Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ

ಮಾರ್ಚ್ 20, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಮಾ.20 : ಯುದ್ಧದ ಪರಿಸ್ಥಿತಿಯಿಂದ ವಿಶ್ವದ ಹಲವು ದೇಶಗಳು ನಾನಾ ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ಬಗ್ಗೆ ಕನಿಷ್ಠ ಅರಿವಿಲ್ಲದ ಕಾಂಗ್ರೆಸ್ ಪಕ್ಷ ಅಡುಗೆ ಅನಿಲದ ಬೆಲೆ ಏರಿಕೆಯ ನೆಪವೊಡ್ಡಿ ಕುಶಾಲನಗರದಲ್ಲಿ ನಡೆಸಿರುವ ಪ್ರತಿಭಟನೆ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿಯ ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯುದ್ಧ ಕಾಲದಲ್ಲಿ ಆಡಳಿತ ಪಕ್ಷದೊಂದಿಗೆ ಕೈಜೋಡಿಸಿ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಲು ಸಹಕಾರ ನೀಡುವ ಬದಲು ಕಾಂಗ್ರೆಸ್ ಪಕ್ಷ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ವಿಶ್ವದ ಎರಡನೇ ಅತಿದೊಡ್ಡ ಎಲ್‌ಪಿಜಿ ಆಮದುದಾರ ರಾಷ್ಟ್ರವಾಗಿರುವ ಭಾರತ ಯುದ್ಧದಿಂದಾಗಿ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಬೆಲೆ ಹೆಚ್ಚಳವಾಗಲು ಕಾರಣವಾಗಿದೆ. ಅಡುಗೆ ಅನಿಲದ ಸಿಲಿಂಡರ್ ಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯನ್ನು ಕೇಂದ್ರದ ಎನ್‌ಡಿಎ ನೇತೃತ್ವದ ಸರಕಾರ ಬೇಕಂತಲೇ ಸೃಷ್ಟಿ ಮಾಡಿಲ್ಲ ಅಥವಾ ಪ್ರಧಾನಮಂತ್ರಿಗಳು ಉದ್ದೇಶಪೂರ್ವಕವಾಗಿ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿಲ್ಲ. ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯಾಗಿದೆ, ಆದರೆ ಸಾಮಾನ್ಯ ಜ್ಞಾನವಿಲ್ಲದ ಕಾಂಗ್ರೆಸ್ಸಿಗರು ಎಲ್ಲಾ ಸಮಸ್ಯೆಗಳಿಗೆ ಕೇಂದ್ರ ಸರಕಾರವೇ ನೇರ ಹೊಣೆ ಎಂದು ಪ್ರತಿಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜನರಿಗೆ ಪ್ರಚೋದನೆ ನೀಡುವ ಉದ್ದೇಶದಿಂದ ರಸ್ತೆಯಲ್ಲಿ ಸೌದೆ ಒಲೆಯಲ್ಲಿ ಅಡುಗೆ ಮಾಡಿ ತೊಂದರೆ ನೀಡುತ್ತಿದ್ದಾರೆ. ಕೊಡಗಿನ ಜನ ಪ್ರಜ್ಞಾವಂತರಾಗಿದ್ದು, ಈ ಪ್ರತಿಭಟನೆಯಿಂದ ಸ್ವತ: ಕಾಂಗ್ರೆಸ್ಸಿಗರೇ ಅಪಹಾಸ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮೊದಲು ದೇಶಭಕ್ತಿಯನ್ನು ಪ್ರದರ್ಶಿಸಲಿ ಮತ್ತು ಜನಪರ ಕಾಳಜಿ ತೋರಲಿ. ಯುದ್ಧದಂತಹ ಸಂಕಷ್ಟದ ಕಾಲದಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾದರೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.