Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ NEWS DESK ಮಾ.21 : ಕೊಡಗು ಕಲಾವಿದರ ಸಂಘದ ವತಿಯಿಂದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಹಾಗೂ ಕೊಡವ ಧಾರಾವಾಹಿಗಳ ನಿರ್ದೇಶಕ ದಿ.ಎ.ಟಿ.ರಘು ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ವಿರಾಜಪೇಟೆಯಲ್ಲಿ ಭಾವಪೂರ್ಣವಾಗಿ ನೆರವೇರಿತು.
ನಗರದ ಕೆ.ಕೆ.ಗ್ರೂಪ್ಸ್ ಸಭಾಂಗಣದಲ್ಲಿ ಕೊಡಗು ಕಲಾವಿದರ ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿನಿಮಾ ತಂತ್ರಜ್ಞ ಸುರೇಶ್ ಪಿ. ಹುಲಿಕೇರಿ ಅವರು ರಚಿಸಿರುವ ಎ.ಟಿ.ರಘು ಅವರ ಸಿನಿ ಪಯಣದ “ಹೆಬ್ಬುಲಿ” ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.  ಲೇಖಕಿ ಉಳುವಂಗಡ ಕಾವೇರಿ ಉದಯ ಅವರು ರಚಿಸಿರುವ ಎ.ಟಿ.ರಘು ಸ್ಮರಣಾರ್ಥ ಸಾಹಿತ್ಯವನ್ನು ಟಿ.ಡಿ.ಮೋಹನ್ ಅವರು ಗಾಯನ ರೂಪದಲ್ಲಿ ಪ್ರಸ್ತುತ ಪಡಿಸಿದರು. ತಂದೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಎ.ಟಿ.ರಘು ಅವರ ಪುತ್ರಿ ಬಯವಂಡ ಬಿನು ಸಚಿನ್ ವ್ಯಕ್ತಿ ಜೀವಂತವಾಗಿರುವಾಗ ವ್ಯಕ್ತಿತ್ವದ ಮಹತ್ವ ತಿಳಿಯುವುದಿಲ್ಲ. ಆದರೆ ಅಗಲಿಕೆಯ ನಂತರ ಮಹತ್ವ ಭಾವಪೂರ್ಣವಾಗುತ್ತದೆ. ಕೊಡಗು ಕಲಾವಿದರ ಸಂಘದ ಕಲಾವಿದರಿಂದ ದೊರೆತ ಪ್ರೀತಿ, ಗೌರವಕ್ಕೆ ನಾನು ಸದಾ ಚಿರಋಣಿಯಾಗಿರುತ್ತೇನೆ ಎಂದು ಹೇಳಿದರು.
ಸಿನಿಮಾ ತಂತ್ರಜ್ಞ ಸುರೇಶ್ ಪಿ.ಹುಲಿಕೇರಿ ಅವರು ಮಾತನಾಡಿ ಹಿರಿಯರಾದ ಎ.ಟಿ.ರಘು ಅವರೊಂದಿಗಿನ ಕಳೆದ 12 ವರ್ಷಗಳ ಒಡನಾಟ ಅವಿಸ್ಮರಣೀಯವೆಂದರು. ಕಲಾವಿದರಾದ ನೆರವಂಡ ಉಮೇಶ್, ಪುಗ್ಗೇರ ಆಕಾಶ್, ಅಲ್ಲಾರಂಡ ವಿಠಲ್ ನಂಜಪ್ಪ, ಚೆರುವಾಳಂಡ ಸುಜಲ ನಾಣಯ್ಯ ಹಾಗೂ ತಾತಂಡ ಪ್ರಭಾ ನಾಣಯ್ಯ ಅವರು ಎ.ಟಿ.