Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ

ಮಾರ್ಚ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK  ಮಾ.17 : ಕೊಡಗು ಜಿಲ್ಲೆಯಲ್ಲಿರುವ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಡಬೇಕು, ಮೂಲಭೂತ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲೆಯಲ್ಲಿ ಆದಿವಾಸಿ ಕುಟುಂಬಗಳು ಅನುಭವಿಸುತ್ತಿರುವ ಸಂಕಷ್ಟದ ಬದುಕನ್ನು ವಿವರಿಸಿದ ಪ್ರಮುಖರು, ಸರಕಾರ ದುರ್ಬಲ ವರ್ಗವನ್ನು ನಿರ್ಲಕ್ಷಿಸುತ್ತಿದೆಯೆಂದು ಆರೋಪಿಸಿದರು. ಜಿಲ್ಲೆಯ ವಿವಿಧ ತೋಟಗಳ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳನ್ನು ಮುಕ್ತಗೊಳಿಸಿ, ಸ್ವಂತ ನಿವೇಶನ ಮತ್ತು ಮನೆಯನ್ನು ನೀಡಬೇಕು, ಒತ್ತುವರಿ ಭೂಮಿಯನ್ನು ಅತ್ಯಂತ ಕಡಿಮೆ ದರದಲ್ಲಿ ಆಸ್ತಿ ಹೊಂದಿರುವವರಿಗೆ ಗುತ್ತಿಗೆ ಆಧಾರದಲ್ಲಿ ನೀಡುವ ಆದೇಶವನ್ನು ಸರಕಾರ ವಾಪಾಸ್ಸು ಪಡೆಯಬೇಕು, ಒತ್ತುವರಿ ಭೂಮಿಯನ್ನು ಆದಿವಾಸಿ ಕುಟುಂಬಗಳಿಗೆ ಹಂಚಿಕೆ ಮಾಡಬೇಕು. ಜಿಲ್ಲೆಯಲ್ಲಿರುವ ಆದಿವಾಸಿ ಕುಟುಂಬಗಳಲ್ಲಿ ಸಮರ್ಪಕವಾಗಿ ಆಧಾರ್ ಕಾರ್ಡ್, ಪರಿತರ ಚೀಟಿ, ಮತದಾರರ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ ಮತ್ತಿತರ ದಾಖಲೆಗಳು ಇಲ್ಲದೆ ಇರುವುದರಿಂದ, ಸರಕಾರ ನೀಡುವ ಯಾವುದೇ ಸೌಲಭ್ಯಗಳು ಅರ್ಹರಿಗೆೆ ತಲುಪುತ್ತಿಲ್ಲ. ಆದ್ದರಿಂದ ಜಿಲ್ಲಾಡಳಿತ ಆದಿವಾಸಿಗಳಿಗೆ ದಾಖಲಾತಿ ಒದಗಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ರೂಪಿಸಬೇಕು. ಆದಿವಾಸಿಗಳ ಮೂಲಭೂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಆದಿವಾಸಿಗಳ ವಿಶೇಷ ಸಭೆ ನಡೆಸಬೇಕು. ರಾಷ್ಟ್ರೀಯ ಉದ್ಯಾನವನ, ಮೀಸಲು ಅರಣ್ಯ, ಹುಲಿ ಮೀಸಲು ಪ್ರದೇಶ, ಇತ್ಯಾದಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಆದಿವಾಸಿಗಳನ್ನು ಹೊರ ಹಾಕುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ, ಅರಣ್ಯ ಹಕ್ಕು ಕಾಯ್ದೆ 2006ನ್ನು ಅನುಷ್ಟಾನಗೊಳಿಸಿ ಖಚಿತಪಡಿಸಬೇಕು. ಭೂಮಿ ಮತ್ತು ಅರಣ್ಯದ ಮೇಲೆ ಆದಿವಾಸಿಗಳಿಗೆ ಇರುವ ಹಕ್ಕುಗಳನ್ನು ಗುರುತಿಸಬೇಕು ಹಾಗೂ ಅವರ ಮೇಲಾಗುತ್ತಿರುವ ಕಿರುಕುಳವನ್ನು ನಿಲ್ಲಿಸಬೇಕು. ಆದಿವಾಸಿಗಳಲ್ಲಿ ಕೋಮು ದ್ವೇಷವನ್ನು ಹರಡುವ ಎಲ್ಲಾ ಪ್ರಯತ್ನಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಆದಿವಾಸಿಗಳ ಮೇಲಿನ ದೌರ್ಜನ್ಯ ಮತ್ತು ತಾರತಮ್ಯಗಳನ್ನು ನಿಲ್ಲಿಸಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆ 1989ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಿದರು. ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕರುಗಳಾದ ಪಿ.ಆರ್.ಭರತ್, ಜೆ.ಆರ್.ಪ್ರೇಮ, ಹೆಚ್.ಬಿ.ರಮೇಶ್, ಪ್ರಮುಖರಾದ ಭಾಗ್ಯ, ಬಸವ, ಅಯ್ಯಪ್ಪ, ಪಾರ್ವತಿ, ರವಿ, ರಾಧಿಕಾ, ಸುರೇಶ, ಪಿ.ಸಿ.ಗೀತಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.