
ಮಡಿಕೇರಿ ಮಾ.16 NEWS DESK : ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶೇಷ ಚೇತನರಿಗೆ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಿತು. ಪಾಲಿಬೆಟ್ಟ, ಮಂಗಳೂರು, ಮಡಿಕೇರಿ, ಮಂಡ್ಯ, ಮೈಸೂರು, ಕೊಡಗು ಮತ್ತು ಬೈಲುಕುಪ್ಪೆಯ ಟಿಬೇಟಿಯನ್ ವಸತಿ ಶಾಲೆ ಸೇರಿದಂತೆ ಸುಮಾರು 8 ಶಾಲೆಯ 150 ಕ್ಕೂ ಹೆಚ್ಚು ವಿಶೇಷ ಚೇತನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. 8 ರಿಂದ 11 ವರ್ಷ, 12 ರಿಂದ 15 ವರ್ಷ, 16 ರಿಂದ 21 ವರ್ಷ, 22 ರಿಂದ 29 ವರ್ಷ ಹಾಗೂ 30 ವರ್ಷದಿಂದ ಮೇಲ್ಪಟ್ಟ ವಿಶೇಷಚೇತನರು 100 ಮೀಟರ್ ಓಟ, 200 ಮೀಟರ್ ಓಟ, ಶಾಟ್‍ಫೂಟ್, ಲಾಂಗ್ ಜಂಪ್, ರಿಲೇ ಮತ್ತಿತರ ಕ್ರೀಡಾಕೂಟದಲ್ಲಿ ಲವಲವಿಕೆಯಿಂದ ಪಾಲ್ಗೊಂಡಿದ್ದು, ಎದ್ದು ಕಂಡಿತು. ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ವಿಶೇಷಚೇತನರು ಯಾವುದೇ ಕಾರಣಕ್ಕೂ ವಿಚಲಿತರಾಗದೆ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕವಾಗಿ ದೃಢತೆ ಕಾಣಬಹುದಾಗಿದೆ ಎಂದು ಅಭಿಪ್ರಾಯಪಟ್ಟರು. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಪಾಲ್ಗೊಳ್ಳುವುದು ಅತೀ ಮುಖ್ಯ. ಆ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಮುಂದೆ ಬರಬೇಕು ಎಂದು ಹೇಳಿದರು. ಯಾವುದೇ ಕ್ಷೇತ್ರದಲ್ಲಿ ಯಾರೇ ಆದರೂ ಸಹ ತಂಡವಾಗಿ ಕೆಲಸ ಮಾಡಿದಾಗ ಯಶಸ್ಸುಗಳಿಸಲು ಸಾಧ್ಯ. ಆ ದಿಸೆಯಲ್ಲಿ ಸುಂದರ ಬದುಕು ಹಾಗೂ ಆರೋಗ್ಯಯುತ ಜೀವನ ನಡೆಸಲು ಕ್ರೀಡೆ, ಸಾಹಿತ್ಯ, ಕಲೆ, ಬರವಣಿಗೆ ಹೀಗೆ ವಿವಿಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಕ್ರೀಯಾಶೀಲ ಹಾಗೂ ಸೃಜನಶೀಲವಾಗಿ ಬದುಕಬಹುದು ಎಂದರು. ಪ್ರತಿಯೊಬ್ಬರಿಗೂ ವ್ಯಾಯಾಮ ಅತ್ಯಗತ್ಯ. ಆದ್ದರಿಂದ ಒಂದಲ್ಲ ಒಂದು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಲಹೆ ಮಾಡಿದರು. ಕೂರ್ಗ್ ಫೌಂಡೇಶನ್ ಟ್ರಸ್ಟಿ ಗಂಗಾ ಚಂಗಪ್ಪ ಅವರು ಮಾತನಾಡಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಹೆಚ್ಚಿನ ಆಯಸ್ಸು ಪಡೆಯಬಹುದಾಗಿದೆ ಎಂದು ಅಭಿಪ್ರಾಯಪಟ್ಟರು. ಕ್ರೀಡೆಯನ್ನು ಪ್ರೀತಿಸಿ ಪ್ರತಿನಿತ್ಯ ಭಾಗವಹಿಸುವಂತಾಗಬೇಕು. ಕ್ರೀಡೆ ಜೀವನಕ್ಕೆ ಸುಂದರವಾದ ಅರ್ಥವನ್ನು ನೀಡುತ್ತದೆ ಕ್ರೀಡೆ ಎಂದರೆ ಗೆಲುವು ಮತ್ತು ಸೋಲು ಮಾತ್ರವಲ್ಲ, ಜನರು ದಿನನಿತ್ಯ ಸದೃಢರಾಗಿರಬೇಕು ಮತ್ತು ಆರೋಗ್ಯವಾಗಿರಲು ಕ್ರೀಡೆ ಸಹಕಾರಿಯಾಗಿದೆ ಎಂದು ಆರ್.ಎನ್.ಬಿಂದುಮಣಿ ಅವರು ಹೇಳಿದರು. ಕೂರ್ಗ್ ಫೌಂಡೇಶನ್ ಟ್ರಸ್ಟಿ ಗಂಗಾ ಚಂಗಪ್ಪ ಅವರು ಮಾತನಾಡಿ, ವಿಶೇಷ ಚೇತನ ಮಕ್ಕಳಿಗೆ ಬೆಂಬಲ ಮತ್ತು ಹುರಿದುಂಬಿಸುವುದರೊಂದಿಗೆ ಪ್ರೋತ್ಸಾಹಿಸಬೇಕು. ಪ್ರತಿ ಮಗುವಿಗೂ ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸಲು ಅವಕಾಶವನ್ನು ಒದಗಿಸಬೇಕು ಎಂದರು. ಟಾಟಾ ಕಾಫಿ ಸಂಸ್ಥೆಯ ಜನರಲ್ ಮ್ಯಾನೇಜರ್ ಕೆ.