Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ

ಮಾರ್ಚ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಮಾ.11 : ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಮಾ.15 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಳ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ರಾಘವಯ್ಯ ಅವರು ಭಾನುವಾರ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ದಾನಿಗಳು, ಸಮಾಜದ ಬಾಂಧವರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ನೂತನ ಸಮುದಾಯ ಭವನವನ್ನು ಎಲ್ಲಾ ಮೂಲಭೂತ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ. ನೂತನ ಸಮುದಾಯ ಭವನವನ್ನು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಮಾಜಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಅವರು ಉದ್ಘಾಟಿಸಲಿದ್ದಾರೆ. ಚೇರಳ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ಸಿ.ರಾಘವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಸಚಿವ ಮಂಡೇಪoಡ ಪಿ.ಅಪ್ಪಚ್ಚುರಂಜನ್, ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪoಡ ಪಿ.ಸುನಿಲ್ ಸುಬ್ರಮಣಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಉಪಾಧ್ಯಕ್ಷ ಡಾ.ತೇನನ ರಾಜೇಶ್, ಕೊಡಗು ಗೌಡ ಸಮಾಜದ ಅಧ್ಯಕ್ಷ ದಂಬೆಕೋಡಿ ಆನಂದ, ಮಾಜಿ ಅಧ್ಯಕ್ಷ ಪೇರಿಯನ ಜಯಾನಂದ, ಜಿ.ಪಂ ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಸಮಾಜ ಸೇವಕರು ಹಾಗೂ ಬೆಳೆಗಾರ ನಾಪಂಡ ಮುತ್ತಪ್ಪ, ಉದ್ಯಮಿ ಸುಳ್ಯಕೋಡಿ ಪ್ರದೀಪ್ ಕುಮಾರ್ ಹಾಗೂ ಕಾಫಿ ಬೆಳೆಗಾರ ಮರದಾಳು ಬಸಪ್ಪ ಉಪಸ್ಥಿತರಿರುವರು ಎಂದು ತಿಳಿಸಿದರು. *1.75 ಕೋಟಿ ರೂ. ವೆಚ್ಚದ ಕಟ್ಟಡ* ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಗ್ರಾಮಗಳ ಪೈಕಿ ಚೇರಳ ಗ್ರಾಮದ ಆಗ್ನೇಯ ಭಾಗದಲ್ಲಿ ನೆಲೆಸಿರುವ 22 ಕುಟುಂಬದ ಗೌಡ ಸಮುದಾಯದ ಸಮಾನ ಮನಸ್ಕ ಬಂಧುಗಳು 2008ರಲ್ಲಿ ಮರದಾಳು ದೊಡ್ಡ ಮನೆಯಲ್ಲಿ ಸಭೆ ಸೇರಿ ಒಂದು ಸಂಘವನ್ನು ರಚಿಸಲಾಯಿತು. ಇದಕ್ಕೆ ‘ಚೇರಳ ಗೌಡ ಸಂಘ’ ಎಂದು ಹೆಸರಿಡಲಾಯಿತು.
