

ಮಡಿಕೇರಿ NEWS DESK ಮಾ.19 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಜನಸ್ಪಂದನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ಮನವಿ ಮಾಡಿದ್ದಾರೆ. ಶಾಸಕರ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ 2.30 ಗಂಟೆಗೆ ಪ್ರಾರಂಭವಾಗುವ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ 39 ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಸಾರ್ವಜನಿಕರು, ವಿಶೇಷವಾಗಿ ಭಾಗಮಂಡಲ ಪಂಚಾಯತ್ ನ ತಾವೂರು, ತಣ್ಣೀಮಾನಿ, ಚೆರಂಗಾಲ, ಕೊರಂಗಾಲ, ಭಾಗಮಂಡಲ ಗ್ರಾಮಗಳ ಸಾರ್ವಜನಿಕರು ತಮ್ಮ ದೀರ್ಘ ಕಾಲದ ಮತ್ತು ಅಲ್ಪ ಕಾಲದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋಳಿಬೈಲು ವೆಂಕಟೇಶ್ ಕೋರಿದ್ದಾರೆ.








