Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮಾ.21 NEWS DESK :  ಕೂಡಿಗೆ ಕ್ಲಸ್ಟರ್ ಕೇಂದ್ರ ವ್ಯಾಪ್ತಿಯ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಗೊಂಡ ಶಿಕ್ಷಕರನ್ನು  ಕ್ಲಸ್ಟರ್ ಕೇಂದ್ರ ಹಾಗೂ ಸರ್ಕಾರಿ ಶಾಲಾ ಶಿಕ್ಷಕರ ಬಳಗದ ವತಿಯಿಂದ ಕೂಡುಮಂಗಳೂರು ಸಮೀಪದ ವಿಜಯನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ನಡೆದ  ಸಮಾರಂಭದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ನಿವೃತ್ತಗೊಂಡ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ ಎಂ.ಎಂ.ಸತೀಶ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜೇನುಕಲ್ಲುಬೆಟ್ಟ ಶಾಲೆಯ ಶಿಕ್ಷಕ ಎಂ.ಎನ್.ರಾಮೇಗೌಡ, ಕೂಡುಮಂಗಳೂರು ಶಾಲೆಯ ಶಿಕ್ಷಕಿ ಎ. ಭೋಜಮ್ಮ, ಸೀಗೆಹೊಸೂರು ಶಾಲೆಯ ಶಿಕ್ಷಕಿ ಟಿ.ಎಸ್.ವಿನೋದ, ಚಿಕ್ಕತ್ತೂರು ಶಾಲೆಯ ಶಿಕ್ಷಕ ಎಚ್.ಎಂ.ಪ್ರಕಾಶ್ , ದೊಡ್ಡತ್ತೂರು ಶಾಲೆಯ ಶಿಕ್ಷಕ ಎಸ್. ಸಿ.ಗೋವಿಂದರಾಜ್ ಸೇರಿದಂತೆ ಇದೇ ವೇಳೆಯಲ್ಲಿ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸಿ ಇದೀಗ ಬೇರೆ ಕ್ಲಸ್ಟರ್ ಗಳ ಶಾಲೆಗಳಿಗೆ ವರ್ಗಾವಣೆಗೊಂಡಿರುವ ಎಸ್.ಆರ್.ಸುನಿತ, ಕೆ.ವಿ.ಕಮಲ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಶುಭಾಶಯಗಳನ್ನು ಕೋರಲಾಯಿತು. ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಸ್.ಎ.ಯೋಗೇಶ್, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ದೊಡ್ಡದು, ಇಂದಿನ ಶಿಕ್ಷಣ ಪದ್ಧತಿ ಸಾಕಷ್ಟು ಬದಲಾಗಿದೆ. ಮಕ್ಕಳಿಗೆ ಶಿಕ್ಷಿಸದೇ ಪಾಠ ಮಾಡಬೇಕು ಎಂದು ಪಾಲಕರು ತಾಕೀತು ಮಾಡುತ್ತಿರುವುದು ಮಕ್ಕಳಿಗೆ ಪಾಠ ಮಾಡುವುದೇ‌ ಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ.
