Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಮಾರ್ಚ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement


ಮಡಿಕೇರಿ ಮಾ.11 NEWS DESK : ರಾಜಾಸೀಟು ಅಭಿವೃದ್ಧಿ ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜಾಸೀಟು ಬಳಿಯ ಕೂರ್ಗ್ ವಿಲೇಜ್ ನ್ನು ಸದುಪಯೋಗಪಡಿಸಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಟಿಕೆಟ್ ಕೌಂಟರ್ ನಿರ್ಮಾಣ ಹಾಗೂ ಮತ್ತಿತರ ಸೌಲಭ್ಯ ಸಂಬಂಧ ಅಗತ್ಯ ಕ್ರಮವಹಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಮಾಹಿತಿ ಕೇಂದ್ರ, ಪ್ರವಾಸಿ ಮಿತ್ರ, ಆಹಾರ ಕೇಂದ್ರ, ಸಿಸಿಟಿವಿ ಕ್ಯಾಮರಾ ಅಳವಡಿಸುವುದು, ಸೋಲಾರ್ ಲೈಟ್ ಅಳವಡಿಕೆ, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು, ಪುಟಾಣಿ ರೈಲು ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಮುಂದಾಗಬೇಕು ಎಂದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಜಾಸೀಟು ಅಭಿವೃದ್ಧಿ ಸಂಬಂಧ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ರಾಜಾಸೀಟು ಅಭಿವೃದ್ಧಿ ಸಮಿತಿ ಸದಸ್ಯರಾದ ಮೋಂತಿ ಗಣೇಶ್, ಅಂಬೆಕಲ್ಲು ನವೀನ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕೆ.ಟಿ.ಪ್ರಭು, ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಇತರರು ಪಾಲ್ಗೊಂಡು ಹಲವು ಮಾಹಿತಿ ನೀಡಿದರು. ಕೂರ್ಗ್ ವಿಲೇಜ್‍ನ್ನು ಆಕರ್ಷಣೀಯಗೊಳಿಸಿ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ರಾಜಾಸೀಟು ಬಳಿ ಇರುವ ಟಿಕೆಟ್ ಕೌಂಟರ್‍ನ್ನು ಕೂರ್ಗ್ ವಿಲೇಜ್‍ಗೆ ಸ್ಥಳಾಂತರಿಸಿದರೆ ಹೇಗೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಸಲಹೆ ಮಾಡಿದರು. ‘ಕೂರ್ಗ್ ವಿಲೇಜ್‍ನ್ನು ಅಭಿವೃದ್ಧಿ ಪಡಿಸಿ ಸ್ಥಳೀಯ ಸ್ವಸಹಾಯ ಗುಂಪುಗಳಿಗೆ ಅವಕಾಶ ಕಲ್ಪಿಸಲು ಉದ್ದೇಶವಾಗಿತ್ತು, ಆದರೆ ಯಾರೂ ಸಹ ಮುಂದೆ ಬರಲಿಲ್ಲ, ಆದ್ದರಿಂದ ಈಗಾಗಲೇ ಸ್ಥಳೀಯವಾಗಿ ವ್ಯಾಪಾರ ಮಾಡುತ್ತಿರುವವರಿಗೆ ಹಾಗೂ ಆಸಕ್ತರಿಗೆ ಬಾಡಿಗೆ ಆಧಾರದಲ್ಲಿ ಅವಕಾಶ ಮಾಡಲು ಮುಂದಾಗಲಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಶಶಿಧರ್ ಅವರು ಮಾಹಿತಿ ನೀಡಿದರು.’ ಮೋಂತಿ ಗಣೇಶ್ ಅವರು ಮಾತನಾಡಿ ಕೂರ್ಗ್ ವಿಲೇಜ್‍ನ್ನು ಅಭಿವೃದ್ಧಿ ಪಡಿಸವುದರ ಜೊತೆಗೆ ನಗರದ ನೆಹರು ಮಂಟಪಕ್ಕೆ ಇನ್ನಷ್ಟು ಕಾಯಕಲ್ಪ ಕಲ್ಪಿಸಬೇಕು. ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಕಾವೇರಿ ಕಲಾಕ್ಷೇತ್ರದ ಸ್ಥಳದಲ್ಲಿ ಬಹುಮಹಡಿ ವ್ಯವಸ್ಥೆಯಲ್ಲಿ ವಾಹನ ನಿಲುಗಡೆಗೆ ಅವಕಾಶ ಇರಲಿದೆ. ಮೂರನೇ ಮಹಡಿಯಲ್ಲಿ ಕಲಾಭವನ ಮಾದರಿಯಲ್ಲಿ ಸಭಾಂಗಣ ನಿರ್ಮಿಸಲಾಗುತ್ತಿದೆ ಎಂದರು. ಕಾವೇರಿ ಕಲಾಕ್ಷೇತ್ರದಲ್ಲಿ ನೂತನ ಕಟ್ಟಡ ನಿರ್ಮಾಣ ಸಂಬಂಧ ತಾಂತ್ರಿಕ ಬಿಡ್ಡಿಗೆ ಅನುಮೋದನೆಯಾಗಿದ್ದು, ಆರ್ಥಿಕ ಬಿಡ್ಡು ಅನುಮೋದನೆಗಾಗಿ ಪೌರಾಡಳಿತ ನಿರ್ದೇಶನಾಲಯಕ್ಕೆ ಸಲ್ಲಿಸಲಾಗಿದೆ ಎಂದು ಪೌರಾಯುಕ್ತರು ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಪಣೀಂದ್ರ, ಸಹಾಯಕ ನಿರ್ದೇಶಕರಾದ ಬಿ.ಎಸ್.ಮುತ್ತಪ್ಪ ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.