Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.22 : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ದುಬಾರೆ ಹಾಗೂ ಮತ್ತಿಗೋಡು ಶಿಬಿರದ ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ರಂಜನ್, ಭೀಮಾ, ಸುಗ್ರೀವ ಹಾಗೂ ಹರ್ಷನ ಸಹಕಾರದಿಂದ ಸತತ 5 ಗಂಟೆಗಳ ಕಾರ್ಯಾಚರಣೆಯ ಬಳಿಕ ಕಾಡಾನೆ ಸೆರೆಯಾಯಿತು. ಚೆಂಬೆಬೆಳ್ಳೂರು ಗ್ರಾಮದ ಕಾಫಿ ತೋಟವೊಂದರ ಸಮೀಪ ಕಂಡುಬoದ ಕಾಡಾನೆಗೆ ವನ್ಯಜೀವಿ ವೈದ್ಯಾಧಿಕಾರಿ ಡಾ.ರಮೇಶ್ ಹಾಗೂ ಕುಶಾಲನಗರ ಉಪ ಅರಣ್ಯಾಧಿಕಾರಿ ಶಾರ್ಪ್ ಶೂಟರ್ ಕನ್ನಂಡ ರಂಜನ್ ಅವರು ಬಂದೂಕಿನ ಮೂಲಕ ಅರವಳಿಕೆ ನೀಡಿದರು. ಸರೆಯಾದ ಕಾಡಾನೆಯನ್ನು ಸಾಕಾನೆಗಳ ಸಹಕಾರದಿಂದ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ಚೆoಬೆಬೆಳ್ಳೂರು, ದೇವಣಗೇರಿ, ಬೆಳ್ಳರಿಮಾಡು, ಕುಕ್ಲೂರು, ಪೊದಕೋಟೆ, ಐಮಂಗಲ, ಮೈತಾಡಿ, ಕದನೂರು, ಬಿಳುಗುಂದ, ಹಾಲುಗುಂದ ಹಾಗೂ ಅಮ್ಮತಿ ಸುತ್ತಮುತ್ತಲ ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ತೋಟಗಳಲ್ಲಿ ದಾಂಧಲೆ ನಡೆಸಿ ಕೃಷಿ ಫಸಲು ನಷ್ಟಕ್ಕೆ ಕಾರಣವಾಗಿತ್ತು ಮತ್ತು ಸ್ಥಳೀಯರ ಮೇಲೆ ದಾಳಿಗೂ ಯತ್ನಿಸಿತ್ತು. ಗ್ರಾಮಸ್ಥರ ಒತ್ತಾಯದ ಹಿನ್ನೆಲೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾಡಾನೆ ಸೆರೆಗೆ ಸೂಚನೆ ನೀಡಿದ್ದರು.
ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಣಿ ಹಾಗೂ ವೀರಾಜಪೇಟೆ ತಾಲ್ಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು. ಮಡಿಕೇರಿ ಡಿಸಿಎಫ್ ರಮೇಶ್, ಎಸಿಎಫ್ ಗೋಪಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಮ್, ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್, ಡಾ.ಚೆಟ್ಟಿಯಪ್ಪ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ನೂರಕ್ಕೂ ಅಧಿಕ ಮಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಲ್ಲಿ…

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.