Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ

ಮಾರ್ಚ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ ನ್ಯಾಯ ದೊರಕಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ. ಕುಶಾಲನಗರದಲ್ಲಿ ಕುಶಾಲನಗರದ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ನೂತನವಾಗಿ ಸ್ಥಾಪನೆಗೊಂಡಿರುವ ತಾಲೂಕು ಕಾನೂನು ಸೇವಾ ಸಮಿತಿಯ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಕೆಲಸ ಕಾರ್ಯಗಳ ಒತ್ತಡ ಕಡಿಮೆಯಾಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು ಈ ಸಂಬಂಧ ಪ್ರಕರಣಗಳ ಇತ್ಯರ್ಥಕ್ಕೆ ವಕೀಲರುಗಳ ಸಹಾಯ ಪ್ರಮುಖವಾಗಿದೆ ಎಂದರು. ಯಾವುದೇ ವಿಷಯಗಳು ಭಾಷಣಕ್ಕೆ ಮಾತ್ರ ಸೀಮಿತ ಆಗಬಾರದು ಎಂದ ನ್ಯಾಯಾಧೀಶರು, ಅರಿವಿನ ಕೊರತೆಯಿಂದ ನೊಂದವರಿಗೆ ಸೌಲಭ್ಯ ಲಭಿಸಲು ಅಸಾಧ್ಯ ಎಂದು ಹೇಳಿದರು. ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ರಾಜಿ ತೀರ್ಮಾನಕ್ಕೆ ಅಥವಾ ಸಮಸ್ಯೆಗಳ ಇತ್ಯರ್ಥಕ್ಕೆ ಯಾವುದೇ ರೀತಿಯ ಮಿತಿ ಇರುವುದಿಲ್ಲ ಎಂದು ತಿಳಿಸಿದರು. ಸೋಮವಾರಪೇಟೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ರೇಖಾ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಶುಭ ಕೋರಿದರು. ಕುಶಾಲನಗರ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿಯ ತಾಲೂಕು ಸದಸ್ಯ ಕಾರ್ಯದರ್ಶಿಗಳಾದ ಚೈತ್ರ ಎಲ್ ಮಾತನಾಡಿ ಕುಶಾಲನಗರದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಸ್ಥಾಪನೆಗೆ ಸಹಕಾರ ನೀಡಿದ ಸ್ಥಳೀಯ ವಕೀಲರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಕುಶಾಲನಗರ ವಕೀಲರ ಸಂಘದ ಅಧ್ಯಕ್ಷರಾದ ಆರ್ ಕೆ ನಾಗೇಂದ್ರ ಬಾಬು ಅವರು ಮಾತನಾಡಿ, ರಾಜಿ ಸಂಧಾನಗಳ ಮೂಲಕ ನ್ಯಾಯಾಲಯದ ಕಾರ್ಯಕಲಾಪಗಳ ಹೊರೆ ಕಡಿಮೆಯಾಗಲು ಸಾಧ್ಯ ಎಂದರಲ್ಲದೆ ಜಟಿಲ ಪ್ರಕರಣಗಳನ್ನು ಮಾತ್ರ ತೀರ್ಪಿನ ಮೂಲಕ ಪರಿಹರಿಸ ಬೇಕಾಗುತ್ತದೆ ಎಂದರು. ಕುಶಾಲನಗರದಲ್ಲಿ ಸೀನಿಯರ್ ಸಿವಿಲ್ ಜಡ್ಜ್ ವಿಭಾಗ ತೆರೆಯುವಂತೆ ಈ ಸಂದರ್ಭ ಅವರ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಕೆ ಪಿ ಹೇಮಂತ್, ತಾಲೂಕು ತಹಸೀಲ್ದಾರ್ ಕಿರಣ್ ಜಿ ಗೌರಯ್ಯ, ಪುರಸಭೆ ಮುಖ್ಯ ಅಧಿಕಾರಿ ಗಿರೀಶ್ ಮತ್ತಿತರರು ಇದ್ದರು. ಕುಶಾಲನಗರ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಬಿ.ಮೋಹನ್ ಕುಮಾರ್ ಅವರು ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.