ಆದರೂ, ಶಿಕ್ಷಕರು ಶಿಕ್ಷಣ ಇಲಾಖೆಯ ನಿಯಮದಡಿ ಮತ್ತು ಹಲವು ಕಾರ್ಯಕ್ರಮಗಳ ಒತ್ತಡದ ನಡುವೆ ಹಲವಾರು ಸವಾಲುಗಳನ್ನು ಎದುರಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಮಕ್ಕಳ ಶೈಕ್ಷಣಿಕ ಪ್ರಗತಿ ಕೂಡ ಉತ್ತಮವಾಗಿದೆ. ಈ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ವೃದ್ಧಿಸುವುದರೊಂದಿಗೆ ಸರ್ಕಾರಿ ಶಾಲೆಗಳ ಸಬಲೀಕರಣ ಮಾಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ಪ್ರಸನ್ನ ಮಾತನಾಡಿ, ಈ ಕ್ಲಸ್ಟರ್ ನಲ್ಲಿ ಶಿಕ್ಷಕರು ಜತೆಗೂಡಿ ಶಿಕ್ಷಕರ ಅವಿಸ್ಮರಣೀಯ ಸೇವೆಯನ್ನು ಶ್ಲಾಘಿಸಿ ನಿವೃತ್ತ ಶಿಕ್ಷಕರನ್ನು ಆತ್ಮೀಯವಾಗಿ ಬೀಳ್ಕೊಡುತ್ತಿರುವುದು ಉತ್ತಮ ಕಾರ್ಯ ಎಂದು ಶ್ಲಾಘಿಸಿದರು. ಮಕ್ಕಳಿಗೆ ಪಾಠ ಹೇಳಿ, ಮಕ್ಕಳ ಬದುಕಿಗೆ ಬೆಳಕಾದ ಶಾಲೆ ಶಿಕ್ಷಕರನ್ನು ಎಂದಿಗೂ ಮರೆಯಬಾರದು. ಜೀವನದ ಕೊನೆ ಕ್ಷಣದವರೆಗೂ ಅವರಿಗೆ ಋಣಿಗಳಾಗಬೇಕು ಎಂದರು. ಸನ್ಮಾನಿತರಾದ ನಿವೃತ್ತ ಉಪನ್ಯಾಸಕ ಎಂ.ಎಂ.ಸತೀಶ್ ಮಾತನಾಡಿ, ಶಿಕ್ಷಕರು ಉತ್ತಮ ಸಂಸ್ಕಾರ ನೀಡಿ ಮಕ್ಕಳ ಉಜ್ವಲ ಭವಿಷ್ಯ ರೂಪಿಸುತ್ತಾರೆ. ಆರೋಗ್ಯಕರ ಸಮಾಜ ನಿರ್ಮಾಣದಲ್ಲೂ ಶಿಕ್ಷಕರ ಪಾತ್ರ ಅವಿಸ್ಮರಣೀಯ ಎಂದರು. ಸಿ.ಆರ್.ಪಿ.ಕೆ.ಶಾಂತಕುಮಾರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಶಿಕ್ಷಕರು ಮತ್ತು ಪಾಲಕರ ಸಂಬಂಧ ಉನ್ನತೀಕರಣಗೊಂಡು ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮಗೊಳ್ಳಲು ಸಂಘಟಿತ ಪ್ರಯತ್ನ ಎಂದರು. ತಾಲ್ಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರ್, ವಿವಿಧ ಶಾಲಾ ಮುಖ್ಯ ಶಿಕ್ಷಕರಾದ ಎಚ್.ಎಸ್.ಸುಜಾತ, ಕೆ.ಡಿ.ನವೀನ, ಸಣ್ಣಕ್ಕ, ರಾಜಣ್ಣ, ಎನ್.ಡಿ.ಚಂದ್ರಿಕ, ರೇಣುಕ , ಶಿಕ್ಷಕಿ ಎಚ್.ವಿ.ಲತಾಮಣಿ ಅನಿಸಿಕೆ ವ್ಯಕ್ತಪಡಿಸಿದರು. ಶಾಲಾ ಶಿಕ್ಷಕರು ಇದ್ದರು. ತಾವು ಪ್ರೌಢಶಾಲೆಯ ಶಿಕ್ಷಕರಾಗಿ ಹಾಗೂ ಬಿ.ಆರ್.ಸಿ.ಕೇಂದ್ರದಲ್ಲಿ ಸೇವೆ ಸಲ್ಲಿಸಿದ ಕುರಿತು ಎಂ.ಎಂ.ಸತೀಶ್ ಸ್ಮರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

ಮಿಯಾಮಿ (ಅಮೆರಿಕ)/ಬೆಂಗಳೂರು NEWS DESK, ಆ.25  : ಕೃತಕ ಬುದ್ಧಿಮತ್ತೆ, ಡಿಜಿಟಲ್ ಫೊರೆನ್ಸಿಕ್ಸ್, ರೋಬೋಟಿಕ್ಸ್ ಮತ್ತು ಕಂಪ್ಯೂಟರ್ ವಿಜ್ಞಾನ ಕ್ಷೇತ್ರದ…

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.