
ಮಡಿಕೇರಿ ಮಾ.21 NEWS DESK : ಹಿರಿಯ ನಾಗರಿಕರ ವೇದಿಕೆ ಮತ್ತು ಲಯನ್ಸ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್, 24 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಕಣ್ಣಿನ ತಪಾಸಣಾ ಉಚಿತ ಶಿಬಿರ ನಡೆಯಲಿದೆ. ಖ್ಯಾತ ಕಣ್ಣಿನ ತಜ್ಞರಾದ ಡಾ.ಪ್ರಶಾಂತ್ ಅವರು ಕಣ್ಣಿನ ತಪಾಸಣೆ ನಡೆಸಲಿದ್ದಾರೆ. ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಕೆ.ಎ.ತಿಮ್ಮಯ್ಯ ಅವರು ತಿಳಿಸಿದ್ದಾರೆ.







