Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ

ಮಾರ್ಚ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮಾ.23 NEWS DESK : ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷರಾದ ಟಿ.ಕೆ.ಪಾಂಡರಂಗ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದಿನ ಜಾಗತೀಕರಣ ಯುಗದಲ್ಲಿಯೂ ಸಹ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಕೈಮಗ್ಗ ಉತ್ಪನ್ನಗಳನ್ನು ಉಳಿಸಿ ಬೆಳೆಸಬೇಕು. ಆ ನಿಟ್ಟಿನಲ್ಲಿ ಸರ್ಕಾರ ಕೈಜೋಡಿಸಬೇಕು ಎಂದು ಅವರು ಕೋರಿದರು. ಸರ್ಕಾರಿ ಆಸ್ಪತ್ರೆಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಸರ್ಕಾರದ ಅಂಗ ಸಂಸ್ಥೆಗಳಿಗೆ ಬೆಡ್‍ಶೀಟ್, ಟವಲ್, ಮ್ಯಾಟ್ ಮತ್ತಿತರ ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿದಲ್ಲಿ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಬರಲಿದೆ. ಇದರಿಂದ ಸ್ಥಳೀಯವಾಗಿ ಸ್ವ ಉದ್ಯೋಗ ದೊರೆಯಲಿದೆ ಎಂದು ಅವರು ಸಲಹೆ ಮಾಡಿದರು. ನೇಕಾರರ ಬದುಕು ಹಸನುಗೊಳಿಸುವಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಪಾಂಡುರಂಗ ಅವರು ಸಲಹೆ ಮಾಡಿದರು. ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಕಾರ್ಯದರ್ಶಿ ನಾಗರಾಜ ಶೆಟ್ಟಿ ಅವರು ಮಾತನಾಡಿ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ, ವೃತ್ತ, ಮತ್ತಿತರ ಕಡೆಗಳಲ್ಲಿ ದೇವರ ದಾಸಿಮಯ್ಯ ಅವರ ಹೆಸರು ಇಡುವಂತಾಗಬೇಕು. ಜೊತೆಗೆ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಕೋರಿದರು. ದೇವರ ದಾಸಿಮಯ್ಯ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೂ ತಿಳಿಸುವಂತಾಗಲು ಈ ಕಾರ್ಯಗಳು ಆಗಬೇಕು ಎಂದು ನಾಗರಾಜಶೆಟ್ಟಿ ಅವರು ಮನವಿ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್ ಅವರು ಮಾತನಾಡಿ ದೇವರ ದಾಸಿಮಯ್ಯ ಅವರು 176 ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ ಎಂದು ತಿಳಿಸಿದರು. ರಾಷ್ಟ್ರಕವಿ ಗೋವಿಂದ ಪೈ ಅವರು ದೇವರ ದಾಸಿಮಯ್ಯ ಬಗ್ಗೆ ಸಂಶೋಧನಾ ಕೃತಿಗಳನ್ನು ಅಧ್ಯಯನ ಮಾಡಿ ವಿವರಿಸಿದ್ದಾರೆ ಎಂದು ಹೇಳಿದರು. ದೇವರ ದಾಸಿಮಯ್ಯ ಅವರು ವಚನಗಳ ಮೂಲಕ ಸಮಾಜವನ್ನು ತಿದ್ದಲು ಶ್ರಮಿಸಿದ್ದಾರೆ. ಪ್ರತಿಯೊಬ್ಬರೂ ದೇವರ ದಾಸಿಮಯ್ಯ ಅವರ ಚಿಂತನೆಗಳು, ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು. ದೇವರ ದಾಸಿಮಯ್ಯ ಅವರು ಶಿವ ಭಕ್ತರಾಗಿ, ಹರಿ ಭಕ್ತರಾಗಿ ಕೈಮಗ್ಗ ಕಾಯಕ ಮಾಡಿದ್ದಾರೆ. ಸಮಾಜದ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು. ‘ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, “ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ. ಎಂದೆನ್ನುವ ದಾಸಿಮಯ್ಯನಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ’ ಎಂದು ದೇವರ ದಾಸಿಮಯ್ಯ ಅವರ ವಚನಗಳನ್ನು ವಾಚಿಸಿದರು. ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಡಿ.ನಾಗೇಶ್ ಕುಮಾರ್ ಅವರು ಮಾತನಾಡಿ 10, 11 ನೇ ಶತಮಾನದಲ್ಲಿಯೇ ದೇವರ ದಾಸಿಮಯ್ಯ ಅವರು ಕೈಮಗ್ಗ ಚಟುವಟಿಕೆಯಲ್ಲಿ ಕಾಯಕ ಕಾಣುವ ಮೂಲಕ ಮಾನವನ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ದೇವರ ದಾಸಿಮಯ್ಯ ಅವರು ನೇಕಾರಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಆ ನಿಟ್ಟಿನಲ್ಲಿ ನೇಕಾರ ವೃತ್ತಿಯನ್ನು ಗೌರವಿಸಬೇಕು ಎಂದು ಹೇಳಿದರು. ನೇಕಾರಿಕೆಯು ಅನಾದಿಕಾಲದಿಂದಲೂ ಬಂದಿದ್ದು, ಇತಿಹಾಸವನ್ನು ಮೆಲುಕು ಹಾಕಬೇಕು ಎಂದು ನಾಗೇಶ್ ಕುಮಾರ್ ಅವರು ತಿಳಿಸಿದರು. ನೇಕಾರಿಕೆ ಮಹಿಳಾ ಘಟಕದ ಅಧ್ಯಕ್ಷರಾದ ಸವಿತಾ ಅವರು ಮಾತನಾಡಿ ದೇವರ ದಾಸಿಮಯ್ಯ ಅವರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಮರೆಯಬಾರದು ಎಂದು ಅವರು ತಿಳಿಸಿದರು. ತಹಶೀಲ್ದಾರ್ ಕಚೇರಿಯ ಶಿರಸ್ತೆದಾರ್ ದೇವರಾಜು, ಪ್ರಮುಖರಾದ ಚೌಡೇಶ್ವರಿ ದೇವಾಲಯದ ಸಮಿತಿ ಅಧ್ಯಕ್ಷರಾದ ಗಜಾನನ, ಪದ್ಮ ಮೋಹನ್, ಭಾರತಿ ರಮೇಶ್, ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷರಾದ ಡಿ.ವಿ.ಜಗದೀಶ, ರಮೇಶ್, ಇತರರು ಇದ್ದರು. ಲೋಕೇಶ್ ಸಾಗರ್ ಮತ್ತು ಭಾರತಿ ರಮೇಶ್ ತಂಡದವರು ನಾಡಗೀತೆ ಹಾಗೂ ನೇಕಾರಿಕೆ ಗೀತೆ ಹಾಡಿ ಗಮನ ಸೆಳೆದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.