾಗಿಸಲು ಸಾಧ್ಯ ಎಂದರು.
ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ ಏರ್ಪಡಿಸಿರುವುದು ವಿಶೇಷವಾಗಿದೆ ಎಂದರು.
ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಬಿ.ಕೆ.ರವೀಂದ್ರ ರೈ ಮಾತನಾಡಿ ಕೊಡಗು ಜಿಲ್ಲೆಯಲ್ಲಿ 74 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ರೆಡ್‍ಕ್ರಾಸ್ ಸಂಸ್ಥೆಯು ಪ್ರಾಕೃತಿಕ ವಿಕೋಪ, ಲಾಕ್‍ಡೌನ್ ಸೇರಿದಂತೆ ಅಗತ್ಯ ಇದ್ದಂತಹ ಸಂದರ್ಭದಲ್ಲಿ ತುರ್ತು ಕಾರ್ಯ ಪ್ರವೃತ್ತವಾಗಿ ಜನರ ಸೇವೆ ಮಾಡುತ್ತಾ ಬಂದಿದೆ ಎಂದರು.


ರಾಜ್ಯಪಾಲರಿಂದಲೂ ಸಹ ಅತ್ಯುತ್ತಮ ರೆಡ್‍ಕ್ರಾಸ್ ಸಂಸ್ಥೆ ಎಂಬ ಸೇವಾ ಪ್ರಶಸ್ತಿಯನ್ನು ಪಡೆದಿದ್ದು, ಮಹಿಳಾ ದಿನಾಚರಣೆಯೊಂದಿಗೆ ಕ್ಯಾನ್ಸರ್ ಮಾಹಿತಿ ಹಾಗೂ ಜಾಗೃತಿ ಶಿಬಿರ ಆಯೋಜಿಸುವ ಮೂಲಕ ಮಹಿಳೆಯರಲ್ಲಿ ಆರೋಗ್ಯ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ರೆಡ್‍ಕ್ರಾಸ್ ಜಿಲ್ಲಾ ಉಪಾಧ್ಯಕ್ಷರಾದ ಅನಿಲ್ ಎಚ್.ಟಿ. ಅವರು ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಜಿಲ್ಲೆಯಾದ್ಯಂತ ಮಕ್ಕಳ ಪಾಲನೆ ಪೋಷಣೆಯೊಂದಿಗೆ ಸರ್ಕಾರದ ವಿವಿಧ ಕರ್ತವ್ಯಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ. ಇಂತಹ ಸಿಬ್ಬಂದಿಯನ್ನು ಆದ್ಯತೆಯಾಗಿರಿಸಿ, ಆರೋಗ್ಯ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಮಹಿಳಾ ದಿನಾಚರಣೆ ಹಿನ್ನೆಲೆ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ 460 ಮಹಿಳೆಯರು ಪಾಲ್ಗೊಂಡಿರುವುದು ರೆಡ್‍ಕ್ರಾಸ್ ಪ್ರಯತ್ನಕ್ಕೆ ಸಂದ ಫಲವಾಗಿದೆ ಎಂದು ತಿಳಿಸಿದರು.
ರಾಷ್ಟ್ರ ಪ್ರಶಸ್ತಿ ಪಡೆದ ಕೊಟ್ಟುಕೊತ್ತೀರ ಯಶೋಧ ಪ್ರಕಾಶ್ ಅವರನ್ನು ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಗಣ್ಯರು ಸನ್ಮಾನಿಸಿ ಗೌರವಿಸಿದರು.
ಮಡಿಕೇರಿ ತಾಲ್ಲೂಕಿನ 15 ಮಂದಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಸನ್ಮಾನಿಸಲಾಯಿತು. ವಿವಿಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಂಡದವರು ವೈವಿಧ್ಯಮಯ ಕಾರ್ಯಕ್ರಮ ನೀಡಿ ಮನ ಸೆಳೆದರು.
ಇದೇ ಸಂದರ್ಭದಲ್ಲಿ ತಜ್ಞ ವೈದ್ಯರಿಂದ ಆಯೋಜಿತ ಕ್ಯಾನ್ಸರ್ ತಪಾಸಣಾ ಶಿಬಿರದ ಪ್ರಯೋಜನವನ್ನು ಮಹಿಳೆಯರು ಪಡೆದರು.
ಮಹಿಳಾ ಸಂಬಂಧಿಸಿದ ವಿಚಾರಗೋಷ್ಠಿಯಲ್ಲಿ ಮಿಲನ ಭರತ್, ಡಾ.ಬಿ.ಕೆ.ರಾಜೇಶ್ವರಿ, ವೈದ್ಯಾಧಿಕಾರಿ ಡಾ.ಸುಮುಖ್, ವಕೀಲರಾದ ಸಿಂಧೂರ ಎನ್.ಸ್ವಾಮಿ, ಯೋಗ ಶಿಕ್ಷಕರಾದ ಶಿಲ್ಪ ರೈ ಅವರು ಮಾತನಾಡಿದರು.
ಶೀಲ ಅಶೋಕ್ ಪ್ರಾರ್ಥಿಸಿದರು. ರೆಡ್‍ಕ್ರಾಸ್ ಸಂಸ್ಥೆಯ ಕೊಡಗು ಘಟಕ ಉಪ ಸಭಾಪತಿ ಅನಿಲ್ ಎಚ್.ಟಿ. ನಿರೂಪಿಸಿದರು, ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಧನಂಜಯ ಸ್ಥಾಗತಿಸಿದರು, ಖಜಾಂಜಿ ಪ್ರಸಾದ್ ಗೌಡ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.