

ಹಾಸನ NEWS DESK ಮಾ.19 : ಮಾಜಿ ಪ್ರಧಾನಿ ಹಾಗೂ ಜಾತ್ಯಾತೀತ ಜನತಾದಳದ ವರಿಷ್ಠ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ (88) ಅವರು ವಯೋಸಹಜ ಕಾಯಿಲೆಯಿಂದ ಇಂದು (ಮಾ.19) ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಹೋದರಿಯ ನಿಧನಕ್ಕೆ ಹೆಚ್.ಡಿ.ದೇವೇಗೌಡರು ಹಾಗೂ ಕುಟುಂಬದ ಸದಸ್ಯರು ಕಂಬನಿ ಮಿಡಿದಿದ್ದಾರೆ.








