
ಸುಂಟಿಕೊಪ್ಪ ಮಾ.20 NEWS DESK : ಕೊಡಂಗಲ್ಲೂರ್ ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ವಿಶೇಷ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ 60ನೇ ವಾರ್ಷಿಕೋತ್ಸವದ ಅಂಗವಾಗಿ ವಾರ್ಷಿಕ ಮಹೋತ್ಸವದ ಅಂಗವಾಗಿ ಗಣಪತಿ ಹೋಮ ನಡೆಯಿತು. ಸಂಜೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು, ಶ್ರೀ ಗಣಪತಿ ಮತ್ತು ಸುಬ್ರಮಣ್ಯ ಸ್ವಾಮಿ ದೇವರ ಪೂಜೆ, ಮುತ್ತಪ್ಪ ದೇವರ ಬೆಳ್ಳಾಟಂ ಮತ್ತು ಪೈಗುಂತಿ, ಶ್ರೀ ಚಾಮುಂಡೇಶ್ವರಿ ದೇವಿ ಪೂಜೆ, ಗುಳಿಗನ ಪೂಜೆ, ಶ್ರೀ ಭದ್ರಕಾಳಿ ದೇವಿಗೆ ಆರ್ಚನೆ, ನೈವೆಧ್ಯ ಪೂಜೆ ನೆರವೇರಿತು. ರಾತ್ರಿ ಶ್ರೀ ದೇವಿ ದರ್ಶನ, ತಲಪುರಿ ಮೆರವಣಿಗೆ, ವಸೂರಿ ಮಾಲೆ, ದೇವರ ಬೆಳ್ಳಾಟಂ, ದೇವಿ ದರ್ಶನ ನಂತರ ಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿತು. ಎರಡು ದಿನಗಳ ಕಾಲ ನಡೆದ ವಾರ್ಷಿಕೋತ್ಸವದಲ್ಲಿ ಸುಂಟಿಕೊಪ್ಪ, ಶ್ರೀದೇವಿ, ಹರದೂರು, ನಾಕೂರು, ಕಂಬಿಬಾಣೆ, ಮತ್ತಿಕಾಡು, ಕೇರಳ ಸೇರಿದಂತೆ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ದೇವಾಲಯದ ಮುಖ್ಯಸ್ಥರಾದ ಪಿ.ಆರ್.ಶಾಂತ ರಾಮಕೃಷ್ಣ, ಪಿ.ಆರ್.ಸುಕುಮಾರ್, ಸುನಿಲ್ ಕುಮಾರ್ ಸೇರಿದಂತೆ ಇತರರು ಇದ್ದರು.









