
ಮಡಿಕೇರಿ ಮಾ.24 NEWS DESK : ಕೊಡಗು ಮೈಸೂರು ಸಂಸದರಾದ ಯದುವೀರ್ ಒಡೆಯರ್ ಅವರ ಜನ್ಮದಿನದ ಪ್ರಯುಕ್ತ ಕೊಡಗು ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಎಂ.ಪಿ.ಸುನಿಲ್ ಸುಬ್ರಮಣಿ ಅವರ ನೇತೃತ್ವದಲ್ಲಿ ನಗರದ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಸದರ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ಪ್ರಮುಖರಾದ ಉಪಾಧ್ಯಕ್ಷ ಬಿ.ಕೆ.ಜಗದೀಶ್, ಪಿ.ಎಂ.ರವಿ, ಬೊಳ್ಳಜಿರ ಬಿ ಅಯ್ಯಪ್ಪ ಮತ್ತಿತರರು ಹಾಜರಿದ್ದರು.









