Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷ ಕೈಮೀರಿ ಹೋಗಿದೆ. ಕಳೆದ 10 ದಿನಗಳಲ್ಲಿ ಕಾಡಾನೆ ದಾಳಿಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಆದರೆ ಅರಣ್ಯ ಸಚಿವರು ಮಾತ್ರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲವೆಂದು ಬಿಜೆಪಿ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರಣ್ಯ ಸಚಿವರಿಗೆ ಅರಣ್ಯ ಖಾತೆಯ ಜವಾಬ್ದಾರಿಯನ್ನು ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವನ್ಯಜೀವಿಗಳ ದಾಳಿಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ, ಇದೇ ಫೆ.28 ರಂದು ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಇದೀಗ ಕುಶಾಲನಗರ ತಾಲ್ಲೂಕಿನ ಬಾಳೆಗಂಡಿ ಎಂಬಲ್ಲಿ ಜಲಜಾಕ್ಷಿ ಎಂಬುವವರು ಜೀವ ಕಳೆದುಕೊಂಡಿದ್ದಾರೆ. ಆದರೆ ಅರಣ್ಯ ಸಚಿವರು ಮಾತ್ರ ಈ ಘಟನೆಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದ್ದಾರೆ. ಜನ ವನ್ಯಜೀವಿ ದಾಳಿಯ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದರೂ ಮತ್ತು ಸಾವು ನೋವುಗಳು ಸಂಭವಿಸುತ್ತಿದ್ದರೂ ಅರಣ್ಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆಯುವ ಕಾಳಜಿಯನ್ನು ತೋರುತ್ತಿಲ್ಲ. ಕೇವಲ ವಿಧಾನಸೌಧದ ಕಚೇರಿಯಲ್ಲೇ ಉಳಿದುಬಿಟ್ಟರೆ ವನ್ಯಜೀವಿಗಳ ಉಪಟಳದಿಂದ ಜಿಲ್ಲೆಯ ಜನರು ಎದುರಿಸುತ್ತಿರುವ ಕಷ್ಟನಷ್ಟಗಳ ಗಂಭೀರತೆಯ ಅರಿವಾಗುವುದಿಲ್ಲ. ಆದ್ದರಿಂದ ಅರಣ್ಯ ಸಚಿವರು ತಕ್ಷಣ ಕೊಡಗು ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆಯ ನೈಜತೆಯನ್ನು ಅರಿತುಕೊಳ್ಳಬೇಕು. ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಜನಸಂಪರ್ಕ ಸಭೆ ನಡೆಸಿ ಜನರ ಅಹವಾಲನ್ನು ಸ್ವೀಕರಿಸಬೇಕು. ವನ್ಯಜೀವಿ ದಾಳಿ ತಡೆಗೆ ಇಲ್ಲಿಯವರೆಗೆ ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳ ಕುರಿತು ಖುದ್ದು ಪರಿಶೀಲಿಸಬೇಕು. ಶಾಶ್ವತ ಯೋಜನೆ ರೂಪಿಸಲು ಸಭೆಯಲ್ಲಿ ಅನುಮೋದನೆ ನೀಡಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ತಪ್ಪಿದಲ್ಲಿ ಅರಣ್ಯ ಸಚಿವರ ರಾಜೀನಾಮೆಗಾಗಿ ಆಗ್ರಹಿಸಿ ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.25 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.1 ರಂದು 31ನೇ ವರ್ಷದ ಕೈಲ್…

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.