Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
  • *ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*
  • *ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.23 NEWS DESK : ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಕಾರ್ಯ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರ ಅಧಿಕಾರವಧಿಯಲ್ಲೇ ನಡೆದಿದೆ. ಆದರೆ ಕಾಂಗ್ರೆಸ್ಸಿಗರು ಕಳೆದ 20 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಸುಳ್ಳು ಹೇಳಿಕೆ ನೀಡುವ ಮೂಲಕ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 2016ರಲ್ಲಿ ಆಗಿನ ಶಾಸಕರಾದ ಕೆ.ಜಿ.ಬೋಪಯ್ಯ ಅವರು ವಿರಾಜಪೇಟೆ- ಕರಡ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಿ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ದರ್ಜೆಯ ರಸ್ತೆಯನ್ನು ನಿರ್ಮಾಣ ಮಾಡಲು ಅಡಿಗಲ್ಲು ಹಾಕಿದರು. ಇದೇ ಅವಧಿಯಲ್ಲಿ 3 ಕಿ.ಮೀ ಉತ್ತಮ ರಸ್ತೆಯನ್ನು ಮರು ಡಾಂಬರೀಕರಣ ಮಾಡಿ ಅನುಕೂಲ ಕಲ್ಪಿಸಿಕೊಟ್ಟರು. ಇದೀಗ ಕಾಂಗ್ರೆಸ್ ಸರಕಾರ ಬಂದ ನಂತರ ಕಳೆದ ಮೂರು ವರ್ಷಗಳಲ್ಲಿ ಒಂದು ಕಿ.ಮೀ 350 ಮೀಟರ್ ರಸ್ತೆಯನ್ನು ನಿರ್ಮಾಣ ಮಾಡಿ ಕಳೆದ 20 ವರ್ಷಗಳಿಂದ ಇಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಗ್ರಾ.ಪಂ ಮಾಜಿ ಸದಸ್ಯರು ನೀಡಿರುವ ಹೇಳಿಕೆ ಬಾಲಿಶವಾಗಿದೆ ಎಂದು ಟೀಕಿಸಿದ್ದಾರೆ. ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ನೂರಾರು ಕೋಟಿ ರೂ. ಅನುದಾನವನ್ನು ತಂದು ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ಇದರ ಪರಿಣಾಮ ಗ್ರಾಮೀಣ ರಸ್ತೆಗಳು ಕೂಡ ಅಭಿವೃದ್ಧಿಯಾಗಿವೆ. ಕೆದಮುಳ್ಳೂರು- ಕಡಂಗ ರಸ್ತೆಯನ್ನು ಲೋಕೋಪಯೋಗಿ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಿದ ಹೆಗ್ಗಳಿಕೆ ಕೆ.ಜಿ.ಬೋಪಯ್ಯ ಅವರಿಗೆ ಸಲ್ಲುತ್ತದೆ. ಸುಮಾರು 13.5 ಕಿ.ಮೀ ರಸ್ತೆಯನ್ನು ಡಾಂಬರೀಕರಣ ಮಾಡಲಾಗಿತ್ತು. ಉಳಿದ ಕೇವಲ ಒಂದೂವರೆ ಕಿ.ಮೀ ರಸ್ತೆಯನ್ನು ಪೂರ್ಣಗೊಳಿಸಲು ಮೂರು ವರ್ಷ ಕಾದಿರುವ ಈಗಿನ ಕಾಂಗ್ರೆಸ್ ಸರಕಾರ ಕೊಡಗಿನಲ್ಲಿ ಯಾವುದೇ ಹೊಸ ರಸ್ತೆ ಕಾಮಗಾರಿಯನ್ನು ನಿರ್ವಹಿಸದೆ ಸಾರ್ವಜನಿಕರ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕೆ.ಜಿ.ಬೊಪ್ಪಯ್ಯ ಅವರು ಜನಪರ ಕಾಳಜಿಯಿಂದ ಕೋಟ್ಯಾಂತರ ಅನುದಾನದಲ್ಲಿ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕೇವಲ ರಾಜಕೀಯ ಕಾರಣಕ್ಕಾಗಿ ಇವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಬಹುಮತದ ಕಾಂಗ್ರೆಸ್ ಸರಕಾರವಿದ್ದು, ಉಳಿದಿರುವ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆ ಹೊರತು ಕೇವಲ ಪ್ರಚಾರಕ್ಕಾಗಿ ಜನರ ಹಾದಿ ತಪ್ಪಿಸಬಾರದು ಎಂದು ಒತ್ತಾಯಿಸಿದ್ದಾರೆ. ಗ್ರಾಮಕ್ಕೆ ಹೊಸ ಯೋಜನೆಗಳನ್ನು ತಂದು ಅಭಿವೃದ್ಧಿ ಕಾರ್ಯದಲ್ಲಿ ತೊಡಗುವ ಜನಪ್ರತಿನಿಧಿಗಳ ಬಗ್ಗೆ ನಮಗೆ ಗೌರವವಿದೆ. ಈಗಾಗಲೇ ಗ್ರಾ.ಪಂ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಅತ್ಯಂತ ಗೌರವದಿಂದ ಸ್ವಾಗತಿಸುತ್ತೇವೆ, ಇದಕ್ಕೆ ಸಹಕರಿಸಿದ ಶಾಸಕರನ್ನು ಅಭಿನಂದಿಸುತ್ತೇವೆ. ಉತ್ತಮ ಕಾರ್ಯಗಳಿಗೆ ನಾವು ಸದಾ ನಿಮ್ಮ ಜೊತೆಗಿರುತ್ತೇವೆ. ಆದರೆ ಯಾವುದೇ ಅಭಿವೃದ್ಧಿ ಮಾಡದೆ ಹಳೆಯ ಕಾಮಗಾರಿಯನ್ನು ಮುಂದುವರಿಸಿ ಇದುವರೆಗೆ ಯಾವುದೇ ಪೂರ್ಣ ಪ್ರಮಾಣದ ಹೊಸ ಕೆಲಸ ಮಾಡದೆ ಕಾಲಹರಣ ಮಾಡುತ್ತಾ ಜನರ ಹಾದಿ ತಪ್ಪಿಸುವ ಹೇಳಿಕೆಗಳನ್ನು ನೀಡುವುದನ್ನು ಖಂಡಿಸುವುದಾಗಿ ಎಂ.ಎಂ.ಪರಮೇಶ್ವರ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.23 NEWS DESK : ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ…

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026

*ಶ್ರೀ ವಿನಾಯಕ ಸೇವಾ ಟ್ರಸ್ಟ್ ನಿಂದ ಶ್ರೀ ರಾಮನವಮಿ ಆಚರಣೆ : ಮಾ.26ಕ್ಕೆ ವಾರ್ಷಿಕ ಮಹಾಸಭೆ*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಮಾ.29 ರಿಂದ ಶ್ರೀ ಕಿಲೇರಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ*

ಮಾರ್ಚ್ 23, 2026

*ಮಾ.25ರಂದು ಬಲಗೈ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಸಮಾವೇಶ : ಕೊಡಗಿನಿಂದ 500 ಕ್ಕೂ ಅಧಿಕ ಮಂದಿ ಭಾಗಿ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.