Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»Uncategorized»ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ
Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ

ಮಾರ್ಚ್ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.12 NEWS DESK : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಸಾಲು ಸಾಲು ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ರಾಜ್ಯ ಸರಕಾರ ಯಾವುದೇ ತುರ್ತು ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದೆ. ಸರಕಾರದ ಈ ನಿರ್ಲಕ್ಷ್ಯ ಮನೋಭಾವವನ್ನು ಸಹಿಸಲು ಸಾಧ್ಯವಿಲ್ಲವೆಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಮೂರು ಅಮಾಯಕ ಜೀವಗಳು ಕಾಡಾನೆ ದಾಳಿಗೆ ಬಲಿಯಾಗಿವೆ. ಇತ್ತೀಚೆಗಷ್ಟೇ ವಿದ್ಯಾರ್ಥಿನಿ ಹಾಗೂ ಮಹಿಳೆಯೋರ್ವರು ಮೃತಪಟ್ಟಿದ್ದು, ಇದೀಗ ಬೆಳೆಗಾರ ಗಣಪತಿ ಅವರು ಕಾಡಾನೆ ದಾಳಿಗೆ ತುತ್ತಾಗಿದ್ದಾರೆ. ಈ ಬೆಳವಣಿಗೆ ಅತ್ಯಂತ ದು:ಖಕರವಾಗಿದ್ದು, ಸರಕಾರ ಸಮಸ್ಯೆಯ ಗಂಭೀರತೆಯನ್ನು ಅರಿಯದೆ ಕೇವಲ ಪರಿಹಾದ ಚೆಕ್ ನೀಡಿ ಕೈತೊಳೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ. ಅರಣ್ಯ ಸಚಿವರು ಕಾಡಾನೆ ಉಪಟಳ ತಡೆಗೆ ಸಂಬಂಧಿಸಿದಂತೆ ಕೇವಲ ಭರವಸೆಗಳನ್ನು ನೀಡುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಕಾರ್ಯಗತಗೊಳ್ಳುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ವನ್ಯಜೀವಿಗಳ ದಾಳಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದ್ದರೂ ಜಿಲ್ಲೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ಆಸಕ್ತಿಯನ್ನು ಸಚಿವರು ತೋರುತ್ತಿಲ್ಲ. ಕೊಡಗಿನಲ್ಲಿರುವ ಮಾನವ ಜೀವಗಳಿಗೆ ಬೆಲೆ ಇಲ್ಲದಾಗಿದೆ, ಸರಕಾಕ್ಕೆ ಪರಿಸ್ಥಿತಿಯ ಗಂಭೀರತೆಯನ್ನು ಅರಿಯಲು ಇನ್ನೆಷ್ಟು ಜೀವಗಳ ಬಲಿ ಬೇಕು ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಪ್ರಶ್ನಿಸಿದ್ದಾರೆ. ಸರಕಾರ ನಿದ್ರಾವಸ್ಥೆಯಲ್ಲಿರಬಹುದು, ಆದರೆ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಇಬ್ಬರು ಶಾಸಕರು ಏನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ಶಾಸಕರುಗಳು ಸರಕಾರದ ಮೇಲೆ ಒತ್ತಡ ಹೇರಿ ಕಾಡಾನೆ ದಾಳಿ ತಡೆಗೆ ಅಗತ್ಯವಿರುವ ಯೋಜನೆಗಳ ಅನುಷ್ಠಾನಕ್ಕೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ವನ್ಯಜೀವಿಗಳ ಉಪಟಳವನ್ನು ನಿಯಂತ್ರಿಸಲು ಉನ್ನತ ಮಟ್ಟದ ಅಧ್ಯಯನ ಮತ್ತು ಸಲಹಾ ಸಮಿತಿಯನ್ನು ರಚಿಸಿ ಇದು ನೀಡುವ ವರದಿಯಾಧಾರದಲ್ಲಿ ಅತ್ಯಾಧುನಿಕ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ಪ್ರದೇಶದಲ್ಲಿ ಎದುರಾಗಿರುವ ನೀರು ಮತ್ತು ಆಹಾರದ ಕೊರತೆಯ ಬಗ್ಗೆಯೂ ಅಧ್ಯಯನ ನಡೆಸಿ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮೂನಾಡ್ ನಲ್ಲಿ ಸಿಎನ್‌ಸಿ ಕೊಡವ ಜನಜಾಗೃತಿ ಮಾನವ ಸರಪಳಿ : 100 ವರ್ಷಗಳಾದರೂ ಕೊಡವ ಲ್ಯಾಂಡ್ ಸಾಧಿಸಲು ಬದ್ಧರಾಗಿದ್ದೇವೆ : ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.15: ಮಡಿಕೇರಿ ಜನೋತ್ಸವದ ಪ್ರಯುಕ್ತ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಅಕ್ಟೋಬರ್ 16ರಂದು ನಗರದ ಗಾಂಧಿ…

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.