ಜಿ.ರಾಜೀವ್ ಅವರು ಮಾತನಾಡಿ ವಿಶೇಷ ಚೇತನರು ಲವಲವಿಕೆಯಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವುದು ಮೆಚ್ಚುವಂತದ್ದು ಎಂದು ಹೇಳಿದರು. ಟಾಟಾ ಕಾಫಿ ಸಂಸ್ಥೆಯ ಉಪ ವ್ಯವಸ್ಥಾಪಕರಾದ ಬೋಪಯ್ಯ ಅವರು ಮಾತನಾಡಿ ಕ್ರೀಡಾ ಚಟುವಟಿಕೆಯಲ್ಲಿ ವಿಶೇಷ ಚೇತನರು ಉತ್ಸ್ಸಾಹದಿಂದ ಪಾಲ್ಗೊಂಡಿದ್ದಾರೆ ಎಂದರು. ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ನಿರ್ದೇಶಕರಾದ ಆರತಿ ಸೋಮಯ್ಯ ಮಾತನಾಡಿ, ಸ್ವಸ್ಥ ಸಂಸ್ಥೆಯು ವಿಶೇಷ ಚೇತನ ಮಕ್ಕಳ ಪ್ರಗತಿಗೆ ಪ್ರಮುಖ ಪಾತ್ರ ವಹಿಸಿದೆ. ಇಲ್ಲಿ ಮಕ್ಕಳ ಬೆಳವಣಿಗೆಗಾಗಿ ಎಲ್ಲಾ ರೀತಿಯ ತರಬೇತಿಗಳನ್ನು ನೀಡಲಾಗುತ್ತಿದೆ. ಮಕ್ಕಳ ಶ್ರೇಯೋಭಿವೃದ್ಧಿಗಾಗಿ ನಿರಂತರ ಶ್ರಮಿಸುವುದಾಗಿ ತಿಳಿಸಿದರು. ಬೋಧಿಸತ್ವ ಸಂಸ್ಥೆಯ ಅಧ್ಯಕ್ಷರಾದ ಕರ್ಮ ರಿಂಪೆÇೀಚೆ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಟಾಟಾ ಕಾಫಿ ಲಿಮಿಟಡ್ ಸಿನಿಯರ್ ಜೆನೆರಲ್ ಮ್ಯಾನೇಜರ್ ಕೆ.ಜಿ.ರಾಜೀವ್, ಹಿರಿಯ ಕಾಫಿ ಬೆಳೆಗಾರರು ಮತ್ತು ಸಮಾಜ ಸೇವಕರಾದ ಬೋಸ್ ಮಂದಣ್ಣ, ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ನಿರ್ವಾಹಕರಾದ ಐಶ್ವರ್ಯ ಬೋಪಯ್ಯ, ಶಿಕ್ಷಕರು, ಪೆÇೀಷಕರು, ಆರೋಗ್ಯ ಸಿಬ್ಬಂದಿಗಳು ಇತರರು ಹಾಜರಿದ್ದರು. ಸಮಾರೋಪ ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಜಿಲ್ಲಾ ವಿಶೇಷ ಚೇತನರ ಅಧಿಕಾರಿ ಕೆ.ಜಿ.ವಿಮಲ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಇಎನ್‍ಟಿ ವಿಭಾಗದ ಮುಖ್ಯಸ್ಥರಾದ ಡಾ.ಶ್ವೇತಾ, ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕರಾದ ಗೌತಮ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಸ್ವಸ್ಥ ಸಂಸ್ಥೆಯ ವಿಶೇಷಚೇತನರ ಶಿಕ್ಷಕರಾದ ಬಿಜು ಇತರರು ಪಾಲ್ಗೊಂಡಿದ್ದರು. ನಿವೃತ್ತ ಪ್ರಾಂಶುಪಾಲರಾದ ಪುಷ್ಪ ಕುಟ್ಟಣ್ಣ ಅವರು ಮಾತನಾಡಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಾದ ಸ್ವಪ್ನ ಶೇಟ್, ಚೆರಿ ಚೋಂದಮ್ಮ ಪ್ರಾರ್ಥಿಸಿದರು. ಸುಂಟಿಕೊಪ್ಪ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ನಿರ್ದೇಶಕರಾದ ಆರತಿ ಸೋಮಯ್ಯ ಸ್ವಾಗತಿಸಿದರು. ಅನಿತಾ ಪ್ರವೀಣ್ ಚೋಕೀರ ನಿರೂಪಿಸಿ, ವಂದಿಸಿದರು. ಬೋಧಿಸತ್ವ ಸಂಸ್ಥೆಯ ಅಧ್ಯಕ್ಷರಾದ ಕರ್ಮ ರಿಂಪೆÇೀಚೆ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಸ್ವಸ್ಥ ವಿದ್ಯಾರ್ಥಿಗಳಾದ ವೈ.ಎಂ.ದರ್ಶನ್, ಬಿ.ಎಂ.ಸಂಗೀತ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು









