Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಾ.25ರಂದು ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ : ಕೊಡಗಿನಿಂದ 500 ಕ್ಕೂ ಅಧಿಕ ಮಂದಿ ಭಾಗಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಾ.25ರಂದು ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ : ಕೊಡಗಿನಿಂದ 500 ಕ್ಕೂ ಅಧಿಕ ಮಂದಿ ಭಾಗಿ

ಮಾರ್ಚ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಮಾ.23 : ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ತಿರಸ್ಕರಿಸಿ ಒಳಮೀಸಲಾತಿ ರಹಿತ ಹಳೆ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ವತಿಯಿಂದ ಮಾ.25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಗುವುದು ಎಂದು ಒಕ್ಕೂಟದ ಜಿಲ್ಲಾ ಸಂಚಾಲಕ ಮೋಹನ್ ಮೌರ್ಯ ಸಿ.ಜೆ ಹಾಗೂ ಮಡಿಕೇರಿ ಸಂಚಾಲಕ ಎಸ್.ಸಿ.ಸತೀಶ್ ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾವೇಶದಲ್ಲಿ ಕೊಡಗು ಜಿಲ್ಲೆಯಿಂದ 500 ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗದ ವರದಿಯನ್ನು ರಾಜ್ಯ ಸರಕಾರ ತಿರಸ್ಕರಿಸಬೇಕು. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿಅoಶಗಳೊoದಿಗೆ ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರ ಆಯೋಗದ ಅಂಕಿ ಅಂಶಗಳನ್ನು ಹೋಲಿಕೆ ಮಾಡಬೇಕು. ವ್ಯತ್ಯಾಸಗಳು ಕಂಡುಬoದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳಬೇಕು.
ಯಾವುದೇ ಮಾನದಂಡವನ್ನು ಅನುಸರಿಸದೆ ರಾಜ್ಯ ಸರಕಾರ 3.09.2025ರಂದು ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯಬೇಕು. ಸಮಾಜ ಕಲ್ಯಾಣ ಇಲಾಖೆಯ 8.10.2025ರ ನಿರ್ದೇಶನದಂತೆ ಜಾತಿ ಪ್ರಮಾಣ ಪತ್ರಗಳನ್ನು ಪ್ರವರ್ಗ – ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿರುವುದನ್ನು ಹಿಂಪಡೆದು ಮೂಲ ಜಾತಿಗಳನ್ನು ನಮೂದಿಸಿ ಜಾತಿ ಪ್ರಮಾಣ ಪತ್ರಗಳನ್ನು ನೀಡಲು ಸೂಕ್ತ ಆದೇಶ ಹೊರಡಿಸಬೇಕು. ಪರಿಶಿಷ್ಟ ಜಾತಿ ಸಮುದಾಯಕ್ಕೆ ಈಗಾಗಲೇ ನೀಡಿರುವ ಖಾಯಂ ಜಾತಿ ಪ್ರಮಾಣ ಪತ್ರಗಳನ್ನು ಹೊಸ ಜಾತಿ ಪ್ರಮಾಣ ಪತ್ರಗಳೊಂದಿಗೆ ಪರಿಗಣಿಸಲು ಆದೇಶ ನೀಡಬೇಕು. ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳನ್ನು ಬಲಗೈ ಗುಂಪಿನಲ್ಲಿ ಉದ್ಯೋಗ, ಶಿಕ್ಷಣ ಮತ್ತು ಇತರೆ ಸೌಲಭ್ಯ ಪಡೆಯಲು ಅಧಿಸೂಚನೆ ಹೊರಡಿಸಬೇಕು. ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ದೇಶ ಪೂರ್ವಕವಾಗಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ಮಾಡಿರುವ ಆಯೋಗದ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಬೇಕು. 27.03.2026ರಂದು ನಡೆಯುವ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಶೇಕಡ 15+3ರ ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಅಳವಡಿಸಬಾರದು. ಎಂಬಿತ್ಯಾದಿ ಬೇಡಿಕೆಗಳನ್ನು ಸಮಾವೇಶದಲ್ಲಿ ಮಂಡಿಸಲಾಗುವುದು ಎಂದು ಮೋಹನ್ ಮೌರ್ಯ ಸಿ.ಜೆ ಹಾಗೂ ಎಸ್.ಸಿ.ಸತೀಶ್ ತಿಳಿಸಿದ್ದಾರೆ. ರಾಜ್ಯ ಸರಕಾರ ಈ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದಿದಲ್ಲಿ ಹೋರಾಟ ತೀವ್ರಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.