Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನವು ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ, ಪ್ರವಾಸೋದ್ಯಮ ಹಾಗೂ ಪ್ರವಾಸೋದ್ಯಮ ಇಲಾಖೆಯ ಪಾಲುದಾರರು ಹಾಗೂ ಇತರರ ಸಹಕಾರದಲ್ಲಿ ಸ್ವಚ್ಛ ಹಾಗೂ ಸುಂದರ ಕೊಡಗು ಅಭಿಯಾನ ನಡೆಯಿತು. ನಗರದ ರಾಜಾಸೀಟು ಉದ್ಯಾನವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ, ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷರಾದ ಮೋಂತಿ ಗಣೇಶ್, ಪ್ರವಾಸೋದ್ಯಮ ಪಾಲುದಾರರಾದ ಬಿ.ಜಿ.ಅನಂತಶಯನ, ಜಿ.ಚಿದ್ವಿಲಾಸ್, ಎಫ್‍ಎಂಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ರಾಘವ, ಓಂಕಾರೇಶ್ವರ ದೇವಸ್ಥಾನದ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಟೂರ್ ಅಂಡ್ ಟ್ರಾವೆಲ್ ಅಸೋಷಿಯೇಷನ್ ಅಧ್ಯಕ್ಷರಾದ ವಸಂತ, ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಕಾರ್ಯದರ್ಶಿ ನಾಸೀರ್, ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ಜತಿನ್, ಇತರರು ಇದ್ದರು. ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್(ಕುಶಾಲನಗರ), ರಿವರ್ ರ್ಯಾಪ್ಟಿಂಗ್ ಅಸೋಷಿಯೇಷನ್(ದುಬಾರೆ),ಸೋಮವಾರಪೇಟೆ ಹೋಂ ಸ್ಟೇ ಅಸೋಷಿಯನ್ ಅಧ್ಯಕ್ಷರಾದ ರೋಹಿತ್(ಸೋಮವಾರಪೇಟೆ) ಇತರರು ಆಯಾಯ ತಾಲ್ಲೂಕಿನಲ್ಲಿ ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಡಿಕೇರಿ ನಗರದಲ್ಲಿ ಅರ್ಧ ಲೀಟರ್ ಮತ್ತು ಒಂದು ಲೀಟರ್ ಬಾಟಲಿ ನೀರನ್ನು ನಿಷೇಧಿಸಲಾಗಿದೆ. ಇದರಿಂದ ಪ್ಲಾಸ್ಟಿಕ್ ಬಳಕೆ ಸಾಧ್ಯವಾದಷ್ಟು ನಿಯಂತ್ರಣಕ್ಕೆ ಬಂದಿದೆ. ಅದೇ ರೀತಿ ಮುಂದುವರೆಯಬೇಕು. ಪ್ಲಾಸ್ಟಿಕ್ ಬಳಕೆಯನ್ನು ಹಂತ ಹಂತವಾಗಿ ಕಡಿಮೆ ಮಾಡಬೇಕು ಎಂದರು. ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ನಿತಿನ್ ಚಕ್ಕಿ ಅವರು ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಪ್ಲಾಸ್ಟಿಕ್‍ನ್ನು ಬಳಸಬಾರದು. ಶುಚಿತ್ವಕ್ಕೆ ಒತ್ತು ಕೊಟ್ಟಲ್ಲಿ ಉತ್ತಮ ಪರಿಸರ ಮತ್ತು ಆರೋಗ್ಯವನ್ನು ಕಾಣಬಹುದು ಎಂದು ತಿಳಿಸಿದರು. ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ ಅವರು ಕೊಡಗು ಜಿಲ್ಲಾ, ತಾಲ್ಲೂಕು ಹಾಗೂ ಪ್ರವಾಸಿ ಸ್ಥಳಗಳು ಸೇರಿದಂತೆ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳ ಜೊತೆಗೂಡಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹಚ್ಚಹಸಿರಿನ ಕೊಡಗು ಮತ್ತಷ್ಟು ಸುಂದರವಾಗಿರಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದ್ದಾರೆ ಎಂದು ಹೇಳಿದರು. ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷರಾದ ಮೋಂತಿ ಗಣೇಶ್ ಅವರು ಮಾತನಾಡಿ ಉತ್ತಮ ಪರಿಸರಕ್ಕೆ ಒತ್ತು ಕೊಟ್ಟಿದ್ದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಸೆಳೆಯಬಹುದಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದರು. ಪ್ರವಾಸೋದ್ಯಮ ಪಾಲುದಾರರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ತಲಕಾವೇರಿ, ಓಂಕಾರೇಶ್ವರ ದೇವಸ್ಥಾನ, ಭಾಗಮಂಡಲ, ಪ್ರವಾಸಿ ಸ್ಥಳಗಳಾದ ಮಡಿಕೇರಿ ತಾಲ್ಲೂಕಿನ ಅಬ್ಬಿ ಜಲಪಾತ, ನಾಲ್ಕುನಾಡು ಅರಮನೆ, ರಾಜರ ಗದ್ದುಗೆ, ರಾಜಾಸೀಟು, ಕೋಟೆ, ಅಬ್ಬಿ ಜಲಪಾತ, ಚೇಲಾವರ ಜಲಪಾತ. ಕುಶಾಲನಗರ ತಾಲ್ಲೂಕಿನ ದುಬಾರೆ ರಿವರ್ ರ್ಯಾಫ್ಟಿಂಗ್, ಕಾವೇರಿ ನಿಸರ್ಗಧಾಮ, ಹಾರಂಗಿ ಜಲಾಶಯ, ಹಾರಂಗಿ ಉದ್ಯಾನವನ ಆನೆ ಶಿಬಿರ ಮತ್ತು ಹಿನ್ನೀರಿನ ಸಾಹಸ ಕ್ರೀಡೆ ಸ್ಥಳಗಳು, ಚಿಕ್ಲಿ ಹೊಳೆ. ಸೋಮವಾರಪೇಟೆ ತಾಲ್ಲೂಕಿನ ಹೊನ್ನಮ್ಮ ಕೆರೆ, ಮಕ್ಕಳ ಗುಡಿ ಬೆಟ್ಟ, ಕೋಟೆ ಬೆಟ್ಟ, ಸೂರ್ಲಬ್ಬಿ ಜಲಪಾತ ಮತ್ತು ಮಲ್ಲಳ್ಳಿ ಜಲಪಾತ. ಹಾಗೆಯೇ ಪೊನ್ನಂಪೇಟೆ ತಾಲ್ಲೂಕಿನ ಬರ್ಪುಹೊಳೆ ರಿವರ್ ರ್ಯಾಫ್ಟಿಂಗ್ ಮತ್ತು ಇರ್ಪು ಜಲಪಾತ ಇಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಹಾಗೆಯೇ ಮಡಿಕೇರಿ ನಗರದಲ್ಲಿ ವಿರಾಜಪೇಟೆ ರಸ್ತೆ, ಭಾಗಮಂಡಲ-ತಲಕಾವೇರಿ ರಸ್ತೆ(ಮಂಗಳೂರು ರಸ್ತೆ), ಮಡಿಕೇರಿ-ಸಿದ್ದಾಪುರ ರಸ್ತೆ ಮತ್ತು ಮಡಿಕೇರಿ-ಮೈಸೂರು ರಸ್ತೆ ಈ ವ್ಯಾಪ್ತಿಯ 2 ಕಿ,.ಮೀ ವರೆಗೆ ಸ್ವಚ್ಛತಾ ಅಭಿಯಾನ ನಡೆಯಿತು. ಕುಶಾಲನಗರದಲ್ಲಿ ಕೊಪ್ಪ ಗೇಟಿನಿಂದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ, ಸೋಮೇಶ್ವರ ದೇವಸ್ಥಾನದಿಂದ ಕೋಣಮಾರಮ್ಮ ದೇವಸ್ಥಾನ ವೃತ್ತದ ಮುಖಾಂತರ ಐಬಿ ರಸ್ತೆಗಾಗಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ, ತಾವರೆಕೆರೆಯಿಂದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ ಮತ್ತು ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಕೆಎಸ್‍ಆರ್‍ಸಿ ಬಸ್ ನಿಲ್ದಾಣದವರೆಗೆ ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಮತ್ತಷ್ಟು ಮಾಹಿತಿ: ಕೊಡಗು ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಕಾವೇರಿ ನಿಸರ್ಗಧಾಮ ಎನ್.ಟಿ.ಸಿ ಹಾಗೂ ಕೂರ್ಗ್ ರಿವೇರ್ ರೆಸಾರ್ಟ್ ಇದರ ಸಹಯೋಗದಿಂದ ಹಾಗೂ ಅರಣ್ಯ ಅಧಿಕಾರಿಗಳು ಇವರೆಲ್ಲರ ಸಹಯೋಗದಿಂದ ಸುಮಾರು 50 ಜನರು ಕಾವೇರಿ ನಿಸರ್ಗಧಾಮ ಮುಂಭಾಗದಿಂದ ಗುಡ್ಡೆಹೊಸೂರು ರೋಡು ಮಾರ್ಗವಾಗಿ ಎಡಕ್ಕೂ ಹಾಗೂ ಬಲಕ್ಕೂ ಸ್ವಚ್ಛತಾ ಕಾರ್ಯವನ್ನು ಕೈಗೊಂಡಿರುತ್ತಾರೆ. ರೋಡಿನ ಮಧ್ಯೆ ಕಸದ ರಾಶಿಯೇ ಇತ್ತು ಅದನ್ನು ಆಯಾಯ ಗ್ರಾಮ ಪಂಚಾಯಿತಿಗಳು ಒಂದು ನಿರ್ದಿಷ್ಟ ಜಾಗದಲ್ಲಿ ಕಸದ ತೊಟ್ಟಿ ಇಟ್ಟರೆ ಈ ಕಸವನ್ನು ಸ್ವಲ್ಪಮಟ್ಟಿಗೆ ಆದರೂ ಸುಧಾರಿಸಬಹುದು. ಹಾಗೆಯೇ ಸರ್ಕಾರ ಇದರ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿ ಪ್ರವಾಸೋದ್ಯಮಗಳು ಮುಂಬರುವ ದಿನಗಳಲ್ಲಿ ಹೆಚ್ಚು ಜನರನ್ನು ಕೊಡಗಿನಲ್ಲಿ ಆಕರ್ಷಿಸುತ್ತದೆ. ಆದ್ದರಿಂದ ಕಸದ ರಾಶಿಯು ಅದೇ ತರ ಹೆಚ್ಚಾಗುತ್ತದೆ. ಇದಕ್ಕೆ ಪರಿಹಾರವಾಗಿ ಆಯಾಯ ನಿರ್ದಿಷ್ಟ ಸ್ಥಳಗಳಲ್ಲಿ ಕಸದ ಬುಟ್ಟಿಯನ್ನು ಅಳವಡಿಸಲು ಕ್ರಮವನ್ನು ಕೈಗೊಳ್ಳಬೇಕು ಎಂಬುದು ಕೇಳಿಬಂದೀತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.