Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ

ಮಾರ್ಚ್ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.24 NEWS DESK : ಜಿಲ್ಲೆಯಲ್ಲಿ ಒಂದು ಲಕ್ಷ ಜನಸಂಖ್ಯೆಗೆ 79 ಕ್ಷಯ ರೋಗಿಗಳಿದ್ದು, ಇನ್ನೂ ಎರಡು ವರ್ಷದಲ್ಲಿ ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್ ಅವರು ತಿಳಿಸಿದ್ದಾರೆ.
ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ವಿಶ್ವ ಕ್ಷಯರೋಗ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮುಂದಿನ ಒಂದು ವರ್ಷದಲ್ಲಿ ಒಂದು ಲಕ್ಷ ಜನರಿಗೆ ನಲ್ವತ್ತಕ್ಕಿಂತ ಕಡಿಮೆ ಕ್ಷಯ ರೋಗಿಗಳು ಕಂಡುಬರಲಿದ್ದು, ಸಂಪೂರ್ಣವಾಗಿ ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಅವರು ಕೋರಿದರು. ಕ್ಷಯರೋಗವನ್ನು ತಡೆಯುವಲ್ಲಿ 6 ರಿಂದ 7 ಲಕ್ಷ ರೂ. ವರೆಗೆ ಒಬ್ಬ ರೋಗಿಗೆ ಸರ್ಕಾರ ಭರಿಸಿ ಅತ್ಯುತ್ತಮ ಚಿಕಿತ್ಸೆ ನೀಡಲಿದೆ ಎಂದು ಡಾ.ಸನತ್ ಕುಮಾರ್ ಅವರು ಹೇಳಿದರು. ಮುಂದಿನ ಪೀಳಿಗೆ ಕ್ಷಯ ರೋಗದಿಂದ ಬಳಲಬಾರದು, ಮೊಬೈಲ್ ಎಕ್ಸೆರೆ ಮೂಲಕವೂ ಕ್ಷಯವನ್ನು ಪತ್ತೆ ಹಚ್ಚಲಾಗುತ್ತಿದೆ, ಕಫ ಪರೀಕ್ಷೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಅವರು ಹೇಳಿದರು. ‘ಜಿಲ್ಲೆಯ ಸೂಕ್ಷ್ಮ ಪ್ರದೇಶಗಳ ಮನೆ ಮನೆಗೆ ಭೇಟಿ ನೀಡಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯಕ್ರಮವು ಮಂಗಳವಾರದಿಂದ 100 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಕ್ಷಯರೋಗ ಪತ್ತೆ ಹಚ್ಚುವುದರ ಜತೆಗೆ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಅವರು ತಿಳಿಸಿದರು.’ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಅವರು ಮಾತನಾಡಿ, ಕ್ಷಯರೋಗವನ್ನು ನಿಯಂತ್ರಿಸುವಲ್ಲಿ ಹಾಗೆಯೇ ಮತ್ತೊಬ್ಬರಿಗೆ ಕ್ಷಯ ರೋಗ ಹರಡದಂತೆ ಮುನ್ನೆಚ್ಚರ ವಹಿಸುವಲ್ಲಿ ಮಾಹಿತಿ, ಶಿಕ್ಷಣ ನೀಡಲಾಗುತ್ತಿದೆ ಎಂದರು. ರಸಪ್ರಶ್ನೆ ಹಾಗೂ ರಂಗೋಲಿ ಸ್ಪರ್ಧೆ ಮೂಲಕ ಕ್ಷಯರೋಗ ನಿಯಂತ್ರಣ ಸಂಬಂಧ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗಿದೆ ಎಂದು ಡಾ.ರಾಮಚಂದ್ರ ಕಾಮತ್ ಅವರು ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆಗೆ ನೂತನ ವಿಧಾನವನ್ನು ಅಳವಡಿಸಿಕೊಂಡು ಕ್ಷಯರೋಗ ನಿಯಂತ್ರಣಕ್ಕೆ ಶ್ರಮಿಸಲಾಗುತ್ತಿದೆ ಎಂದರು. ಕ್ಷಯರೋಗ ನಿರ್ಮೂಲನೆ ಮಾಡುವಲ್ಲಿ ಅನೇಕ ನೂತನ ರೂಪುರೇಷೆಗಳನ್ನು ಹಾಕಿಕೊಂಡು ಸಮರೋಪಾದಿಯಲ್ಲಿ ಕಾರ್ಯಗತ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ನುಡಿದರು. ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಪತಿ ರವೀಂದ್ರ ರೈ ಅವರು ಮಾತನಾಡಿ, ರೆಡ್‍ಕ್ರಾಸ್ ಸಂಸ್ಥೆಯು ಆರೋಗ್ಯ ಸೇರಿದಂತೆ ವಿವಿಧ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು. ಯುದ್ಧ, ಕೋವಿಡ್ ಮತ್ತಿತರ ಸಂದರ್ಭದಲ್ಲಿ ನಾಗರಿಕರಿಗೆ ಸಾಧ್ಯವಾದಷ್ಟು ಸಹಕಾರ ನೀಡುತ್ತ ರೆಡ್‍ಕ್ರಾಸ್ ಸಂಸ್ಥೆ ಮುಂದೆ ಬಂದಿದೆ ಎಂದು ಅವರು ವಿವರಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್ ಅವರು ಮಾತನಾಡಿ, ಕ್ಷಯರೋಗ ಮುಕ್ತಗೊಳಿಸುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಹೆಚ್ಚಿನದ್ದಾಗಿದೆ. ಆರೋಗ್ಯಯುತ ಸಮಾಜ ನಿರ್ಮಾಣ ಮಾಡುವಲ್ಲಿ ತಂಡವಾಗಿ ಕೆಲಸ ಮಾಡಬೇಕಿದೆ ಎಂದು ಸಲಹೆ ಮಾಡಿದರು. ಕ್ಷಯರೋಗವು ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಮುನ್ನೆಚ್ಚರ ವಹಿಸಬೇಕು ಎಂದರು. ರಂಗೋಲಿ ಹಾಗೂ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಹಾಗೆಯೇ 2025ನೇ ಸಾಲಿನ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಬಲ್ಲಮಾವಟಿ ಮತ್ತು ಕಾಕೋಟುಪರಂಬು ಗ್ರಾ.ಪಂ.ಗಳಿಗೆ ಚಿನ್ನದ ಪದಕ, ಮೂರು ಗ್ರಾ.ಪಂ.ಗಳಿಗೆ ಬೆಳ್ಳಿ ಪದಕ ಹಾಗೂ 24 ಗ್ರಾ.ಪಂ.ಗಳಿಗೆ ಕಂಚಿನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಅರುಣ್ ಕುಮಾರ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗದ ಮುಖ್ಯಸ್ಥರು, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಿಡಿಒಗಳು, ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳು ಇತರರು ಇದ್ದರು. ಕ್ಷಯ ರೋಗ ವಿಭಾಗದ ಮೇಲ್ವಿಚಾರಕರಾದ ಎಂ.ಮಹದೇವಪ್ಪ, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಡಳಿತ ಮನವಿ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ಹಸಿರು ಪಟಾಕಿಗಳ ಬಳಕೆ ಕಡ್ಡಾಯ