ಮೂರು ವರ್ಷಗಳ ಸತತ ಪ್ರಯತ್ನದ ನಂತರ ‘ಚೇರಳ ಗೌಡ ಸಂಘ’ ಕ್ಕಾಗಿ 2011ರಲ್ಲಿ ಸೂಕ್ತ ನಿವೇಶನವನ್ನು ಖರೀದಿ ಮಾಡಲಾಯಿತು. ಸರಕಾರದ ಮಟ್ಟದಲ್ಲಿ ‘ಚೇರಳ ಗೌಡ ಸಮಾಜ ಸಮುದಾಯ ಭವನ’ ಎಂದು ನೋಂದಣಿ ಮಾಡಲಾಯಿತು. ನಿವೇಶನಕ್ಕೆ ಬೇಕಾದ ಹಣವನ್ನು ಸಮಾಜದ ಪ್ರತಿಯೊಂದು ಕುಟುಂಬದಿAದ ದಾನದ ರೂಪದಲ್ಲಿ ಸಂಗ್ರಹಿಸಲಾಯಿತು. 2011ರಲ್ಲಿ ಕಟ್ಟಡ ನಿರ್ಮಾಣಕ್ಕೆ ಶಿಲನ್ಯಾಸ ಮಾಡಲಾಯಿತು. ಸದಸ್ಯರು ನೀಡಿದ ದಾನದ ಹಣದಿಂದ ಕಟ್ಟಡ ನಿರ್ಮಾಣ ಪ್ರಾರಂಭವಾಯಿತು. ಸರಕಾರದ ಹಿಂದುಳಿದ ವರ್ಗಗಳ ಇಲಾಖೆಯಿಂದ 2015 ಮತ್ತು 2020ರಲ್ಲಿ ರೂ.70 ಲಕ್ಷ ಬಿಡುಗಡೆಯಾಯಿತು. ಕಟ್ಟಡ ಕಾಮಗಾರಿ ಮುಂದುವರೆದAತೆ ಜಿಲ್ಲೆಯ ಹಾಗೂ ಇತರ ಜಿಲ್ಲೆಗಳಲ್ಲಿ ನೆಲೆಸಿರುವ ಗೌಡ ಸಮುದಾಯದ ಮಂದಿಯಿAದ ದಾನದ ರೂಪದಲ್ಲಿ 30 ಲಕ್ಷ ರೂ. ಹಣ ಸಂಗ್ರಹಿಸಲಾಯಿತು. 2025 ಜೂನ್ ತಿಂಗಳಿನಲ್ಲಿ 1.25 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ತಲೆ ಎತ್ತಿತ್ತು. ಆದರೆ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು ಇನ್ನೂ 50 ಲಕ್ಷ ರೂಪಾಯಿಗಳು ಬೇಕಾಯಿತು. ಈ ಕೊರತೆಯನ್ನು ತುಂಬಲು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರಲ್ಲಿ ಮನವಿ ಮಾಡಲಾಯಿತು. ಸಮುದಾಯ ಭವನದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಸಹಕಾರ ನೀಡುವುದಾಗಿ ಗೌಡ ಸಮಾಜಗಳ ಒಕ್ಕೂಟ ಭರವಸೆ ನೀಡಿತು. ಅದರಂತೆ ಸುಮಾರು 20 ಲಕ್ಷ ರೂ. ಗಳನ್ನು ದಾನಿಗಳಿಂದ ಸಂಗ್ರಹಿಸಿ ಒಕ್ಕೂಟ ನೀಡಿತು. ಉಳಿದ ಹಣವನ್ನು ಚೇರಳ ಗೌಡ ಸಮಾಜದ ಸದಸ್ಯರು ಮನೆ ಮನೆಗೆ ತೆರಳಿ ಸಂಗ್ರಹಿಸಿದರು. ‘ಸಮಾಜ ನಿನಗೇನು ನೀಡಿದೆ ಎಂದು ಕೇಳುವ ಬದಲು ಸಮಾಜಕ್ಕಾಗಿ ನೀನೇನು ಮಾಡಿದೆ’ ಎಂಬ ಆದರ್ಶದೊಂದಿಗೆ ಕಾರ್ಯೋನ್ಮುಖವಾದ ಚೇರಳ ಗೌಡ ಸಮಾಜ ಪ್ರಸ್ತುತ ಭವ್ಯ ಕಟ್ಟಡವನ್ನು ನಿರ್ಮಿಸಿ ಪೂರ್ಣಗೊಳಿಸಿದೆ ಎಂದು ಅಯ್ಯಂಡ್ರ ರಾಘವಯ್ಯ ವಿವರಿಸಿದರು. ಸಹ ಖಜಾಂಚಿ ಪೇರಿಯನ ಉದಯ ಕುಮಾರ್ ಮಾತನಾಡಿ ಸುಮಾರು 17 ವರ್ಷಗಳ ಸತತ ಪ್ರಯತ್ನದ ನಂತರ ನೂತನ ಭವ್ಯವಾದ ಸಮುದಾಯ ಭವನ ನಿರ್ಮಾಣಗೊಂಡು ಲೋಕಾರ್ಪಣೆಗೊಳ್ಳುತ್ತಿದೆ. ಉದ್ಘಾಟನಾ ಸಮಾರಂಭಕ್ಕೆ ಕೊಡಗು, ಪಿರಿಯಾಪಟ್ಟಣ, ಹುಣುಸೂರು, ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ಗೌಡ ಸಮಾಜಗಳ ಬಾಂಧವರು ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಹೊಸಮನೆ ಪೂವಯ್ಯ, ಉಪ ಕಾರ್ಯದರ್ಶಿ ನೂಜಿಬೈಲು ನಾಣಯ್ಯ, ನಿರ್ದೇಶಕರಾದ ಕಲ್ಪಡ ಶೋಭ ಹಾಗೂ ನೂಜಿಬೈಲು ಅರುಣಾಕ್ಷಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.