ರಘು ಅವರ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ಉಳುವಂಗಡ ಕಾವೇರಿ ಉದಯ್ ಕವನ ವಾಚನ ಮಾಡಿದರು. ತಾತಂಡ ಶ್ರೇಯ ಸೋಮಣ್ಣ ಅವರು ಭರತನಾಟ್ಯದ ಮೂಲಕ ಗಮನ ಸೆಳೆದರು. *ಅಧ್ಯಕ್ಷರಾಗಿ ವಿಠಲ್ ನಾಣಯ್ಯ ಆಯ್ಕೆ*ಇದೇ ಸಂದರ್ಭ ಕೊಡಗು ಕಲಾವಿದರ ಸಂಘವನ್ನು ಪುನರ್ ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಹಾಗೂ ಸಹ ಕಾರ್ಯದರ್ಶಿಯಾಗಿ ಮಲ್ಲಮಾಡ ಶ್ಯಾಮಲ ಸುನಿಲ್ ಅವಿರೋಧವಾಗಿ ಆಯ್ಕೆಯಾದರು. ಇತರ ಪದಾಧಿಕಾರಿಗಳನ್ನು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದು ಪ್ರಮುಖರು ತಿಳಿಸಿದರು. ಕಾರ್ಯದರ್ಶಿ ಈರಮಂಡ ಹರಿಣಿ ವಿಜಯ್ ಅವರು ಕಳೆದ ಸಭೆಯ ವರದಿಯನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಪುಗ್ಗೇರ ಆಕಾಶ್, ಸೋಮಯಂಡ ಎಸ್.ಬೆಳ್ಯಪ್ಪ, ಅನಂತಶಯನ ಬಿ.ಜಿ, ಚೋಕಂಡ ನಾಜಿರ್, ಬಿದ್ದಂಡ ಉತಮ್ ಪೊನ್ನಪ್ಪ, ಆಚೆಯಡ ಗಗನ್ ಗಣಪತಿ, ಈರಮಂಡ ವಿಜಯ್, ನಾಪಂಡ ಆಶಾ ರವಿ, ಪೆಮ್ಮಚಂಡ ಉಷಾ ಗಣೇಶ್, ಸಂಕೇತ್ ಶಿವಪ್ಪ, ಜಾದೂಗಾರ್ ವಿಕ್ರಂ ಶೆಟ್ಟಿ, ಕಾಳಮಂಡ ಜಗತ್, ಕಾಳಮಂಡ ನಯನ, ಬಾಳೆಯಡ ಪ್ರತೀಶ್ ಪೂವಯ್ಯ, ತಾತಂಡ ನೈನಾ ಸೋಮಣ್ಣ ಸೇರಿದಂತೆ ಅನೇಕ ಕಲಾವಿದ ಸದಸ್ಯರುಗಳು ಉಪಸ್ಥಿತರಿದ್ದರು. ಟಿ.ಡಿ.ಮೋಹನ್, ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕೊಟ್ರಂಡ ಶ್ರೀಕಾಂತ್ ಪೂವಣ್ಣ, ಕ್ಯಾ.ಬಿದ್ದಂಡ ನಾಣಿ ದೇವಯ್ಯ, ಹೆಚ್.ಬಿ.ಗೋಪಾಲ್ ಅವರಿಂದ ಹಾಡು ಹಾಗೂ ಆಂಡಮಾಡ ಪವನ್ ಅಯ್ಯಪ್ಪ ಅವರಿಂದ ನಡೆದ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ಬಯವಂಡ ಬೀನಾ ಸಚಿನ್ ಪ್ರಾರ್ಥಸಿ ಟಿ.ಡಿ.ಮೋಹನ್ ಸ್ವಾಗತಿಸಿ, ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ನಿರೂಪಿಸಿ, ತಾತಂಡ ಪ್ರಭಾ ನಾಣಯ್ಯ ವಂದಿಸಿದರು. “ಹೆಬ್ಬುಲಿ” ಪುಸ್ತಕಕ್ಕೆ ಕಲಾವಿದ ಅಲ್ಲಾರಂಡ ವಿಠಲ್ ನಂಜಪ್ಪ ಅವರು ಸಹಕಾರ ನೀಡಿದ್ದಾರೆ.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

ಮಿಯಾಮಿ (ಅಮೆರಿಕ)/ಬೆಂಗಳೂರು NEWS DESK, ಆ.25  : ಕೃತಕ ಬುದ್ಧಿಮತ್ತೆ, ಡಿಜಿಟಲ್ ಫೊರೆನ್ಸಿಕ್ಸ್, ರೋಬೋಟಿಕ್ಸ್ ಮತ್ತು ಕಂಪ್ಯೂಟರ್ ವಿಜ್ಞಾನ ಕ್ಷೇತ್ರದ…

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.