Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ

ಮಾರ್ಚ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ ಮಾತ್ರವಲ್ಲದೆ ಸಮಾಜದ ಪ್ರಗತಿಗೂ ಪ್ರಮುಖ ಪಾತ್ರವಹಿಸುತ್ತಾಳೆ ಎಂದು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆ.ಹೆಚ್.ಧನಲಕ್ಷ್ಮೀ ಅಭಿಪ್ರಾಯಿಸಿದರು. ಕೊಡಗು ಜಿಲ್ಲೆ ಮತ್ತು ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ ದಿ.ಸೀತಾಬಾಯಿ ಮತ್ತು ರಾಮಚಂದ್ರ ಕಾಮತ್ ಸ್ಮರಣಾರ್ಥ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಪ್ರತಿಯೊಂದು ಕುಟುಂಬವೂ ಹೆಣ್ಣು ಮಕ್ಕಳ ಶಿಕ್ಷಣವನ್ನು ಅತ್ಯಂತ ಮಹತ್ವದ ಕರ್ತವ್ಯವೆಂದು ಪರಿಗಣಿಸಬೇಕು. ಇಂದಿನ ದಿನಗಳಲ್ಲಿ ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಸಂತಸದ ವಿಚಾರವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಉನ್ನತ ಶಿಕ್ಷಣ ಪಡೆಯಲು ಕೆಲ ತೊಂದರೆಗಳು ಎದುರಾಗುತ್ತಿವೆ. ಸಾರಿಗೆ, ಆರ್ಥಿಕ ಸಮಸ್ಯೆ ಮತ್ತು ಸಾಮಾಜಿಕ ಮನೋಭಾವನೆಗಳಂತಹ ಅಡೆತಡೆಗಳನ್ನು ನಿವಾರಿಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು. ಪ್ರಾಚೀನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನಿಷೇದವಾಗಿತ್ತು. ಮೂಢನಂಬಿಕೆ ಸೇರಿದಂತೆ ಮಹಿಳಾ ದ್ವೇಷಿ ಪದ್ದತಿ, ಪಟ್ಟಭದ್ರಹಿತಾಸಕ್ತಿಗಳ ಚಿತಾವಣೆಯಿಂದ ಮಹಿಳೆಯರು ಪ್ರಾಣಿಗಳಂತೆ ನಾಲ್ಕು ಗೋಡೆಯ ಮಧ್ಯದಲ್ಲಿ ಬದುಕಬೇಕಿತ್ತು. ಮಧ್ಯಯುಗದಲ್ಲಿ ವಿದೇಶಿಯರ ಆಡಳಿತದಲ್ಲಿ ಮಹಿಳೆಯರು ಸ್ವಲ್ಪಮಟ್ಟಿಗೆ ಉಸಿರಾಡುವಂತಾಯಿತು. ಮಹಿಳಾ ಸ್ವತಂತ್ರ ಮತ್ತು ಶಿಕ್ಷಣಕ್ಕೆ ಬ್ರಿಟಿಷ್ ಅಧಿಕಾರಿಗಳ ಮತ್ತು ಸಮಾಜ ಸುಧಾರಕರ ಕೊಡುಗೆ ಅಪಾರವಾದುದು ಎಂದು ಹೇಳಿದರು. ಸ್ವಾತಂತ್ರ ನಂತರ ಮಹಿಳಾ ಸುರಕ್ಷತೆಗೆ ಹೊಸ ಕಾನೂನುಗಳನ್ನು ತರಲಾಯಿತು. ಕ್ರಾಂತಿಕಾರಕ ಬದಲಾವಣೆ ಆಯಿತು. ಮಹಿಳಾ ಶಿಕ್ಷಣ ಜಾಗೃತಿ ಮೂಡಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ಅವರು ಮಾತನಾಡಿ, ಶಿಕ್ಷಣ ಪಡೆದ ಮಹಿಳೆ ತನ್ನ ಹಕ್ಕುಗಳನ್ನು ಅರಿತು ಸಮಾಜದಲ್ಲಿ ಆತ್ಮವಿಶ್ವಾಸದಿಂದ ಬದುಕಲು ಸಾಧ್ಯವಾಗುತ್ತದೆ. ಮಹಿಳೆಯರು ವಿದ್ಯಾಭ್ಯಾಸದ ಮೂಲಕ ಕಲೆ, ವಿಜ್ಞಾನ, ಸಾಹಿತ್ಯ, ಆಡಳಿತ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಇಂತಹ ಸಾಧನೆಗಳು ಸಮಾಜದಲ್ಲಿ ಹೊಸ ದಾರಿಯನ್ನು ತೋರಿಸುತ್ತವೆ. ಹೆಣ್ಣು ಮಕ್ಕಳಿಗೆ ಶಿಕ್ಷಣದ ಅವಕಾಶ ನೀಡುವುದು ಕುಟುಂಬದ ಜವಾಬ್ದಾರಿಯಷ್ಟೇ ಅಲ್ಲ, ಅದು ಸಮಾಜದ ನೈತಿಕ ಕರ್ತವ್ಯವೂ ಆಗಿದೆ ಎಂದು ಅವರು ಹೇಳಿದರು. ಕನ್ನಡ ಮಾಧ್ಯಮದಲ್ಲಿ ಪಿಯುಸಿ ಓದಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಆಲೂರು ಸಿದ್ದಾಪುರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಪಿ.ಸಿ.ದೀಕ್ಷಿತಾ(ಪ್ರ), ಲಿತಿನಾ(ದ್ವಿ), ಇಶಾಂತ್ ರೆಹಾನ(ತೃ), ಗೀತಾಗಾಯನ ಸ್ಪರ್ಧೆಯಲ್ಲಿ ಕಿಶೋರ್(ಪ್ರ), ಅಂಜಲಿ(ದ್ವಿ), ಧನ್ಯಾ(ತೃ) ಅವರುಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಸನಾ ಹರ್ಷ ಮತ್ತು ಕಿಶೋರ್ ಅವರಿಂದ ಕನ್ನಡ ಗೀತೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ದತ್ತಿ ದಾನಿಗಳಾದ ಬೆಂಗಳೂರಿನ ಆರ್.ರಾಜರಾವ್, ಸಂದ್ಯಾಕಾಮತ್, ಕ.ಸಾ.ಪ ಜಿಲ್ಲಾಧ್ಯಕ್ಷ ಕೇಶವ ಕಾಮತ್, ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಪ್ರಾಂಶುಪಾಲ ಡಾ.ಬಿ.ಡಿ.ಹರ್ಷ, ಕಸಾಪ ಪದಾಧಿಕಾರಿಗಳಾದ ಎ.ಪಿ.ವೀರರಾಜು, ಜ್ಯೋತಿ ಅರುಣ್, ಎಚ್.ಜೆ.ಜವರಪ್ಪ, ವಾಸುರೈ ಇದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.