ನವೆಂಬರ್ 5, 2026

ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್

ನವೆಂಬರ್ 5, 2026

ವನ್ಯಜೀವಿ ಹೆಜ್ಜೆ ಗುರುತು ಪತ್ತೆ

ನವೆಂಬರ್ 5, 2026

ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್

ನವೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.5: ಕೊಡಗು ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿನ ಜನರ ಸಂಸ್ಕೃತಿ, ಜೀವನಶೈಲಿ ಹಾಗೂ ಆಚಾರ-ವಿಚಾರಗಳು…

ವನ್ಯಜೀವಿ ಹೆಜ್ಜೆ ಗುರುತು ಪತ್ತೆ

ನವೆಂಬರ್ 5, 2026

ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಯ ಬರೆ: ಜನಸಾಮಾನ್ಯರು ಸಂಕಷ್ಟದಲ್ಲಿ – ರಾಷ್ಟ್ರಪತಿ ಆಳ್ವಿಕೆಗೆ ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ

ನವೆಂಬರ್ 5, 2026

ಸುಂಟಿಕೊಪ್ಪದಲ್ಲಿ ದಿವಂಗತ ಬಿ.ಜಿ. ರಘುನಾಥ್ ನಾಯ್ಕ ಸ್ಮಾರಕ ದತ್ತಿ ನಿಧಿ ಕಾರ್ಯಕ್ರಮ

ನವೆಂಬರ್ 5, 2026

ಸುಂಟಿಕೊಪ್ಪದಲ್ಲಿ ಸಮಸ್ಯೆಗಳ ಸರಮಾಲೆ: ವೇವ್ ಸಂಸ್ಥೆ ಅಸಮಾಧಾನ; ತ್ಯಾಜ್ಯ ವಿಲೇವಾರಿ, ಹದಗೆಟ್ಟ ರಸ್ತೆಗಳು, ವೈದ್ಯರ ಕೊರತೆಗೆ ಆಕ್ರೋಶ – ಸಮಸ್ಯೆ ಪರಿಹಾರವಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ

ನವೆಂಬರ್ 5, 2026

ಐದು ದಶಕಗಳ ಭತ್ತದ ಕೃಷಿ ಅನುಭವಕ್ಕೂ ಈ ಬಾರಿ ಕೈಕೊಟ್ಟ ಫಸಲು; ಆರ್‌ಎನ್‌ಆರ್ ಭತ್ತದ ತಳಿಯ ಇಳುವರಿ ಕುಸಿತ: ರೈತ ಪಟ್ಟೆಮನೆ ಉದಯಕುಮಾರ್ ಅಳಲು

ನವೆಂಬರ್ 5, 2026

ಪನ್ಯ ತೋಟದಲ್ಲಿ ಹುಲಿ ಅಥವಾ ಚಿರತೆ ಹೆಜ್ಜೆ ಗುರುತು ಪತ್ತೆ : ಸಾರ್ವಜನಿಕರಲ್ಲಿ ಆತಂಕ

ನವೆಂಬರ್ 5, 2026

ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವದ ಅಮೃತ ಮಹೋತ್ಸವ ಆಚರಣೆ; ಕೃತಕ ಬುದ್ಧಿಮತ್ತೆಯ ವ್ಯವಸ್ಥೆ ನಮಗೇ ಬುದ್ಧಿ ಕಲಿಸುವಂತಾಗಿದೆ: ಅನಿಲ್ ಹೆಚ್.ಟಿ. ಆತಂಕ

ನವೆಂಬರ್ 5, 2026

ಕುಶಾಲನಗರ ‘ಕೂಡಾ’ ನೂತನ ಸದಸ್ಯ ಕಾರ್ಯದರ್ಶಿಯಾಗಿ ಪಿ.ವಿ.ದೀಪಕ್ ಅಧಿಕಾರ ಸ್ವೀಕಾರ

ನವೆಂಬರ್ 5, 2026

ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.