

ಮಡಿಕೇರಿ NEWS DESK ಮಾ.19 : ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೆಂಚೆಟ್ಟಿಯಲ್ಲಿ ನಡೆದಿದೆ. ಮಾದಾಪುರ ಜಂಬೂರು ನಿವಾಸಿ ಅನಿಲ್(36) ಮೃತ ದುರ್ದೈವಿಯಾಗಿದ್ದು, ಬೈಕ್ ನಲ್ಲಿದ್ದ ಹರೀಶ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ. ಸುಂಟಿಕೊಪ್ಪದಿಂದ ಮಾದಾಪುರದೆಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.








