
ಮಡಿಕೇರಿ NEWS DESK ಮಾ.17 : ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.ಈ ಸಂದರ್ಭ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಸಭೆಯ ಮುಖ್ಯ ಸಚೇತಕರು ಅಶೋಕ್ ಪಟ್ಟಣ, ಶಾಸಕ ದೇಶಪಾಂಡೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.









